CM Siddaramaiah: ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು: ಸಿಎಂ ಸಿದ್ದರಾಮಯ್ಯ

CM Siddaramaiah: ವಿಜಯನಗರ ಜಿಲ್ಲೆಯಲ್ಲಿ ಭಾನುವಾರ ಆಯೋಜಿಸಲಾಗಿದ್ದ ʼಸರ್ವ ಧರ್ಮಗಳ ಸಾಮೂಹಿಕ ವಿವಾಹಗಳ ಸಮಾರಂಭʼದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ ಮಾತನಾಡಿದ್ದಾರೆ.

image-8fa5f7b9-e37f-498e-aef3-37f7de3941e9.jpg
Profile Prabhakara R January 12, 2025
ವಿಜಯನಗರ: ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು. ಇದರಿಂದಾಗಿ ಸಮಾಜದಲ್ಲಿನ ಜಾತಿ ವ್ಯವಸ್ಥೆ ಅಳಿದು ಸಮಸಮಾಜ ನಿರ್ಮಾಣ ಸಾದ್ಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಜಿಲ್ಲೆಯಲ್ಲಿ ಭಾನುವಾರ ಆಯೋಜಿಸಲಾಗಿದ್ದ ʼಸರ್ವ ಧರ್ಮಗಳ ಸಾಮೂಹಿಕ ವಿವಾಹ ಸಮಾರಂಭʼ (Mass marriage) ದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ವಧರ್ಮಗಳ ಸಾಮೂಹಿಕ ವಿವಾಹಗಳ ಸಮಾರಂಭದಲ್ಲಿ ಹೊಸ ಜೀವನಕ್ಕೆ ಕಾಲಿಟ್ಟ 23 ನವವಧುವರ ಜೋಡಿಗಳಿಗೆ ಶುಭ ಕೋರಿದ ಮುಖ್ಯಮಂತ್ರಿಯವರು, ವಿವಾಹದ ಖರ್ಚುವೆಚ್ಚಗಳನ್ನು ಭರಿಸಲಾಗದ ಬಡಕುಟುಂಬಗಳಿಗೆ ಸಾಮೂಹಿಕ ವಿವಾಹ ವರದಾನವಾಗಿದೆ. ಸರಳ ಶೈಲಿಯಲ್ಲಿ ವಿವಾಹವಾಗುವ ಪದ್ದತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. image-6ca37afd-bedb-4491-ad47-e42f51bd51b0.jpg ಕೆಳವರ್ಗದಲ್ಲಿ ಹುಟ್ಟಿದ ಮಾತ್ರಕ್ಕೆ ಬಡವರಾಗಿಯೇ ಉಳಿಯಬೇಕೆಂಬ ಭಾವನೆ ತಪ್ಪು. ಜಾತ್ಯತೀತ ತತ್ವವನ್ನು ನಮ್ಮ ಸಂವಿಧಾನ ಬೋಧಿಸಿದೆ. ಇದೇ ಆಶಯವನ್ನು ವ್ಯಕ್ತಪಡಿಸಿದ ಬಸವಣ್ಣವರು, ಜಾತಿ ಆಧಾರಿತ ಸಮಾಜ ವ್ಯವಸ್ಥೆ ಸಾಧುವಲ್ಲ ಎಂದು ಪ್ರತಿಪಾದಿಸಿದ್ದರು. ‘ದಯವೇ ಧರ್ಮದ ಮೂಲವಯ್ಯ’ ಎಂದು ನುಡಿದು, ಉದಾತ್ತ ತತ್ವವನ್ನು ಬೋಧಿಸಿದ ಬಸವಣ್ಣನವರನ್ನು ಸರ್ಕಾರ ‘ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದೆ ಎಂದರು. image-6ce846fa-f7f3-485a-a26d-b6cd11e38cf7.jpg ಮನುಷ್ಯ ವಿಶ್ವಮಾನವನಾಗಬೇಕುಮನುಷ್ಯ ಹುಟ್ಟುವಾಗ ವಿಶ್ವಮಾನವನಾಗಿದ್ದು, ಜಾತಿಧರ್ಮಗಳ ಬಂಧನದದಲ್ಲಿ ಸಿಲುಕಿ ಅಲ್ಪಮಾನವನಾಗುತ್ತಾನೆ. ಆದ್ದರಿಂದ ವಿಶ್ವಮಾನವರಾಗುವ ಮೂಲಕ ಸಮಾನಕ್ಕೆ ಕೊಡುಗೆ ನೀಡಬೇಕಾಗಿದೆ. ಬಸವಣ್ಣನವರ ಕಾಲದಲ್ಲಿಯೇ ಅಂತರಜಾತಿ ವಿವಾಹ ಪದ್ಧತಿ ಪ್ರಚಲಿತವಾಗಿತ್ತು. ಇತರ ಧರ್ಮಗಳನ್ನೂ ಗೌರವಿಸುವ ವ್ಯವಸ್ಥೆ ಸಮಾಜದಲ್ಲಿರಬೇಕು. ಚಲನೆರಹಿತವಾದ ಜಾತಿವ್ಯವಸ್ಥೆಯಲ್ಲಿ ನಾವಿದ್ದೇವೆ. ಆರ್ಥಿಕ ಹಾಗೂ ಸಾಮಾಜಿಕ ಸ್ವಾವಲಂಬನೆಯಿಂದ ಚಲನೆಯಿಲ್ಲದ ಸಮಾಜಕ್ಕೆ ಜೀವಬರುತ್ತದೆ ಎಂದರು. ಗ್ಯಾರಂಟಿ ಯೋಜನೆಗಳುಹೆಣ್ಣುಮಕ್ಕಳಿಗೆ ಶಕ್ತಿತುಂಬುವ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ. ಇಂದು ವಿವಾಹ ಬಂಧನಕ್ಕೊಳಗಾದ ಮಹಿಳೆಯರಿಗೂ ಸರ್ಕಾರದ ಗ್ಯಾರಂಟಿಗಳು ತಲುಪವಂತಾಗಬೇಕು ಎಂದರು. image-6fb96860-7d0e-4410-89a6-d79ced2d1e1c.jpg ಸಂವಿಧಾನದ ಸಮಾನ ಅವಕಾಶಗಳನ್ನು ನೀಡಿದೆಆರ್ಥಿಕವಾಗಿ ದುರ್ಬಲರಾಗಿರುವ ಜನರ ಕೊಂಡುಕೊಳ್ಳುವ ಶಕ್ತಿ ಹೆಚ್ಚಬೇಕು. ಅಂತೆಯೇ ಶ್ರೀಮಂತವರ್ಗದವರೂ ಕೂಡ ಬಡವರ ಸಹಾಯಕ್ಕೆ ಮುಂದಾಗಬೇಕು ಹಾಗೂ ಸಮಾಜದ ಋಣ ತೀರಿಸಲು ಪ್ರಯತ್ನಿಸಬೇಕೆಂದು ಮುಖ್ಯಮಂತ್ರಿಗಳು ಕರೆ ನೀಡಿದರು. ಡಾ. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ , ಎಲ್ಲರಿಗೂ ಸಮಾನ ಹಕ್ಕು ಹಾಗೂ ಸಮಾನ ಅವಕಾಶಗಳನ್ನು ನೀಡಿದೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಅರಿತಿರಬೇಕು. ಸಂವಿಧಾನ ನೀಡಿರುವ ಹಕ್ಕು ಬಾಧ್ಯತೆಗಳ ಬಗ್ಗೆ ಅರಿವು ಪಡೆದು, ಜವಾಬ್ದಾರಿಯುತ ನಾಗರಿಕನಾಗುವುದು ಅವಶ್ಯವಾಗಿದೆ ಎಂದರು. image-67797708-fafb-4174-809b-c145fd761aa5.jpg ಈ ಸುದ್ದಿಯನ್ನೂ ಓದಿ | Donald Trump: ಡೊನಾಲ್ಡ್‌ ಟ್ರಂಪ್‌ ಪ್ರಮಾಣ ವಚನ: ವಿದೇಶಾಂಗ ಸಚಿವ ಜೈ ಶಂಕರ್‌ ಭಾಗಿ
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ