Karnataka Weather: ಮುಂದಿನ 2 ದಿನ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ, ಉಳಿದೆಡೆ ಒಣ ಹವೆ
ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಬಹುತೇಕ ಕಡೆ ಶನಿವಾರ ಕೂಡ ಒಣ ಹವೆಯ ವಾತಾವರಣ ಕಂಡುಬಂದಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಡಿ.6: ರಾಜ್ಯದಾದ್ಯಂತ ಮುಂದಿನ 6 ದಿನ ಒಣ ಹವೆ ಮುಂದುವರಿಯುವ ಸಾಧ್ಯತೆಯಿದ್ದು, ಮುಂಜಾನೆ ಚಳಿ ಹಾಗೂ ಅಲ್ಲಲ್ಲಿ ಮಂಜಿನ ವಾತಾವರಣ ಇರಲಿದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ (Karnataka Weather) ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಕವಿಯಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆ. ಮತ್ತು 17 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಶುಕ್ರವಾರ ಈಶಾನ್ಯ ಮಾನ್ಸೂನ್ ದುರ್ಬಲವಾಗಿತ್ತು. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಇನ್ನು ಡಿ.7ರಿಂದ 12ರವರೆಗೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೀದರ್‌ನಲ್ಲಿ ರಾಜ್ಯದಲ್ಲೇ ಕನಿಷ್ಠ ಉಷ್ಣಾಂಶ ದಾಖಲು
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಬೀದರ್‌ನಲ್ಲಿ ಶನಿವಾರ ಬೆಳಗ್ಗೆ ಅತಿ ಕನಿಷ್ಠ ತಾಪಮಾನ 13.5 °C ದಾಖಲಾಗಿದೆ. ಇನ್ನು ದಕ್ಷಿಣ ಕೇರಳ ಕರಾವಳಿ ಮತ್ತು ನೆರೆಹೊರೆಗಳಲ್ಲಿ ಸರಾಸರಿ ಸಮುದ್ರ ಮಟ್ಟಕ್ಕಿಂತ 0.9 ಕಿ.ಮೀ. ಎತ್ತರದಲ್ಲಿ ವಾಯು ಚಂಡಮಾರುತದ ಪರಿಚಲನೆ ಮುಂದುವರಿದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಳಿಗಾಲದಲ್ಲಿ ನೆಲ್ಲಿಕಾಯಿ ತಿನ್ನೋದ್ರಿಂದ ಆರೋಗ್ಯಕ್ಕೆ ಎಷ್ಟೆಲ್ಲ ಲಾಭ ಇದೆ ಗೊತ್ತಾ?
ಬಂಟ್ವಾಳದ ಬಾಳೆಪುಣಿಯಲ್ಲಿ ಗರಿಷ್ಠ ಮಳೆ
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು (KSNDMC) ರಾಜ್ಯದಾದಂತ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಾಪಿಸಲಾಗಿರುವ ದೂರಸ್ಥ ಮಳೆ ಮಾಪನ ಕೇಂದ್ರಗಳಲ್ಲಿ ಡಿ.6 ಬೆಳಗ್ಗೆ 8.30ರ ಅನ್ವಯ ದಾಖಲಾದ ಮಳೆ ಪ್ರಮಾಣದ ಅನ್ವಯ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮ ಪಂಚಾಯಿತಿಯಲ್ಲಿ ರಾಜ್ಯದಲ್ಲೇ ಗರಿಷ್ಠ 9.5. ಮಿ.ಮೀ. ಮಳೆ ಸುರಿದಿದೆ.
ಕೆಎಸ್‌ಎನ್‌ಡಿಎಂಸಿ ಮಳೆ ಪ್ರಮಾಣದ ವರದಿಯ ಪೋಸ್ಟ್
6ನೇ ಡಿಸೆಂಬರ್ 2025ರ ಬೆಳಗ್ಗೆ 8.30ರಂತೆ ರಾಜ್ಯ ದಲ್ಲಿ ದಾಖಲಾದ ಮಳೆ ಪ್ರಮಾಣ ವರದಿ. #KSNDMC@KarnatakaVarthe pic.twitter.com/yKaXIG1djm
— Karnataka State Natural Disaster Monitoring Centre (@KarnatakaSNDMC) December 6, 2025
ಇನ್ನುಳಿದಂತೆ ರಾಜ್ಯದ ಚಿಕ್ಕಬಳ್ಳಾಪುರ, ಬಳ್ಳಾರಿ, ಬೆಳಗಾವಿ, ಯಾದಗಿರಿ, ಬೆಂಗಳೂರು ನಗರ, ಚಿಕ್ಕಮಗಳೂರು, ತುಮಕೂರು, ಕೊಪ್ಪಳ, ಮೈಸೂರು, ಶಿವಮೊಗ್ಗ, ಕೋಲಾರ, ಬೆಂಗಳೂರು ಗ್ರಾಮಾಂತರ, ವಿಜಯನಗರ, ಕೊಡಗು, ಹಾಸನ, ಮಂಡ್ಯ, ಬೀದರ್, ಧಾರವಾಡ ಬಾಗಲಕೋಟೆ, ದಾವಣಗೆರೆ, ವಿಜಯಪುರ, ಗದಗ, ಉತ್ತರ ಕನ್ನಡ, ರಾಯಚೂರು, ಚಿತ್ರದುರ್ಗ ಮತ್ತು ಹಾವೇರಿ ಸೇರಿ 26 ಜಿಲ್ಲೆಗಳಲ್ಲಿ ಅತ್ಯಲ್ಪ ಮಳೆ ದಾಖಲಾಗಿದೆ.