ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಮದುವೆಗೆ ಒಪ್ಪದ ಪ್ರಿಯಕರ; ಬಳ್ಳಾರಿಯಲ್ಲಿ ವಿಡಿಯೊ ಮಾಡುತ್ತಲೇ ವಿವಾಹಿತ ಮಹಿಳೆ ಆತ್ಮಹತ್ಯೆ

Bellary News: ಮಹಿಳೆಗೆ ಈಗಾಗಲೇ ಮದುವೆಯಾಗಿ ಮಕ್ಕಳಿದ್ದು, ಪತಿಯಿಂದ ದೂರವಿದ್ದಳು. ಈ ನಡುವೆ ಯುವಕನೊಬ್ಬನ ಜತೆ ಸ್ನೇಹವಾಗಿತ್ತು. ಆ ಸ್ನೇಹ ಪ್ರೀತಿಗೆ ತಿರುಗಿತ್ತು ಎನ್ನಲಾಗಿದೆ. ಹೀಗಾಗಿ ತನ್ನನ್ನು ಮದುವೆ ಆಗುವಂತೆ ಪ್ರಿಯಕರನಿಗೆ ಒತ್ತಾಯ ಮಾಡಿದ್ದಳು. ಆದರೆ, ವಿಚಾರದಲ್ಲಿ ಇಬ್ಬರ ನಡುವೆ ಜಗಳ ನಡೆದು, ಮಹಿಳೆ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಬಳ್ಳಾರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ ಮುನ್ನಿ.

ಬಳ್ಳಾರಿ, ಡಿ.22: ಮಹಿಳೆಯೊಬ್ಬರು ವಿಡಿಯೊ ಮಾಡುತ್ತಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿಯ ಹುಸೇನ್ ನಗರದಲ್ಲಿ ನಡೆದಿದೆ. ಮುನ್ನಿ (23) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಮದುವೆಗೆ ಪ್ರಿಯಕರ ಒಪ್ಪದಿದ್ದಕ್ಕೆ ಮಹಿಳೆ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಮಹಿಳೆಗೆ ಈಗಾಗಲೇ ಮದುವೆಯಾಗಿ ಮಕ್ಕಳಿದ್ದು, ಪತಿಯಿಂದ ದೂರವಿದ್ದಳು. ಈ ನಡುವೆ ಮೊಹಮ್ಮದ್ ಶೇಖ್ ಎಂಬಾತನ ಜತೆ ಸ್ನೇಹವಾಗಿತ್ತು. ಆ ಸ್ನೇಹ ಪ್ರೀತಿಗೆ ತಿರುಗಿತ್ತು ಎನ್ನಲಾಗಿದೆ. ಹೀಗಾಗಿ ತನ್ನನ್ನು ಮದುವೆ ಆಗುವಂತೆ ಮೊಹಮ್ಮದ್ ಶೇಖ್‌ಗೆ ಮುನ್ನಿ ಒತ್ತಾಯ ಮಾಡಿದ್ದಳು ಎನ್ನಲಾಗಿದೆ. ಈ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆಯಾಗಿದೆ. ಇದೇ ಕಾರಣಕ್ಕೆ ಮುನ್ನಿ ಸಾವಿಗೀಡಾಗಿದ್ದಾಳೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ದುಡುಕಿನ ನಿರ್ಧಾರ ಕೈಗೊಂಡಿರುವ ಮುನ್ನಿ, ತನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿ, ಕಣ್ಣೀರಿಡುತ್ತಲೇ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಬಗ್ಗೆ ಬಳ್ಳಾರಿಯ ಗಾಂಧಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕ ನಾರಾ ಭರತ್ ರೆಡ್ಡಿ ಸಾಂತ್ವನ

ವಿಷಯ ತಿಳಿದು ಬಳ್ಳಾರಿ ಗಾಂಧಿನಗರ ಪೊಲೀಸ್ ಠಾಣೆಗೆ ಶಾಸಕ ನಾರಾ ಭರತ್ ರೆಡ್ಡಿ ಭೇಟಿ ನೀಡಿ, ಪ್ರಕರಣದ ಕುರಿತಂತೆ ಸಿಪಿಐ ಅವರಿಂದ ಮಾಹಿತಿ ಪಡೆದು, ಸೂಕ್ತ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಇದೇ ವೇಳೆ ಮೃತ ಮುನ್ನಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ ಭರತ್ ರೆಡ್ಡಿ, ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಭರವಸೆ ನೀಡಿದ್ದಾರೆ.