ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ನಿಯಂತ್ರಣ ತಪ್ಪಿ ಕಾರು ಪಲ್ಟಿ, ಒಂದೇ ಕುಟುಂಬದ ಮೂವರು ಸಾವು

ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಹಾಗೂ ಇಬ್ಬರು ಮಹಿಳೆಯರು ಸೇರಿ 3 ಜನ ಸ್ಥಳದಲ್ಲೇ ಮೃತಪಟ್ಟರೆ ಇಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗಿನ ಜಾವ ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸಿರುಗುಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಳ್ಳಾರಿ ಬಳಿ ಕಾರು ಅಪಘಾತ

ಬಳ್ಳಾರಿ, ಡಿ.24: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ (Road Accident) ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ಬಳ್ಳಾರಿ- ಸಿರುಗುಪ್ಪ ರಾಜ್ಯ ಹೆದ್ದಾರಿಯ (Bellari – Siruguppa State Highway) ದೇವಿನಗರ ಕ್ಯಾಂಪ್ ಬಳಿ ನಡೆದಿದೆ. ನಿಟ್ಟೂರು ಗ್ರಾಮದ ಒಂದೇ ಕುಟುಂಬದ 5 ಜನರು ತಮಿಳುನಾಡಿನ (Tamil Nadu) ದೇವಸ್ಥಾನಕ್ಕೆ ತೆರಳಿ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಹಾಗೂ ಇಬ್ಬರು ಮಹಿಳೆಯರು ಸೇರಿ 3 ಜನ ಸ್ಥಳದಲ್ಲೇ ಮೃತಪಟ್ಟರೆ ಇಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗಿನ ಜಾವ ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸಿರುಗುಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾಲಕನಿಗೆ ಬೈಕ್ ಕೊಟ್ಟ ವ್ಯಕ್ತಿಗೆ 25,000 ರೂ. ದಂಡ

ಚಿಕ್ಕಮಗಳೂರು: ಮಕ್ಕಳಿಗೆ ವಾಹನ ಕೊಡುವ ಪೋಷಕರು ಎಚ್ಚರ ವಹಿಸಬೇಕಿದೆ. ಇಲ್ಲದಿದ್ದರೆ ಭಾರಿ ದಂಡ ಕಟ್ಟಬೇಕಾಗುತ್ತದೆ. ಹೌದು, ಅಪ್ರಾಪ್ತ ವಯಸ್ಸಿನ ಮಗನಿಗೆ ಬೈಕ್ ಚಾಲನೆ ಮಾಡಲು ನೀಡಿದ್ದ ವ್ಯಕ್ತಿಗೆ ಕೋರ್ಟ್, 25 ಸಾವಿರ ರೂ. ದಂಡ ವಿಧಿಸಿರುವುದು ಚಿಕ್ಕಮಗಳೂರಿನಲ್ಲಿ ನಡೆದಿದೆ.

ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆ ಮಾಡಲು ನೀಡಿದ್ದ ವ್ಯಕ್ತಿಯ ವಿರುದ್ಧ 2024 ರಲ್ಲಿ ಚಿಕ್ಕಮಗಳೂರು ಸಂಚಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಚಿಕ್ಕಮಗಳೂರು ನ್ಯಾಯಾಲಯವು 25,000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

ರೌಡಿ ಕೊಲೆ ಕೇಸ್‌ನಲ್ಲಿ ಬೈರತಿ ಬಸವರಾಜ್‌ಗೆ ಜಾಮೀನು ನಿರಾಕರಣೆ, ಮಾಜಿ ಸಚಿವರು ಅಜ್ಞಾತ ಸ್ಥಳಕ್ಕೆ

ಬಿಸಿನೀರಿನ ಪಾತ್ರೆಗೆ ಬಿದ್ದು ಮಗು ಸಾವು

ಮೈಸೂರು: ಜಿಲ್ಲೆಯಲ್ಲಿ ಘೋರ ಘಟನೆ ನಡೆದಿದೆ. ಬಿಸಿನೀರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ಮೈಸೂರು (Mysuru News) ಜಿಲ್ಲೆಯ ಹುಣಸೂರು ತಾಲೂಕಿನ ಜಯಗಿರಿ ಹಾಡಿಯಲ್ಲಿ ನಡೆದಿದೆ. ರಮ್ಯಾ ಮತ್ತು ಬಸಪ್ಪ ದಂಪತಿ ಪುತ್ರಿ ವೇದಾ (2) ಮೃತ ಮಗು.

ತಾಯಿ ಸ್ನಾನ ಮಾಡಿಸಲು ಪಾತ್ರೆಯಲ್ಲಿ ಬಿಸಿ ನೀರಿಟ್ಟು, ತಣ್ಣೀರು ತರಲು ಹೋಗಿದ್ದಾರೆ. ಈ ವೇಳೆ ವೇದಾ ಬಿಸಿನೀರಿನ ಪಾತ್ರೆಗೆ ಬಿದ್ದಿದ್ದಾಳೆ. ಬಿಸಿ ನೀರಿಗೆ ಬಿದ್ದ ಮಗುವನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೇ ಚಿಕಿತ್ಸೆ ಫಲಿಸದೇ ಮಗು ಮೃತಪಟ್ಟಿದೆ. ಮನೆಯಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಹರೀಶ್‌ ಕೇರ

View all posts by this author