#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Shocking: ಮೊಬೈಲ್‌ ಗೀಳು; ತಂಗಿಯ ಎದುರೇ ಉಡದಾರದಿಂದ ನೇಣು ಬಿಗಿದುಕೊಂಡ ಬಾಲಕ!

ಮೊಬೈಲ್‌ ಗೀಳಿದ್ದ 13 ವರ್ಷದ ಬಾಲಕನೋರ್ವ 9 ವರ್ಷದ ತನ್ನ ತಂಗಿಯ ಎದುರೇ ಉಡದಾರದಿಂದ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.

ಉಡದಾರದಿಂದ ನೇಣು ಬಿಗಿದುಕೊಂಡು 13 ವರ್ಷದ ಬಾಲಕ ಸೂಸೈಡ್‌

Shocking

Profile Deekshith Nair Jan 30, 2025 11:14 AM

ಬೆಂಗಳೂರು: ಮೊಬೈಲ್ ಗೀಳಿಗೆ 13 ವರ್ಷದ ಬಾಲಕನೋರ್ವ ತನ್ನ ತಂಗಿ ಎದುರೇ ಉಡದಾರದಿಂದ ನೇಣು(Suicide) ಬಿಗಿದುಕೊಂಡು ಸಾವನ್ನಪ್ಪಿರುವ (Shocking) ಆಘಾತಕಾರಿ ಘಟನೆಯೊಂದು ಬೆಂಗಳೂರಿನಲ್ಲಿ(Bangalore) ನಡೆದಿದೆ. ಧ್ರುವ(Dhruva) ಆತ್ಮಹತ್ಯೆಗೆ ಶರಣಾದ ಬಾಲಕ. ಈತ 9 ವರ್ಷದ ತಂಗಿಯ ಎದುರು ನೇಣು(Self Harming) ಬಿಗಿದುಕೊಂಡಿದ್ದಾನೆ ಎನ್ನಲಾಗಿದೆ.

ಮೊಬೈಲ್‌ ಗೀಳಿದ್ದ ಧ್ರುವ ಮನೆಯವರ ಮಾತು ಕೇಳದೆ ಹೆಚ್ಚಾಗಿ ಮೊಬೈಲ್ ಬಳಸುತ್ತಿದ್ದ ಎಂದು ಪೊಲೀಸರ ತನಿಖೆಯ ಮೂಲಕ ಬೆಳಕಿಗೆ ಬಂದಿದೆ. ಮಂಗಳವಾರ(ಜ.28) ಪೋಷಕರು ಕೆಲಸಕ್ಕೆ ತೆರಳಿದ್ದರು. ಶಾಲೆ ಮುಗಿಸಿ ಬಂದ ಅಣ್ಣ-ತಂಗಿ ಮಾತ್ರ ಮನೆಯಲ್ಲಿದ್ದರು. ಆಗ ಬಾಲಕ ಪ್ಯಾಂಟ್ ತೆಗೆದು ಸೊಂಟದ ಉಡದಾರ ಫ್ಯಾನ್‌ಗೆ ಕಟ್ಟಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಈ ಸುದ್ದಿಯನ್ನೂ ಓದಿ:Micro Finance Torture: ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ; 30 ಬಿಪಿ ಮಾತ್ರೆ ನುಂಗಿ ಮಹಿಳೆ ಆತ್ಮಹತ್ಯೆಗೆ ಯತ್ನ

ಸಂಜೆ 7 ಗಂಟೆ ಸರಿ ಸುಮಾರಿಗೆ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಂಗಿಗೆ ತನ್ನ ಅಣ್ಣ ಏನು ಮಾಡುತ್ತಿದ್ದಾನೆ ಎಂಬ ಅರಿವಿಲ್ಲದೆ ಸುಮ್ಮನೆ ನೋಡುತ್ತಾ ನಿಂತಿದ್ದಳು ಎಂದು ತಿಳಿದು ಬಂದಿದೆ. ಉಡದಾರವನ್ನು ಕುತ್ತಿಗೆಗೆ ಬಿಗಿದು ತುಂಡಾಗಿ ಬಾಲಕ ಕೆಳಗೆ ಬಿದ್ದಿದ್ದಾನೆ. ಬಾಲಕ ಕೆಳಗೆ ಬಿದ್ದ ಸಮಯಕ್ಕೆ ಕೆಲಸ ಮುಗಿಸಿ ಆಗಷ್ಟೇ ತಾಯಿ ಮನೆಗೆ ಬಂದಿದ್ದಾರೆ. ಘಟನೆ ನೋಡಿ ಆತಂಕಗೊಂಡ ತಾಯಿ ಅಕ್ಕಪಕ್ಕದವರ ಸಹಾಯ ಪಡೆದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಬಾಲಕನನ್ನು ಪರೀಕ್ಷಿಸಿದ ವೈದ್ಯರು ಆತ ಮನೆಯಲ್ಲಿಯೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಬಾಲಕನ ತಂದೆ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದು,ತಾಯಿ ಗಾರ್ಮೆಂಟ್ಸ್‌ ಒಂದರಲ್ಲಿ ಉದ್ಯೋಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ಈ ಘಟನೆ ನಡೆದಿದ್ದು,ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.