Self Harming: ಮಾಜಿ ಪ್ರೇಯಸಿಯನ್ನು ಮಚ್ಚಿನಿಂದ ಕೊಚ್ಚಿ ರೈಲಿಗೆ ತಲೆ ಕೊಟ್ಟ ಭಗ್ನಪ್ರೇಮಿ!
Self Harming: ಮಾಜಿ ಪ್ರೇಯಸಿಯನ್ನು ಮಚ್ಚಿನಿಂದ ಕೊಚ್ಚಿ ರೈಲಿಗೆ ತಲೆ ಕೊಟ್ಟ ಭಗ್ನಪ್ರೇಮಿ!
ಹರೀಶ್ ಕೇರ
January 4, 2025
ಬಳ್ಳಾರಿ: ಜಿಲ್ಲೆಯ ಸಂಡೂರಿನಲ್ಲಿ ಘೋರ ಅಪರಾಧ ಪ್ರಕರಣವೊಂದು (Bellary Crime News) ನಡೆದುಹೋಗಿದೆ. ಭಗ್ನಪ್ರೇಮಿಯೊಬ್ಬ ಪ್ರೇಯಸಿ ಹಾಗೂ ಆಕೆಯ ಕುಟುಂಬಸ್ಥರ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ (Assault Case) ಮಾಡಿ, ಬಳಿಕ ತಾನು ಕೂಡ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ.
ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ಪಟ್ಟಣದ ಚರ್ಚ್ ಶಾಲಾ ರಸ್ತೆಯಲ್ಲಿ ಘಟನೆ ನಡೆದಿದೆ. ಯುವತಿ ಸೇರಿ ಆಕೆಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಹೊಸಪೇಟೆ ಮೂಲದ ನವೀನ್ ಕುಮಾರ್ ಎಂದು ಗುರುತಿಸಲಾಗಿದೆ. ಯುವತಿ ಹಾಗೂ ಆಕೆಯ ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಾಳುಗಳನ್ನು ತೋರಣಗಲ್ಲು ಜಿಂದಾಲ್ ಸಂಜೀವಿನಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ನವೀನ್ ಪ್ರೇಯಸಿ ಸೇರಿ ಮೂವರ ಮೇಲೆ ಮಚ್ಚಿನಿಂದ ದಾಳಿ ಮಾಡಿದ್ದ.
ನವೀನ್ ಹಾಗೂ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ನವೀನ್ ಕುಮಾರ್ ಬಾಳೆಹಣ್ಣು ವ್ಯಾಪಾರ ಮಾಡಿಕೊಂಡಿದ್ದ. ಯುವತಿ ಕಾಲೇಜು ಹೋಗುವಾಗಲೇ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ. ಎಂಸಿಎ ಓದಬೇಕು ಅಂತ ಯುವತಿ ಪ್ರೀತಿಗೆ ಬ್ರೇಕ್ ಹಾಕಿ ಆತನನ್ನು ಇನ್ನು ಸಂಪರ್ಕಿಸಬೇಡ ಎಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಭಗ್ನಪ್ರೇಮಿ ನವೀನ್ ಕುಮಾರ್ ನಿನ್ನೆ ಸಂಜೆ ಸಂಡೂರಿಗೆ ಬಂದು ಹಲ್ಲೆ ಮಾಡಿದ್ದಾನೆ.
ಹಲ್ಲೆ ಮಾಡಿದ ದೇಗುಲದ ಬಳಿ ನವೀನ್ ಕುಮಾರ್ ಕಾರ್ ಬಿಟ್ಟು ಹೋಗಿದ್ದ. ಕಾರನ್ನು ವಶಕ್ಕೆ ಪಡೆದ ಪೊಲೀಸರು ನವೀನ್ ಕುಮಾರ್‌ಗಾಗಿ ಶೋಧ ನೆಡೆಸಿದ್ದರು. ಆದರೆ ಯಶವಂತ್ ನಗರದ ಬಳಿ ರೈಲಿಗೆ ತಲೆ ಕೊಟ್ಟು ನವೀನ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಯ ಸಂಬಂಧ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಡುಬೀದಿಯಲ್ಲಿ ಜೆಡಿಎಸ್ ಮುಖಂಡನ ಲಾಂಗ್‌ನಿಂದ ಕೊಚ್ಚಿ ಕೊಲೆ
ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡನನ್ನು (JDS leader) ನಡುಬೀದಿಯಲ್ಲೇ ಲಾಂಗ್‌ನಿಂದ ಕೊಚ್ಚಿ ಬರ್ಬರವಾಗಿ ಕೊಲೆ (Murder Case) ಮಾಡಿರುವ ಘಟನೆ ಚಿಕ್ಕಬಳ್ಳಾಪುರದ (Chikkaballapura news) ತಮ್ಮನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ.
ಹತ್ಯೆಗೊಳಗಾದ ವ್ಯಕ್ತಿ ತಮ್ಮನಾಯಕನಹಳ್ಳಿ ಗ್ರಾಮದ ವೆಂಕಟೇಶ್ ಅಲಿಯಾಸ್ ಗೋಲ್ಡ್ ವೆಂಕಟೇಶ್ (50). ಎಂದಿನಂತೆ ವೆಂಕಟೇಶ್ ರಾತ್ರಿ 9 ಗಂಟೆ ಸುಮಾರಿಗೆ ತಮ್ಮನಾಯಕನಹಳ್ಳಿ ಗೇಟ್‌ನಲ್ಲಿರುವ ಮೆಡಿಕಲ್ ಸ್ಟೋರ್‌ನಿಂದ ಮನೆಯತ್ತ ಸ್ಕೂಟಿ ಏರಿ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ವೆಂಕಟೇಶ್ ಅವರಿಗೆ ಅಡ್ಡ ಬಂದು ಲಾಂಗ್‌ನಿಂದ ಬಲವಾಗಿ ಬೀಸಿದ್ದಾರೆ.
ಎಡಗೈ ತೋಳಿನ ಭಾಗ ಕಟ್ ಆಗಿ, ಬೈಕ್ ಸಮೇತ ವೆಂಕಟೇಶ್ ನೆಲಕ್ಕೆ ಬಿದ್ದಿದ್ದಾರೆ. ಕೂಡಲೇ ಮನಸ್ಸೋ ಇಚ್ಛೆ ಮುಖಕ್ಕೆ ಹಾಗೂ ಹೊಟ್ಟೆ, ಎದೆಗೆ ಲಾಂಗ್‌ನಿಂದ ಕೊಚ್ಚಲಾಗಿದೆ. ಪರಿಣಾಮ ವೆಂಕಟೇಶ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಊರಿನ ರಸ್ತೆಯಲ್ಲಿರುವ ಬಾರ್ ಬಳಿ ಅಕ್ಕ ಪಕ್ಕದ ಕೆಲವು ಗ್ರಾಮದ ಯುವಕರು ಕುಡಿದು ಗಲಾಟೆ ಮಾಡುತ್ತಿದ್ದರು. ವೆಂಕಟೇಶ್ ಮೂರು ದಿನಗಳ ಹಿಂದೆ ಈ ಯುವಕರಿಗೆ ಬೈದು ಬುದ್ದಿವಾದ ಹೇಳಿದ್ದರು. ಹಾಗಾಗಿ ಆ ಹುಡುಗರು ಕೊಲೆ ಮಾಡಿರಬಹುದು ಎಂದು ವೆಂಕಟೇಶ್ ಅವರ ಪುತ್ರ ಶಂಕೆ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮತ್ತು ಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Road Accident: ಡಿವೈಡರ್‌ಗೆ ಕಾರು ಗುದ್ದಿಸಿದ ಹೈಸ್ಕೂಲ್ ವಿದ್ಯಾರ್ಥಿಗಳು, ಇಬ್ಬರು ಸಾವು