ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಡಿಸಿಎಂ ಡಿಕೆ ಶಿವಕುಮಾರ್‌ ಪಿಎಸ್‌ ಕಾರು ಡಿಕ್ಕಿ, ಬೈಕ್‌ ಸವಾರ ಸಾವು

ಮೃತ ಮಂಜುನಾಥ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟಿದ್ದರು. ರಾಜೇಂದ್ರ ಪ್ರಸಾದ್ ಕಾರು ಯಲ್ಲಮ್ಮನ ದರ್ಶನ ಪಡೆದು ವಾಪಸಾಗುವಾಗ ಅಪಘಾತ ಸಂಭವಿಸಿದೆ. ಕಾರು ಗುದ್ದಿದ ರಭಸಕ್ಕೆ ಮಂಜುನಾಥ್ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ರಾಜೇಂದ್ರ ಪ್ರಸಾದ್ ಹಾಗೂ ಕಾರು ಚಾಲಕನಿಗೂ ಗಾಯಗಳಾಗಿವೆ.

ಡಿಸಿಎಂ ಡಿಕೆ ಶಿವಕುಮಾರ್‌ ಪಿಎಸ್‌ ಕಾರು ಡಿಕ್ಕಿ, ಬೈಕ್‌ ಸವಾರ ಸಾವು

ಬೆಳಗಾವಿ ಕಾರು ಅಪಘಾತ -

ಹರೀಶ್‌ ಕೇರ
ಹರೀಶ್‌ ಕೇರ Dec 19, 2025 7:22 AM

ಬೆಳಗಾವಿ, ಡಿ.19: ಡಿಸಿಎಂ ಡಿಕೆ ಶಿವಕುಮಾರ್​ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಕಾರು ಡಿಕ್ಕಿಯಾಗಿ ಬೈಕ್​ ಸವಾರ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಹೊರವಲಯದಲ್ಲಿ ನಡೆದಿದೆ. ಮಂಜುನಾಥ್ ಬೈರ್ನಟ್ಟಿ (30) ಸಾವನ್ನಪ್ಪಿರುವ ಬೈಕ್​ ಸವಾರ. ಮೃತ ಮಂಜುನಾಥ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟಿದ್ದರು. ಅತ್ತ ರಾಜೇಂದ್ರ ಪ್ರಸಾದ್ ಕಾರು ಯಲ್ಲಮ್ಮನ ದರ್ಶನ ಪಡೆದು ವಾಪಸಾಗುವಾಗ ಅಪಘಾತ ಸಂಭವಿಸಿದೆ.

ಕಾರು ಗುದ್ದಿದ ರಭಸಕ್ಕೆ ಮಂಜುನಾಥ್ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ರಾಜೇಂದ್ರ ಪ್ರಸಾದ್ ಹಾಗೂ ಕಾರು ಚಾಲಕನಿಗೂ ಗಾಯಗಳಾಗಿದ್ದು, ಧಾರವಾಡ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.​ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೈಕ್‌ಗೆ ಬೊಲೆರೋ ಡಿಕ್ಕಿಯಾಗಿ ಮೂವರು ಸಾವು

ಕೊಪ್ಪಳ: ಬೈಕ್‌ಗೆ ಬೊಲೆರೋ ವಾಹನ ಡಿಕ್ಕಿಯಾಗಿ (Road Accident) ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಕೊಪ್ಪಳ (Koppala) ತಾಲೂಕಿನ ಇಂದರಗಿ ಗ್ರಾಮದ ಬಳಿ ನಡೆದಿದೆ. ಮೃತರು ಕೊಪ್ಪಳ ತಾಲೂಕಿನ ಹೊಸಹಳ್ಳಿ ಗ್ರಾಮದ ನಿವಾಸಿಗಳಾದ ವಾಜೀದ್, ರಾಜಾ ಹುಸೇನ್ ಹಾಗೂ ಗಂಗಾವತಿ ತಾಲೂಕಿನ ಶ್ರೀರಾಮನಗರದ ಆಸೀಫ್‌ ಎಂದು ಗುರುತಿಸಲಾಗಿದೆ.

ಯದ್ವಾ-ತದ್ವಾ ಆಡಿ ಕಾರು ಚಲಾಯಿಸಿ ಸ್ಕೂಟರ್‌ಗೆ ಡಿಕ್ಕಿ-ವಿದ್ಯಾರ್ಥಿ ಅರೆಸ್ಟ್‌

ಬೈಕ್ ಸವಾರರು ಶ್ರೀರಾಮನಗರದಿಂದ ಹೊಸಹಳ್ಳಿ ಗ್ರಾಮಕ್ಕೆ ಹೋಗುವಾಗ ಅಪಘಾತ ನಡೆದಿದೆ. ಅಪಘಾತದ ನಂತರ ಬುಲೆರೋ ವಾಹನದ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ‌ ನೀಡಿ, ಪರಿಶೀಲನೆ ನಡೆಸಿದ್ದಾರೆ.