R Ashok: ರಾಜ್ಯದಲ್ಲಿ ಬಾಣಂತಿಯರ ಸಾವು ಪ್ರಕರಣ; ಸರ್ಕಾರಕ್ಕೆ ಜನರ ಶಾಪ ತಟ್ಟಲಿದೆ ಎಂದ ಆರ್‌. ಅಶೋಕ್‌

ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಹಾಗೂ ಮಕ್ಕಳು ಸಾಯುತ್ತಿರುವಾಗ ಕಾಂಗ್ರೆಸ್‌ 20 ಕೋಟಿ ರೂ. ಖರ್ಚು ಮಾಡಿ ಸಮಾವೇಶ ಮಾಡಿದೆ. ಮಕ್ಕಳನ್ನು ಉಳಿಸದೆ ನೂರು ಸಮಾವೇಶ ಮಾಡಿದರೂ ಸರ್ಕಾರಕ್ಕೆ ಜನರ ಶಾಪ ತಟ್ಟದೆ ಇರುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Profile Vishwavani News December 6, 2024
ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಹಾಗೂ ಮಕ್ಕಳು ಸಾಯುತ್ತಿರುವಾಗ ಕಾಂಗ್ರೆಸ್‌ 20 ಕೋಟಿ ರೂ. ಖರ್ಚು ಮಾಡಿ ಸಮಾವೇಶ ಮಾಡಿದೆ. ಮಕ್ಕಳನ್ನು ಉಳಿಸದೆ ನೂರು ಸಮಾವೇಶ ಮಾಡಿದರೂ ಸರ್ಕಾರಕ್ಕೆ ಜನರ ಶಾಪ ತಟ್ಟದೆ ಇರುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿ ಬದಲಾಗಿದೆ. ಬಳ್ಳಾರಿ ಆಸ್ಪತ್ರೆಯಲ್ಲಿ ಐವಿ ದ್ರಾವಣದಿಂದಾಗಿ ತಾಯಂದಿರು ಮೃತಪಟ್ಟಿದ್ದಾರೆ. ನಾನು ಹೋಗಿ ಎಚ್ಚರಿಕೆ ನೀಡಿದ ನಂತರವೂ ತಾಯಂದಿರು ಮೃತಪಟ್ಟಿದ್ದಾರೆ. ಹತ್ತು ತಿಂಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ 111 ನವಜಾತ ಶಿಶುಗಳು ಹಾಗೂ ಎಂಟು ತಿಂಗಳಲ್ಲಿ ಸುಮಾರು 28 ಬಾಣಂತಿಯರು ಸಾವನ್ನಪ್ಪಿದ್ದಾರೆ. ಮಹಿಳೆಯರಿಗೆ 2 ಸಾವಿರ ರೂ. ನೀಡುವ ಬದಲು ತಾಯಂದಿರ ಸಾವಿಗೆ ನ್ಯಾಯ ಕೊಡಿ ಎಂದು ಆಗ್ರಹಿಸಿದರು. ಈ ಸುದ್ದಿಯನ್ನೂ ಓದಿ | Interest Rate: ಫೆಬ್ರವರಿಯಲ್ಲಿ ನಿಮ್ಮ ಗೃಹ ಸಾಲ ಬಡ್ಡಿ ಇಳಿಕೆ? ಆರ್‌ಬಿಐನಿಂದ ಸಿಆರ್‌ಆರ್‌ ಕಟ್ ಕೋವಿಡ್‌ ಸಮಯದಲ್ಲಿ ರಾಹುಲ್‌ ಗಾಂಧಿ, ಡಿ.ಕೆ. ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ, ಜನರ ಬಳಿಗೆ ಹೋಗಿ ಟವೆಲ್‌ನಲ್ಲಿ ಕಣ್ಣೀರು ಒರೆಸಿಕೊಂಡರು. ಈಗ ತಾಯಂದಿರು ಮೃತಪಟ್ಟಿರುವಾಗ ಜನಕಲ್ಯಾಣ ಸಮಾವೇಶ ಮಾಡಿದ್ದಾರೆ. ಆ ಸಮಾವೇಶದಲ್ಲಿ ರಾಜಕೀಯ ಮಾತಾಡುವುದು ಬಿಟ್ಟರೆ, ಜನರ ಪರವಾಗಿ ಮಾತಾಡಿಲ್ಲ. 28 ಔಷಧಿಗಳು ಕಳಪೆ ಎಂದ ಮೇಲೂ ಅದೇ ಕಂಪನಿಯಿಂದ ಔಷಧಿ ಖರೀದಿಸಲಾಗಿದೆ. ಮಕ್ಕಳನ್ನು ಉಳಿಸುವ ಕೆಲಸ ಮಾಡದೆ ನೂರು ಸಮಾವೇಶ ಮಾಡಿದರೂ ಶಾಪ ಹಾಗೂ ಪಾಪ ತಟ್ಟಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಾವಿನ ಹೊಣೆಯನ್ನು ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಮಾಡಿದ ನಂತರವೂ ತಾಯಂದಿರು ಸಾಯುತ್ತಿದ್ದಾರೆ ಎಂದು ಮುಖ್ಯಮಂತ್ರಿಗೆ ಸರ್ಕಾರದಲ್ಲಿ ಹಿಡಿತವಿಲ್ಲ ಎಂದರ್ಥ. ಈ ಸಾವಿನ ಹೊಣೆಯನ್ನು ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಕಾಂಗ್ರೆಸ್‌ ನಾಯಕರು ಜನರ ಹಿತ ಕಡೆಗಣಿಸಿ ವಿರೋಧ ಪಕ್ಷಗಳನ್ನು ಬಗ್ಗುಬಡಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದರು. ಈ ಸುದ್ದಿಯನ್ನೂ ಓದಿ | PMSGMBY: ಸೂರ್ಯ ಘರ್ ಯೋಜನೆ; ಐದೇ ನಿಮಿಷದಲ್ಲಿ ಅರ್ಜಿ ಸಲ್ಲಿಸಿ! ಈ ಕುರಿತು ಲೋಕಾಯುಕ್ತಕ್ಕೆ ಪತ್ರ ನಾನು ಈಗಾಗಲೇ ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದೇನೆ. ಈ ಕುರಿತು ಲೋಕಾಯುಕ್ತಕ್ಕೆ ಪತ್ರ ಕೂಡ ಬರೆಯುತ್ತೇನೆ. ಇದನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡದೆ ಬಿಡುವುದಿಲ್ಲ. ಸಿಎಂ ಸಿದ್ದರಾಮಯ್ಯ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ. ಜಿಡಿಪಿಯಲ್ಲಿ ನಂಬರ್‌ 1 ಎನ್ನುವ ಸಿಎಂ ಸಿದ್ದರಾಮಯ್ಯ ಬಾಣಂತಿಯರ ಸಾವಿನಲ್ಲೂ ನಂಬರ್‌ 1 ಎಂದು ಹೇಳಲಿ ಎಂದರು.
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ