ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪೊಲೀಸ್‌ ಠಾಣೆ ಎದುರೇ ಡ್ರಾಮಾ; ಪತ್ನಿ ಕಾಟಕ್ಕೆ ಬೇಸತ್ತು ಟ್ರಾನ್ಸ್‌ಫಾರ್ಮರ್ ಏರಿದ ವ್ಯಕ್ತಿ!

ಪ್ರತಿನಿತ್ಯ ಮನೆಯಲ್ಲಾಗುತ್ತಿದ್ದ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬ ವ್ಯಕ್ತಿಯೋರ್ವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿದ್ದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಪತ್ನಿಯೊಂದಿಗೆ ಜಗಳದ ಬೆನ್ನಲ್ಲೇ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಏರಿದ್ದ ವ್ಯಕ್ತಿಯನ್ನು ಬಳಿಕ ಪೊಲೀಸರು ಸಮಾಧಾನ ಪಡಿಸಿ ಕೆಳಗಿಳಿಸಿದ್ದಾರೆ.

ಪತ್ನಿ ಕಾಟಕ್ಕೆ ಬೇಸತ್ತು ಟ್ರಾನ್ಸ್‌ಫಾರ್ಮರ್ ಏರಿದ ವ್ಯಕ್ತಿ!

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Sep 13, 2026 10:00 AM

ಪ್ರತಿನಿತ್ಯ ಮನೆಯಲ್ಲಾಗುತ್ತಿದ್ದ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬ ವ್ಯಕ್ತಿಯೋರ್ವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿದ್ದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಪತ್ನಿಯೊಂದಿಗೆ ಜಗಳದ ಬೆನ್ನಲ್ಲೇ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಏರಿದ್ದ ವ್ಯಕ್ತಿಯನ್ನು ಬಳಿಕ ಪೊಲೀಸರು ಸಮಾಧಾನ ಪಡಿಸಿ ಕೆಳಗಿಳಿಸಿದ್ದಾರೆ. ಈ ಘಟನೆಯನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಬಳ್ಳಾರಿಯ ಬ್ರೂಸ್‌ಪೇಟೆ ಪೊಲೀಸ್‌ ಠಾಣೆ ಎದುರಲ್ಲೇ ಈ ಘಟನೆ ನಡೆದಿದೆ. ಮುಂಡರಗಿ ಪ್ರದೇಶದ ನಿವಾಸಿ ಇಸ್ಮಾಯಿಲ್‌ ಎಂಬಾತ ಪತ್ನಿಯೊಂದಿಗೆ ಬ್ರೂಸ್‌ಪೇಟೆ ಪೊಲೀಸ್‌ ಠಾಣೆಗೆ ಬಂದಿದ್ದ. ಈ ವೇಳೆ ಪತ್ನಿಯೊಂದಿಗೆ ಇಸ್ಮಾ.ಯಿಲ್ ಜಗಳ ಮಾಡಿಕೊಂಡಿದ್ದು, ಪತ್ನಿಯೊಂದಿಗೆ ಉಂಟಾದ ವಿವಾದದಿಂದ ಬೇಸರಗೊಂಡ ಇಸ್ಮಾಯಿಲ್‌ ಠಾಣೆ ಎದುರಿನ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಏರಿದ್ದಾನೆ. ಬಳಿಕ ಪೊಲೀಸರು ಆತನನ್ನು ಸುರಕ್ಷಿತವಾಗಿ ಕೆಳಗಿಳಿಸಲು ಮನವೊಲಿಸಲು ಹರಸಾಹಸಪಟ್ಟಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿ ಟ್ರಾನ್ಸ್‌ಫಾರ್ಮರ್ ಏರುತ್ತಿದ್ದಂತೆ ಸ್ಥಳೀಯರು ಹಾಗೂ ಪೊಲೀಸರು ತೀವ್ರ ಆತಂಕಕ್ಕೊಳಗಾದರು. ಕೂಡಲೇ ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಯಿತು. ಪೊಲೀಸರು ಮತ್ತು ಸ್ಥಳೀಯರು ಇಸ್ಮಾಯಿಲ್ ಅವರೊಂದಿಗೆ ಸುದೀರ್ಘವಾಗಿ ಮಾತನಾಡಿ, ಮನವೊಲಿಸುವಲ್ಲಿ ಯಶಸ್ವಿಯಾದರು. ನಂತರ ಅವರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಲಾಯಿತು.

Bigg Boss: ಗೋಡೆ ಏರಿ ಪರಾರಿಗೆ ಯತ್ನಿಸಿದ ಬಿಗ್‌ ಬಾಸ್‌ ಸ್ಪರ್ಧಿ; ವಿಡಿಯೊ ವೈರಲ್‌

ಪ್ರತ್ಯೇಕ ಘಟನೆಯಲ್ಲಿ, ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಮಂಗಳವಾರ 17 ವರ್ಷದ ಬಾಲಕಿಯೊಬ್ಬಳು 100 ಅಡಿ ಎತ್ತರದ ಮೊಬೈಲ್ ಟವರ್ ಹತ್ತಿ ತನ್ನ 22 ವರ್ಷದ ಗೆಳೆಯನನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ, ಅಪ್ರಾಪ್ತ ಬಾಲಕಿಯ ಪ್ರಿಯಕರನನ್ನು ಎರಡು ದಿನಗಳ ಹಿಂದೆ, ಆಕೆಯನ್ನು ಅಪಹರಿಸಿದ ಆರೋಪದ ಮೇಲೆ ಬಂಧಿಸಲಾಗಿತ್ತು ಮತ್ತು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.