Bangalore Stampede: ‘ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಕಾಲ್ತುಳಿತ- ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ದೂರು
Case against CM, DCM:ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಯ ಪದಾಧಿಕಾರಿಗಳ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 106 ರ ಅಡಿಯಲ್ಲಿ ಪ್ರಕರಣ ದಾಖಲಿಸಲು ಆಗ್ರಹಿಸಿದ್ದಾರೆ.
 
                                -
 Rakshita Karkera
                            
                                Jun 5, 2025 1:06 PM
                                
                                Rakshita Karkera
                            
                                Jun 5, 2025 1:06 PM
                            ಬೆಂಗಳೂರು: ರಾಜ್ಯ ರಾಜಧಾನಿಯ ಬೆಂಗಳೂರಿನಲ್ಲಿ ನಿನ್ನೆ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ(Bangalore Stampede) ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಪ್ರಕರಣಕ್ಕೆ ಸಿಎಂ, ಡಿಸಿಎಂ ಮತ್ತು ಪೊಲೀಸ್ ವ್ಯವಸ್ಥೆಯೇ ನೇರ ಹೊಣೆ ಎಂಬುದು ಎಲ್ಲರ ಆರೋಪ. ಈ ನಡುವೆ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ(Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಯ ಪದಾಧಿಕಾರಿಗಳ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 106 ರ ಅಡಿಯಲ್ಲಿ ಪ್ರಕರಣ ದಾಖಲಿಸಲು ಆಗ್ರಹಿಸಿದ್ದಾರೆ.

ದೂರಿನಲ್ಲಿ ಏನಿದೆ?
ಐಪಿಎಲ್ ಪಂದಾವಳಿಯಲ್ಲಿ ಪಂಜಾಬ್ ತಂಡ ವಿರುದ್ಧ ಆರ್‌ಸಿಬಿ ಗೆಲುವು ಸಾಧಿಸಿ ಚಾಂಪಿಯನ್ ಆಗಿ ಹೊರಬಂದಿತ್ತು. ಈ ನಿಟ್ಟಿನಲ್ಲಿ ಸರ್ಕಾರ ಕೇವಲ ಪ್ರಚಾರಕ್ಕಾಗಿ, ರಾಜಕೀಯ ಲಾಭಕ್ಕಾಗಿ ಯಾವುದೇ ಪೂರ್ವ ಸಿದ್ದತೆ, ತಯಾರಿ ಇಲ್ಲದೆಯೇ ವಿಜಯೋತ್ಸ ನಡೆಸಲು ಮುಂದಾಯಿತು. ತರಾತುರಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಯಾವುದೇ ಸೂಕ್ತ ಭದ್ರತೆ ಕೈಗೊಂಡಿಲ್ಲ. ಸರ್ಕಾರದ ಈ ನಿರ್ಲಕ್ಷ್ಯಕ್ಕೆ ಸುಮಾರು 11ಜನ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಈ ಘಟನೆಗೆ ಕಾರಣರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಯ ಪದಾಧಿಕಾರಿಗಳು ಹಾಗೂ ಇತರರ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ ಕಲಂ 106 ರ ಪ್ರಕಾರ ಮೊಕದ್ದಮೆ ದಾಖಲಿಸಿ, ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ಮನವಿ ಮಾಡಲಾಗಿದೆ.
ಈ ಸುದ್ದಿಯನ್ನೂ ಓದಿ: Bengaluru Stampede: ಕಾಲ್ತುಳಿತ ದುರಂತ, ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿದ ಹೈಕೋರ್ಟ್
 
            