ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮಂತ್ರಾಲಯದ ಬಳಿ ದುರಂತ; ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಐವರು ನೀರುಪಾಲು

ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾಗಿರುವ ಘಟನೆ ನಡೆದಿದೆ. ಮೃತರನ್ನು ಹೈದರಾಬಾದ್‌ ಮೂಲದ ಯುವನ ಚಂದ್ರ(5), ಸತೀಶ್(35), ಮಂತ್ರಾಲಯ ಗ್ರಾಮದ ರಾಘವೇಂದ್ರ(25), ಧನುಷ್(23) ಉರವಕೊಂಡದ ಸಂಧ್ಯಾ(22) ಎಂದು ಗುರುತಿಸಲಾಗಿದೆ. ಮತ್ತೋರ್ವ ಯುವತಿ ಅಪರ್ಣಾ ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಂಗ್ರಹ ಚಿತ್ರ

ಬಳ್ಳಾರಿ: ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾಗಿರುವ ಘಟನೆ ನಡೆದಿದೆ. ಮೃತರನ್ನು ಹೈದರಾಬಾದ್‌ ಮೂಲದ ಯುವನ ಚಂದ್ರ(5), ಸತೀಶ್(35), ಮಂತ್ರಾಲಯ ಗ್ರಾಮದ ರಾಘವೇಂದ್ರ(25), ಧನುಷ್(23) ಉರವಕೊಂಡದ ಸಂಧ್ಯಾ(22) ಎಂದು ಗುರುತಿಸಲಾಗಿದೆ. ಮತ್ತೋರ್ವ ಯುವತಿ ಅಪರ್ಣಾ (Mantralaya) ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರು ಮಂತ್ರಾಲಯದಲ್ಲಿ ಸಂಬಂಧಿಕರ ಮನೆಯಲ್ಲಿ ಏರ್ಪಡಿಸಿದ್ದ ಸತ್ಯನಾರಾಯಣ ಪೂಜೆಗೆ ಬಂದಿದ್ದರು.

ನದಿಯ ನೀರಿನ ಆ ತಿಳಿಯದೆ ಈಜಲು ಹೋಗಿ ಐವರು ಜಲ ಸಮಾಧಿಯಾಗಿದ್ದಾರೆ. ಮೃತರ ಪೈಕಿ ರಾಘವೇಂದ್ರ, ಸಂಧ್ಯಾ ಮೃತದೇಹ ಪತ್ತೆಯಾಗಿದ್ದು, ಉಳಿದವರಿಗಾಗಿ ಸ್ಥಳದಲ್ಲಿ ಶೋಧ ಮುಂದುವರಿದಿದೆ. ಮೃತದೇಹಗಳಿಗಾಗಿ ಮೀನುಗಾರರು ಹುಡುಕಾಟ ನಡೆಸುತ್ತಿದ್ದು ಎಮ್ಮಿಗನೂರು ಡಿವೈಎಸ್‌ಪಿ ಭಾರ್ಗವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೆರೆಯಲ್ಲಿ ಮುಳುಗಿ ಸಾವು

ಈಜಲು ಹೋಗಿದ್ದ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ಸಿಂಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಿಂಗನಳ್ಳಿ ಗ್ರಾಮದ ನಿವಾಸಿಗಳಾದ ಅಬ್ಬಾಸ್ ವಟ್ನಾಳ (13), ಸುಭಾನಿ ಬಾಗಜಿಕೊಪ್ಪ (12) ಹಾಗೂ ಅಸ್ಲಾಂ ವಟ್ನಾಳ (15) ಮೃತಪಟ್ಟ ಬಾಲಕರು. ಮೂವರು ಬಾಲಕರ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಬ್ಬಾಸ್ ವಟ್ನಾಳ ಹಾಗೂ ಅಸ್ಲಾಂ ವಟ್ನಾಳ ಸಹೋದರರಾಗಿದ್ದು, ಶಿಂಗನಹಳ್ಳಿ ಗ್ರಾಮದವರು. ಸುಭಾನಿ ಎಂಬ ಬಾಲಕ ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ನಿವಾಸಿಯಾಗಿದ್ದು, ಮೂವರು ಸೇರಿ ಕೆರೆಗೆ ಈಜಲು ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಈಜಾಡುವಾಗ ಕೆರೆಯಲ್ಲಿ ಮುಳುಗಿ ಬಾಲಕರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದರು. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಐಟಿ ಕೆಲಸ ಬಿಟ್ಟು ಬಂದು ಕೃಷಿಕನಾಗಿದ್ದ ಬೆಂಗಳೂರು ಟೆಕ್ಕಿ ಸಿಡಿಲು ಬಡಿದು ಸಾವು

ಕಪ್ಪೆ ಚಿಪ್ಪು ಹೆಕ್ಕಲು ಹೋಗಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸಮೀಪ ಮೊನ್ನೆ ಮೊನ್ನೆಯಷ್ಟೇ 11 ಮಂದಿ ಪ್ರಾಣ ಕಳೆದುಕೊಂಡಿದ್ದರು. ಕಪ್ಪೆ ಚಿಪ್ಪು ಸಂಗ್ರಹಿಸುತ್ತಿದ್ದ ವೇಳೆ ಏಕಾಏಕಿ ನದಿಯಲ್ಲಿ ನೀರು ಹೆಚ್ಚಾದ ಪರಿಣಾಮ ಮಹಿಳೆಯರೂ ಸೇರಿ ಹಲವರು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿ ದುರಂತ ಸಂಭವಿಸಿತ್ತು.

Vishakha Bhat Heggar

View all posts by this author