ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bellary News: ಕೌಟುಂಬಿಕ ಕಲಹ; ಬಳ್ಳಾರಿಯಲ್ಲಿ ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ

ಕೌಟುಂಬಿಕ ಕಲಹದಿಂದ ನೊಂದು ಇಬ್ಬರು ಕಂದಮಗಳ ಜತೆ ಮಹಿಳೆಯು ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿಯ ಮಿಲ್ಲರ್‌ಪೇಟೆಯಲ್ಲಿ ನಡೆದಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಶವವನ್ನು ಹೊರ ತೆಗೆದಿದ್ದು, ಇಬ್ಬರು ಮಕ್ಕಳಿಗಾಗಿ ಶೋಧ ಮುಂದುವರಿಸಿದ್ದಾರೆ.

ಬಳ್ಳಾರಿಯಲ್ಲಿ ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ

-

Prabhakara R
Prabhakara R Oct 14, 2026 6:51 PM

ಬಳ್ಳಾರಿ: ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ಘಟನೆ ಬಳ್ಳಾರಿಯಲ್ಲಿ (Bellary) ನಡೆದಿದೆ. ನಗರದ ನಿವಾಸಿ ಲತಿಫಾ ಸಿಮ್ರಾನ್‌ (29) ಅವರ ಮೃತದೇಹವನ್ನು ಹೊರತೆಗೆಯಲಾಗಿದ್ದು, ಪುಟ್ಟ ಮಕ್ಕಳಾದ ಮೊಹಮದ್‌ ಅಯಾನ್‌ (3) ಮತ್ತು ಆಯಿಷ ಫಾತಿಮಾ (2) ಮೃತದೇಹಗಳಿಗಾಗಿ ಹುಡುಕಾಟ ನಡೆಯುತ್ತಿದೆ.

ಲತಿಫಾ ಸಿಮ್ರಾನ್‌ ಕೌಟುಂಬಿಕ ಕಲಹದಿಂದ ನೊಂದು ಇಬ್ಬರು ಕಂದಮಗಳನ್ನು ಎತ್ತಿಕೊಂಡು ನಿನ್ನೆ ಮನೆಯಿಂದ ಹೊರಗೆ ಹೋಗಿ, ಬಳ್ಳಾರಿಯ ಮಿಲ್ಲರ್‌ಪೇಟೆ ಕಾಲುವೆಗೆ ಮಕ್ಕಳೊಂದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾತ್ರಿಯಾದರೂ ಮನೆಗೆ ಪತ್ನಿ, ಮಕ್ಕಳು ಬಾರದಿದ್ದಾಗ ಎಲ್ಲಾಕಡೆ ಹುಡುಕಾಡಿದಾಗ ಕಾಲುವೆಗೆ ಹಾರಿ ಆತಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಇಂದು ಬೆಳಗ್ಗೆ ಕಾಲುವೆಯಲ್ಲಿ ಮಹಿಳೆಯ ಮೃತದೇಹ ತೇಲುತ್ತಿರುವುದನ್ನು ಕಂಡು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಿಳೆಯ ಶವವನ್ನು ಹೊರ ತೆಗೆದಿದ್ದು, ಇಬ್ಬರು ಮಕ್ಕಳಿಗಾಗಿ ಶೋಧ ಮುಂದುವರಿಸಿದ್ದಾರೆ.

ಜಾಮೀನಿನ ಮೇಲೆ ಹೊರಗೆ ಬಂದಿದ್ದ ಯುವಕನ ಭೀಕರ ಹತ್ಯೆ

ದಾವಣಗೆರೆ: ಚಾಕುವಿನಿಂದ ಇರಿದು ಯುವಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ದುರ್ಗಿಗುಡಿ ಪ್ರದೇಶಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಅಮಿತ್ (27) ಕೊಲೆಯಾದ ಯುವಕ.

ಗಣೇಶ್ ಕೊಲೆ ಮಾಡಿದ ಪ್ರಮುಖ ಆರೋಪಿ ಎಂದು ದೂರಲಾಗಿದೆ.‌ ಹೊಸಕೇರಿ ಏರಿಯಾದ ನಿವಾಸಿಯಾಗಿದ್ದ ಅಮಿತ್, ಹೊನ್ನಾಳಿ ಪುರಸಭೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಚಾಲಕನಾಗಿ ಕೆಲಸ ಮಾಡುತ್ತಿದ್ದ.

ಅಮಿತ್ ಕಳೆದ ರಾತ್ರಿ ತಾಯಿಯ ಜತೆ ದುರ್ಗಿಗುಡಿಯ ಬನ್ನಿ ಮಹಾಂಕಾಳಿ ದೇವಸ್ಥಾನಕ್ಕೆ ಬಂದಿದ್ದ. ಈ ವೇಳೆ ದುಷ್ಕರ್ಮಿಗಳು ಈತನ ಕಣ್ಣಿಗೆ ಖಾರದಪುಡಿ ಎರಚಿ, ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಅಮಿತನನ್ನು ಶಿವಮೊಗ್ಗದ‌ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗುತ್ತಿತ್ತು. ಆದರೆ, ಮಾರ್ಗಮಧ್ಯದಲ್ಲಿ ಅಮಿತ್ ಮೃತಪಟ್ಟಿದ್ದು, ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹ ಇರಿಸಲಾಗಿದೆ. ಘಟನೆ ಬಳಿಕ ಆರೋಪಿ ಗಣೇಶ್ ಸ್ಥಳದಿಂದ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಸಂಬಂಧ ಮೃತನ ತಾಯಿ ನಾಗರತ್ನಮ್ಮ ಅವರು ಹೊನ್ನಾಳಿ ‌ಪೊಲೀಸ್ ಠಾಣೆಯಲ್ಲಿ ಗಣೇಶ್ ಸೇರಿದಂತೆ ಒಟ್ಟು ಆರು ಜನರ ವಿರುದ್ಧ ದೂರು ದಾಖಲು ಮಾಡಿದ್ದಾರೆ ಎಂದು ಪಿಐ ಸುನೀಲ್ ಕುಮಾರ್ ಮಾಹಿತಿ ನೀಡಿದ್ದಾರೆ.

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಹಿಂದೆ ಅಮಿತ್​ ಮತ್ತು ಗಣೇಶ್ ನಡುವೆ ಗಲಾಟೆಯಾಗಿತ್ತು. ಗಲಾಟೆ ವೇಳೆ ಅಮಿತನು ಗಣೇಶನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದ. ಕಳೆದ ಎರಡು ತಿಂಗಳ ಹಿಂದೆ‌ಯಷ್ಟೇ ಅಮಿತ್ ಜಾಮೀನಿನ ಮೇಲೆ ಹೊರಗೆ ಬಂದಿದ್ದ.