ಬಳ್ಳಾರಿ: ಬಳ್ಳಾರಿ ಗಲಭೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲೆಯ ಪ್ರಮುಖ ನಾಯಕರು ಮತ್ತು ಅಧಿಕಾರಿಗಳೊಂದಿಗೆ ಶನಿವಾರ ತುರ್ತು ಸಭೆ ನಡೆಸಿದ್ದಾರೆ. ತೋರಣಗಲ್‌ನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಶಾಸಕ ಭರತ್ ರೆಡ್ಡಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅವರು ಸಿಎಂ ಅವರನ್ನು ಭೇಟಿಯಾಗಿ, ನಗರದಲ್ಲಿ ನಡೆದ ಘರ್ಷಣೆ (Bellary Clash) ಮತ್ತು ನಂತರ ನಡೆದ ಬೆಳವಣಿಗೆಗಳ ಬಗ್ಗೆ ವಿವರಿಸಿದ್ದಾರೆ.
ಮುಖ್ಯಮಂತ್ರಿಗಳು ಕೇವಲ ರಾಜಕೀಯ ನಾಯಕರಲ್ಲದೆ, ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳಿಂದಲೂ ಘಟನೆಯ ವರದಿಯನ್ನು ಪಡೆದಿದ್ದಾರೆ. ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ, ಬಳ್ಳಾರಿ ವಲಯದ ಐಜಿ ವರ್ತಿಕಾ ಕಟಿಯಾರ್ ಹಾಗೂ ದಾವಣಗೆರೆ ವಲಯದ ಐಜಿ ರವಿಕಾಂತೇಗೌಡ ಅವರು ಸಿಎಂಗೆ ಘಟನೆಯ ಬೆಳವಣಿಗೆಗಳ ಬಗ್ಗೆ ವಿವರಿಸಿದ್ದಾರೆ. ಗುಂಡಿನ ದಾಳಿ, ಎಸ್ಪಿಯವರ ಅಮಾನತು ಹಾಗೂ ಸದ್ಯದ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ವೇಳೆ ತನಿಖೆ ಪಾರದರ್ಶಕವಾಗಿ ನಡೆಸಿ ಎಂದು ಸಿಎಂ ಸೂಚಿಸಿದ್ದಾರೆ ಎನ್ನಲಾಗಿದೆ.
ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ನೆರವು ನೀಡಿದ ಸಚಿವ ಜಮೀರ್ ಅಹ್ಮದ್

ಬಳ್ಳಾರಿ: ನಗರದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ನಡೆದ ಗಲಭೆಯಲ್ಲಿ ಮೃತಪಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ನಿವಾಸಕ್ಕೆ ಸಚಿವ ಜಮೀರ್ ಅಹ್ಮದ್ (Zameer Ahmed Khan) ಅವರು ಶನಿವಾರ ತೆರಳಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, 25 ಲಕ್ಷ ರೂ. ಆರ್ಥಿಕ ನೆರವು ನೀಡಿದ್ದಾರೆ. ಈ ವೇಳೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ರಾಜಶೇಖರ್ ಅವರು ಇಡೀ ಮನೆಗೆ ಆಧಾರ ಸ್ತಂಭವಾಗಿದ್ದರು. ಇದೀಗ ಅವರನ್ನು ಕಳೆದುಕೊಂಡು ಕುಟುಂಬ ಸಂಕಷ್ಟದಲ್ಲಿದೆ. ಅವರಿಗೆ ನಾನು ವೈಯಕ್ತಿಕವಾಗಿ ಆರ್ಥಿಕ ನೆರವನ್ನು ನೀಡಿದ್ದೇನೆ. ಮುಂದೆಯೂ ನೀಡುವುದಾಗಿ ತಿಳಿಸಿದರು.
ಬಳ್ಳಾರಿ ಗಲಭೆ ಬಗ್ಗೆ ಎಚ್.ಡಿ. ದೇವೇಗೌಡರ ಕಳವಳ; ಡಿಕೆಶಿ ಹೇಳಿಕೆ ಸ್ವಾಗತಿಸಿದ ಮಾಜಿ ಪ್ರಧಾನಿ
ಇದೇ ವೇಳೆ ಮೃತ ಕಾರ್ಯಕರ್ತನ ತಾಯಿ ತುಳಸಿ ಅವರು, ಸರ್ಕಾರದಿಂದ ಮನೆ ನೀಡುವಂತೆ ಮನವಿ ಮಾಡಿಕೊಂಡರು. ಅದಕ್ಕೆ ಒಪ್ಪಿದ ಜಮೀರ್, ಸರ್ಕಾರದಿಂದ ಮನೆ ಕಟ್ಟಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.