ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಬಸವರಾಜ ಬೊಮ್ಮಾಯಿ

Basavaraj Bommai: ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಅವರ ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ. ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತು ಹಾಕಲು ಬಿಜೆಪಿ ಹಳ್ಳಿ- ಹಳ್ಳಿಗೆ ತೆರಳಿ ಹೋರಾಟ ನಡೆಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಳ್ಳಾರಿ ಸಮಾವೇಶದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಭಾಷಣ.

ಬಳ್ಳಾರಿ, ಜ.17: ಮಾಜಿ ಸಚಿವರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಅವರ ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ. ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತು ಹಾಕಲು ಬಿಜೆಪಿ ಹಳ್ಳಿ- ಹಳ್ಳಿಗೆ ತೆರಳಿ ಹೋರಾಟ ನಡೆಸುತ್ತದೆ. ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಜತೆಗೆ ಬಿಜೆಪಿ ಯಾವಾಗಲೂ ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

ಬಳ್ಳಾರಿಯಲ್ಲಿ ಪೋಸ್ಟರ್ ಹಾಕುವ ವಿಚಾರದಲ್ಲಿ ನಡೆದ ಗಲಾಟೆ ವಿರೋಧಿಸಿ ನಡೆದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಳ್ಳಾರಿಯಲ್ಲಿ ಈ ಘಟನೆ ಆಗಲು ಎರಡು ಕಾರಣ. ಜನಾರ್ದನ ರೆಡ್ಡಿ ಕೋರ್ಟಿನ ಆದೇಶದ ಪ್ರಕಾರ ಬಳ್ಳಾರಿಗೆ ಬಂದಿದ್ದರಿಂದ ತಮಗೆ ಉಳಿಗಾಲವಿಲ್ಲ ಎಂದು, ಜನಾರ್ದನ ರೆಡ್ಡಿ ಮತ್ತು ಅವರ ಆತ್ಮೀಯ ಸ್ನೇಹಿತ ರಾಮುಲು ಒಂದಾಗಿದ್ದಾರೆ ಎಂದರೆ ಬಳ್ಳಾರಿಯ ಕಾಂಗ್ರೆಸ್ ನಾಯಕರ ಕುರ್ಚಿ ಅಲುಗಾಡುತ್ತಿದೆ. ರಾಮುಲು ವೇಗ, ಜನಾರ್ದನ ರೆಡ್ಡಿ ಶಕ್ತಿ, ಬೆಂಕಿ ಬಿರುಗಾಳಿ ಇದ್ದ ಹಾಗೆ. ಕಾಂಗ್ರೆಸನವರ ಗುಂಡಿಗಿಂತ ನಮ್ಮ ಎದೆ ಗಟ್ಟಿಯಿದೆ ಜನಾರ್ದನ ರೆಡ್ಡಿ, ರಾಮುಲು ಶಕ್ತಿ ಅಡಗಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಎಸ್ಟಿ ಮೀಸಲಾತಿ ಹೆಚ್ಚಳ

ವಾಲ್ಮಿಕಿ ಜನಾಂಗ ಮೂವತ್ತು ವರ್ಷದಿಂದ ಮೀಸಲಾತಿ ಹೆಚ್ಚಳಕ್ಕೆ ಹೋರಾಟ ಮಾಡುತ್ತ ಬಂದಿತ್ತು. ಶೇ.3% ಮೀಸಲಾತಿಯನ್ನು 7% ಕ್ಕೆ ಹೆಚ್ಚಿಸುವಂತೆ ಕೇಳಿದರು. ನಾವು ಎಸ್ಟಿ ಸಮುದಾಯಕ್ಕೆ ಪ್ರತ್ಯೇಕ ಇಲಾಖೆ ಮಾಡಿದೆವು, ವಾಲ್ಮೀಕಿ ಸಮುದಾಯದ ಸ್ವಾಮೀಜಿ, ರಾಮುಲು ಪ್ರತಿಭಟನೆ ಮಾಡಿದರೆ ಕಾಂಗ್ರೆಸ್‌ನವರು ಒಬ್ಬರೂ ಬರಲಿಲ್ಲ. ನಾನು ಸಿಎಂ ಆಗಿದ್ದಾಗ ಮಿಸಲಾತಿಯನ್ನು 3% ರಿಂದ 7% ಕ್ಕೆ ಹೆಚ್ಚಿಸಿದೆವು. ಇದರಿಂದ ಸಾವಿರಾರು ಮಕ್ಕಳಿಗೆ ಮೆಡಿಕಲ್, ಇಂಜಿನೀಯರಿಂಗ್ ಸೀಟು, ಉದ್ಯೋಗ ಸಿಗುತ್ತಿದೆ. ಯಡಿಯೂರಪ್ಪ ಅವರ ನಾಯಕತ್ವದಿಂದ ಅದು ಸಾಧ್ಯವಾಗಿದೆ ಎಂದು ಹೇಳಿದರು.

ಜನಾರ್ದನ ರೆಡ್ಡಿ ಅವರು ಮನೆಯಲ್ಲಿ ಇದ್ದಾರೆ ಅಂತ ಅವರ ಮನೆ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಿದ ಬಸವರಾಜ ಬೊಮ್ಮಾಯಿ ಅವರು, ಭರತ ರೆಡ್ಡಿಗೆ ಶಾಪ ಖಂಡಿತವಾಗಲೂ ತಟ್ಟುತ್ತದೆ. ಜನಾರ್ದನ ರೆಡ್ಡಿ ಅವರನ್ನು ರಾಜಕೀಯವಾಗಿ ಯಾವ ರೀತಿಯಲ್ಲೂ ಮುಗಿಸಲು ಸಾಧ್ಯವಿಲ್ಲ. ಅವರು ಬಳ್ಳಾರಿಗೆ ಮಾಡಿದ ಸಹಾಯ ಜನರಿಗೆ ಮಾಡಿದ ಕೆಲಸ ಬಹಳಷ್ಟಿದೆ. 2008ರ ನಂತರ ಬಳ್ಳಾರಿಯ ರಸ್ತೆ ಅಭಿವೃದ್ದಿ, ಕುಡಿಯುವ ನೀರು ಜನರಿಗೆ ಸಾಕಷ್ಟು ಅನುಕೂಲ ಆಗಿದೆ ಎಂದರು.

ಸಿಎಂ ಸುದೀರ್ಘ ಅವಧಿಯ ಅಧಿಕಾರದ ಕೊಡುಗೆಯಾಗಿ ಹಾವೇರಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸಲಿ: ಬೊಮ್ಮಾಯಿ

ಮೃತ ರಾಜಶೇಖರ ಸಾವಿಗೆ ನ್ಯಾಯ ಕೊಡಿಸಲು ಬಿಜೆಪಿ ಹೋರಾಟ ಮಾಡುತ್ತದೆ. ಅಲ್ಲಿವರೆಗೂ ಬಿಜೆಪಿ ವಿಶ್ರಮಿಸುವುದಿಲ್ಲ. ಕಾಂಗ್ರೆಸ್ ಸರ್ಕಾರ ತೆಗೆಯುವವರೆಗೂ ನಾವು ಹಳ್ಳಿ ಹಳ್ಳಿಗೆ ಹೋಗಿ ಭ್ರಷ್ಟ ಸರ್ಕಾರವನ್ನು ಬೇರು ಸಮೇತ ಕಿತ್ತು ಹಾಕುತ್ತೇವೆ. ಬಳ್ಳಾರಿ ಅಭಿವೃದ್ಧಿ ಮಾಡಲು ಜನಾರ್ದನ ರೆಡ್ಡಿ, ರಾಮುಲು ಅವರ ಹಿಂದೆ ನಾವಿದ್ದೇವೆ ಎಂದು ಸಾರಲು ನಾವು ಬಂದಿದ್ದೇವೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನರು ಬಂದಿರುವುದಕ್ಕೆ ಕೋಟಿ ಕೋಟಿ ಧನ್ಯವಾದಗಳು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.