ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸಂಡೂರಿನ ಶ್ರೀ ಕುಮಾರಸ್ವಾಮಿ ಜಾತ್ರಾ ಮಹೋತ್ಸವದ ವಿಶ್ವವಾಣಿ ವಿಶೇಷ ಸಂಚಿಕೆ ಬಿಡುಗಡೆ ಮಾಡಿದ ಸಚಿವ ರಾಮಲಿಂಗಾರೆಡ್ಡಿ

Sri Kumaraswamy Jatra Mahotsav-2026: ಸಂಡೂರು ಕ್ಷೇತ್ರದ ಪ್ರಸಿದ್ಧ ಶ್ರೀ ಕುಮಾರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ವಿಶ್ವವಾಣಿ ಪತ್ರಿಕೆ ಹೊರತಂದಿರುವ ಶ್ರೀ ಕುಮಾರಸ್ವಾಮಿ ಜಾತ್ರಾ ಮಹೋತ್ಸವ-2026 ವಿಶೇಷ ಸಂಚಿಕೆ ಬಿಡುಗಡೆಗೊಳಿಸಲಾಯಿತು. ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಎಸ್. ಬಸವಂತಪ್ಪ, ಸಂಸದ ಈ. ತುಕಾರಾಂ, ವಿಜಯನಗರ ಶಾಸಕ ಎಚ್.ಆರ್. ಗವಿಯಪ್ಪ, ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ ಅವರು ಬಿಡುಗಡೆಗೊಳಿಸಿದರು.

ಸಂಡೂರು, ನ.24: ಕ್ಷೇತ್ರದ ಪ್ರಸಿದ್ಧ ಶ್ರೀ ಕುಮಾರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ವಿಶ್ವವಾಣಿ ಪತ್ರಿಕೆ ಹೊರತಂದಿರುವ ಶ್ರೀ ಕುಮಾರಸ್ವಾಮಿ ಜಾತ್ರಾ ಮಹೋತ್ಸವ-2026 ವಿಶೇಷ ಸಂಚಿಕೆಯನ್ನು‌ (Sandur News) ಮಂಗಳವಾರ ಬಿಡುಗಡೆಗೊಳಿಸಲಾಯಿತು.

ಶ್ರೀ ಕುಮಾರಸ್ವಾಮಿ ಜಾತ್ರಾ ಮಹೋತ್ಸವ-2026 ವಿಶೇಷ ಸಂಚಿಕೆಯನ್ನು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ, ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ, ಸಂಸದ ಈ. ತುಕಾರಾಂ, ವಿಜಯನಗರ ಶಾಸಕ ಎಚ್.ಆರ್. ಗವಿಯಪ್ಪ, ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ ಅವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ವಿಶ್ವವಾಣಿ ಪತ್ರಿಕೆ ಜಿಲ್ಲಾ ವರದಿಗಾರ ಅನಂತ ಪದ್ಮನಾಭ ರಾವ್, ಸಂಡೂರು ತಾಲೂಕು ವರದಿಗಾರ ಚಿದಂಬರ ಎಸ್. ನಾನಾವಟೆ ಉಪಸ್ಥಿತರಿದ್ದರು.