ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Ballari News: ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿಯ ಮಾಡೆಲ್ ಹೌಸ್‌ಗೆ ಬೆಂಕಿ; ಕಾಂಗ್ರೆಸ್‌ನವರ ಕೃತ್ಯ ಎಂದ ಸೋಮಶೇಖರ್‌ ರೆಡ್ಡಿ

ಮೊನ್ನೆ ಬ್ಯಾನರ್ ಗಲಾಟೆಯಾದಾಗ ಬೆಂಕಿ ಹಚ್ಚುತ್ತೇನೆಂದು ಹೇಳಿದ್ದರು. ಅಂದಿನ ಘಟನೆಗೆ ಸಾಕ್ಷಿ ಎನ್ನುವಂತೆ ಇದೀಗ ನಮಗೆ ಸೇರಿದ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ್ದಾರೆ. ಈ ಅವಘಡದ ಹಿಂದೆ ಕಾಂಗ್ರೆಸ್‌ನವರ ಕೈವಾಡವಿದೆ ಎಂದು ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಆರೋಪಿಸಿದ್ದಾರೆ.

ಬಳ್ಳಾರಿಯಲ್ಲಿ ಮಾಡೆಲ್‌ ಹೌಸ್‌ಗೆ ಬೆಂಕಿ ಬಿದ್ದಿರುವುದು.

ಬಳ್ಳಾರಿ: ಬ್ಯಾನರ್ ಗಲಾಟೆ ಬಿಸಿ ಆರುವ ಮುನ್ನವೇ ಗಣಿನಾಡು ಬಳ್ಳಾರಿಯಲ್ಲಿ (Ballari House fire) ಮತ್ತೊಂದು ಅವಘಡ ನಡೆದಿದೆ. ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲು ಅವರಿಗೆ ಸೇರಿದ ಮಾಡೆಲ್ ಹೌಸ್‌ ಬೆಂಕಿಗಾಹುತಿಯಾಗಿರುವುದು ನಗರದ ಜಿ ಸ್ಕೈರ್ ಲೇಔಟ್‌ನಲ್ಲಿ ನಡೆದಿದೆ. ಆದರೆ, ಇದು ಕಾಂಗ್ರೆಸ್‌ನವರ ಕೃತ್ಯ ಎಂದು ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಆರೋಪಿಸಿರುವುದು ಕಂಡುಬಂದಿದೆ.

ಮೊನ್ನೆ ಬ್ಯಾನರ್ ಗಲಾಟೆಯಾದಾಗ ಬೆಂಕಿ ಹಚ್ಚುತ್ತೇನೆಂದು ಹೇಳಿದ್ದರು. ಅಂದಿನ ಘಟನೆಗೆ ಸಾಕ್ಷಿ ಎನ್ನುವಂತೆ ಇದೀಗ ನಮಗೆ ಸೇರಿದ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ್ದಾರೆ. ನೂರು ಎಕರೆ ಪ್ರದೇಶದಲ್ಲಿ ಲೇಔಟ್ ಮಾಡಲಾಗಿತ್ತು. ಇದರಲ್ಲಿ ಮನೆ ಖರೀದಿ ಮಾಡುವವರಿಗೆ ತೋರಿಸಲು ಮಾಡೆಲ್ ಹೌಸ್ ನಿರ್ಮಾಣ ಮಾಡಲಾಗಿತ್ತು. ಸಂಜೆ 6.30ರ ಹೊತ್ತಿಗೆ ಬೆಂಕಿ ಹೊತ್ತಿದೆ. ಇದನ್ನು ನೋಡಿದ ಕೆಲವರು ಬೆಂಕಿ ಹಚ್ಚಿದವರನ್ನು ಹಿಡಿಯಲು ಪ್ರಯತ್ನ ಪಟ್ಟಿದ್ದಾರೆ. ಇದು ಕಾಂಗ್ರೆಸ್‌ನವರ ಕೃತ್ಯ ಎಂದು ಸೋಮಶೇಖರ್ ರೆಡ್ಡಿ ಆರೋಪಿಸಿದ್ದಾರೆ.

ಅಂಕೋಲಾದಲ್ಲಿ ಗುಂಡು ಹಾರಿಸಿಕೊಂಡು ಫಾರ್ಮಾಸಿಸ್ಟ್ ಆತ್ಮಹತ್ಯೆ; ವೈರಲ್‌ ವಿಡಿಯೋದಿಂದ ಮನನೊಂದು ಸಾವಿಗೆ ಶರಣು

ಇನ್ನು ಈ ಬಗ್ಗೆ ಜನಾರ್ದನರೆಡ್ಡಿ ಪ್ರತಿಕ್ರಿಯಿಸಿ, ಶಾಸಕ ಭರತ್‌ ರೆಡ್ಡಿ ಮನಸ್ಸು ಮಾಡಿದ್ರೆ ನಾನು ಐದೇ ನಿಮಿಷದಲ್ಲಿ ರೆಡ್ಡಿ ಮನೆ ಸುಟ್ಟು ಹಾಕ್ತೀನಿ ಎಂದು ಹೇಳಿದ್ದ. ಇದಾದ 15 ದಿನಗಳೂ ಆಗಿಲ್ಲ, ಈ ಈಗ ನಮ್ಮ ಮಾಡೆಲ್‌ ಹೌಸ್‌ಗೆ ಬೆಂಕಿ ಹಚ್ಚಲಾಗಿದೆ. 150 ಎಕರೆಯಲ್ಲಿ ನಾವು ಲೇಔಟ್‌ ಮಾಡಿದ್ದೇವೆ. ಅಲ್ಲಿನ ಮಾಡೆಲ್‌ ಹೌಸ್‌ಗೆ ಬೆಂಕಿ ಹಚ್ಚಲಾಗಿದ್ದು, ಕೃತ್ಯ ಎಸಗಿದವರ ವಿಡಿಯೋ ರೆಕಾರ್ಡ್‌ ಆಗಿದೆ. ಹೀಗಾಗಿ ಎಸ್‌ಪಿ ಅವರ ಗಮನಕ್ಕೆ ತಂದಿದ್ದೇವೆ. ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಲಿದ್ದಾರೆ ಎಂಬ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.