Maternal Deaths: ಬಳ್ಳಾರಿಯಲ್ಲಿ ಮುಂದುವರಿದ ಬಾಣಂತಿ ಸಾವಿನ ಸರಣಿ, ಸಾವಿನ ಸಂಖ್ಯೆ 5ಕ್ಕೇರಿಕೆ

Maternal Deaths: ಬಳ್ಳಾರಿಯಲ್ಲಿ ಮುಂದುವರಿದ ಬಾಣಂತಿ ಸಾವಿನ ಸರಣಿ, ಸಾವಿನ ಸಂಖ್ಯೆ 5ಕ್ಕೇರಿಕೆ

Profile ಹರೀಶ್‌ ಕೇರ December 6, 2024
ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ (Bellary news) ಗುರುವಾರ ಮತ್ತೊಂದು ಬಾಣಂತಿಯ ಸಾವು (Maternal Deaths) ಸಂಭವಿಸಿದೆ. ಇದರಿಂದಾಗಿ ನವೆಂಬರ್ ನಂತರ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಏರಿದೆ. ಇಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸಾವಿನ ಪ್ರಕರಣಗಳು ಆತಂಕ ಮೂಡಿಸಿವೆ. ಕೂಡ್ಲಗಿ ಪಟ್ಟಣದ ಸುಮಯ್ಯ (24) ಎಂಬವರು ಮೃತ ಬಾಣಂತಿ. ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಇವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ನಿತ್ಯ ಡಯಾಲಿಸಿಸ್ ಮಾಡಲಾಗುತ್ತಿತ್ತು. ಗುರುವಾರ ತೀವ್ರ ತೊಂದರೆಯಾದ ಹಿನ್ನೆಲೆಯಲ್ಲಿ ಸಾವಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ನವೆಂಬರ್ 10ರಂದು ಏಳು ಬಾಣಂತಿಯರ ಹೆರಿಗೆಯಾಗಿತ್ತು. ಇದರಲ್ಲಿ ನಾಲ್ವರು ಸಾವನ್ನಪ್ಪಿದ್ದು ಇದೀಗ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಇನ್ನುಳಿದ ಇಬ್ಬರು ಡಿಸ್ಟಾರ್ಜ್‌ ಆಗಿದ್ದಾರೆ. ಇದಕ್ಕೂ ಮೊದಲು ರೋಜಾ ಎಂಬವರು ನ.20 ರಂದು, ನಂದಿನಿ ಮತ್ತು ಲಲಿತಮ್ಮ ಎಂಬು ವರುನ.12ರಂದು, ಮುಸ್ಕಾನ್ ಎಂಬುವರು 23ರಂದು ಮೃತಪಟ್ಟಿದ್ದರು. 'ರಿಂಗ‌ರ್' ಗ್ಲುಕೋಸ್ ಬಳಕೆಗೆ ಬ್ರೇಕ್ ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ ಸಂಭವಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ರಿಂಗರ್‌ ಲ್ಯಾಕ್ಟೇಟ್ ಐವಿ ದ್ರಾವಣ (ಗ್ಲುಕೋಸ್) ಬಳಕೆಯನ್ನು ತಡೆ ಹಿಡಿಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐವಿ ದ್ರಾವಣದಿಂದಲೇ ಸಾವು ಸಂಭವಿಸಿದೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ ಈ ಬಗ್ಗೆ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ದೃಷ್ಟಿಯಿಂದ ಈ ಕೈಗೊಳ್ಳಲಾಗಿದೆ. ಅನಾಹುತಕ್ಕೆ ದ್ರಾವಣ ಕಾರಣವೇ ಎಂಬ ಬಗ್ಗೆ ಅನರೋಬಿಕ್ ಟೆಸ್ಟ್ ವರದಿ ಬಳಿಕ ಸ್ಪಷ್ಟತೆ ಸಿಗಲಿದೆ. ಮುಂದಿನ ವಾರ ವರದಿ ಬರಬಹುದು ಎಂದಿದ್ದರು. ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ದ್ರಾವಣದ ಬಳಕೆಯಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮಾತ್ರ ಈ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ಅಂತಿಮ ವರದಿ ಬಳಿಕವಷ್ಟೇ ಖಚಿತ ಮಾಹಿತಿ ತಿಳಿಯಲಿದೆ ಎಂದು ಹೇಳಿದ್ದರು. ಬಳಿಕ ಐವಿ ದ್ರಾವಣ ಬಳಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ಮುಂಜಾಗ್ರತ ಕ್ರಮವಾಗಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನು ರಾಜ್ಯಾದ್ಯಂತ ತಡೆ ಹಿಡಿಯಲಾಗಿದೆ ನೀಡಿದ್ದರು. ಇದನ್ನೂ ಓದಿ: CM Siddaramaiah: ಬಾಣಂತಿಯರ ಸಾವಿನ ತನಿಖೆಗೆ ತಜ್ಞರ ಸಮಿತಿ ನೇಮಕ
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ