ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಸಿಕ್ಕಿತು ಅನುಮತಿ
ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಸಿಕ್ಕಿತು ಅನುಮತಿ
Vishwavani News
October 10, 2022
ಬಳ್ಳಾರಿ: ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ಸಿಲುಕಿ ನಲುಗಿರುವ ಮಾಜಿ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ತೆರಳಲು ಗಾಲಿ ರೆಡ್ಡಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ.
ನ್ಯಾ. ಎಂಆರ್ ಶಾ ಹಾಗೂ ಕೃಷ್ಣ ಮುರಾರಿ ಅವರಿದ್ದ ಸುಪ್ರೀಂಕೋರ್ಟ್ ನ್ಯಾಯಪೀಠವು ಗಾಲಿ ರೆಡ್ಡಿಗೆ ಅನುಮತಿ ನೀಡಿದ್ದರೂ ವಿಚಾರಣೆ ಮುಂದು ವರೆಸಲು ವಿಶೇಷ ನ್ಯಾಯಾಲಯಕ್ಕೆ ಸೂಚಿಸಿದೆ.
ಕಳೆದ 12 ವರ್ಷಗಳಿಂದ ನನ್ನ ಕೇಸ್ ಸುಪ್ರೀಂ ಕೋರ್ಟ್‌ನಲ್ಲಿದೆ. ಆದರೆ ತ್ವರಿತಗತಿಯಲ್ಲಿ ಕೇಸ್ ನಡೆಯುತ್ತಿಲ್ಲ. ಸಿಬಿಐ ಅಧಿಕಾರಿಗಳು ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಉದ್ಯಮಿ ಜನಾರ್ದನ ರೆಡ್ಡಿ ಇತ್ತೀಚೆಗೆ ಆರೋಪ ಮಾಡಿದ್ದರು.
ನನ್ನ ಮೇಲೆ ಕೇಸ್ ಆಗಿ ಹನ್ನೆರಡು ವರ್ಷ ಕಳೆದಿವೆ. ಕಳೆದ ಹನ್ನೆರಡು ವರ್ಷಗಳಿಂದ ಕೇಸ್ ನಡೆಯುತ್ತಿಲ್ಲ. ನಾನು ಬಳ್ಳಾರಿಯಲ್ಲಿ ಇರುವುದಕ್ಕೆ ಅಧಿಕಾರಿಗಳು ಪದೇ ಪದೇ ಕೋರ್ಟ್‌ನಲ್ಲಿ ಪ್ರಸ್ತಾಪ ಮಾಡುತ್ತಿದ್ದಾರೆ. ಹೀಗಾಗಿ ಪ್ರತಿ ದಿನ ವಿಚಾರಣೆ ನಡೆಸುವಂತೆ ಕೊರ್ಟ್‌ಗೆ ಕೇಳಿದ್ದೇನೆ. ಮೂರ್ನಾಲ್ಕು ತಿಂಗಳಲ್ಲೇ ಪ್ರಕರಣ ಇತ್ಯರ್ಥ ಮಾಡಿ ಎಂದು ಕೇಳಿದ್ದೇನೆ ಎಂದು ಹೇಳಿದರು.
ಆಂಧ್ರ- ಕರ್ನಾಟಕ ಗಡಿ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಗಡಿ ಒತ್ತುವರಿ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ನ್ಯಾಯ, ಅನ್ಯಾಯವನ್ನು ಕೋರ್ಟ್ ತೀರ್ಮಾನಿಸಲಿದೆ ಎಂದು ಹೇಳಿದರು.