ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಪರಮಾತ್ಮ ಬರ್ತಾನೆ ಜೀವ ಒಯ್ಯುತ್ತಾನೆ; ಬೆಳಗಾವಿಯಲ್ಲಿ ದೇಹತ್ಯಾಗ ಮಾಡಲು ಹೊರಟ 21 ಭಕ್ತರು!

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಗ್ರಾಮದಲ್ಲಿ ನಡೆದಿದೆ. 2014ರ ಗಲಭೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸಂತ ರಾಮಪಾಲ ಅವರ ಪುಸ್ತಕ ಓದಿ ಹಾಗೂ ಪ್ರವಚನ ಕೇಳಿ ಪ್ರಭಾವಿತರಾಗಿದ್ದ 21 ಭಕ್ತರು ದೇಹತ್ಯಾಗ ಮಾಡಲು ಮುಂದಾಗಿದ್ದರು. ಮುಂದೇನಾಯ್ತು ಎಂಬ ಕುರಿತ ಮಾಹಿತಿ ಇಲ್ಲಿದೆ.

ಚಿಕ್ಕೋಡಿ: `ಪರಮಾತ್ಮ ಬರ್ತಾನೆ ಜೀವ ಒಯ್ಯುತ್ತಾನೆ’ ಎಂದು ದೇವರನ್ನು ನೋಡಲು 21 ಭಕ್ತರು ದೇಹತ್ಯಾಗ (self-immolation) ಮಾಡಲು ಹೊರಟಿದ್ದ ಘಟನೆ ಬೆಳಗಾವಿ (Belagavi News) ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಗ್ರಾಮದಲ್ಲಿ ನಡೆದಿದೆ. ಇದರಿಂದ ಈ ರೀತಿಯ ಮೂಢನಂಬಿಕೆಗಳು ಇನ್ನೂ ಜೀವಂತವಾಗಿದೆಯಾ ಎಂಬ ಪ್ರಶ್ನೆ ಉದ್ಭವವಾಗಿದೆ.

ಸೆ. 8ರಂದು ದೇಹತ್ಯಾಗ ಮಾಡೋದಕ್ಕೆ 21 ಭಕ್ತರು ಮುಂದಾದ ಘಟನೆ ನಡೆದಿತ್ತು. ಅನಂತಪುರ ಗ್ರಾಮದ ಇರಕರ ಕುಟುಂಬದ 4 ಜನ ಸೇರಿದಂತೆ 21 ಭಕ್ತರು ಪ್ರಾಣ ತ್ಯಾಗಕ್ಕೆ ನಿರ್ಧಾರ ಮಾಡಿದ್ದರು. ಹರಿಯಾಣದ ವಿವಾದತ್ಮಕ ಸಂತ ರಾಮಪಾಲ ಅನುಯಾಯಿಗಳು ದೇಹತ್ಯಾಗ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ.

2014ರ ಗಲಭೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸಂತ ರಾಮಪಾಲ ಅವರ ಪುಸ್ತಕ ಓದಿ ಹಾಗೂ ಪ್ರವಚನ ಕೇಳಿ ಅನಂತಪುರ ಗ್ರಾಮದ ಇರಕರ ಕುಟುಂಬದ, ತುಕಾರಾಮ, ಸಾವಿತ್ರಿ, ರಮೇಶ್, ವೈಷ್ಣವಿ ಪ್ರಾಣತ್ಯಾಗಕ್ಕೆ ಮುಂದಾಗಿದ್ದರು.

ಈ ಸುದ್ದಿಯನ್ನೂ ಓದಿ | Dharmasthala case: ಧರ್ಮಸ್ಥಳಕ್ಕೆ ಮಸಿ ಬಳಿದವರಿಗೆ ತಕ್ಕ ಶಾಸ್ತಿ ಯಾವಾಗ?: ಪ್ರಲ್ಹಾದ್‌ ಜೋಶಿ ಪ್ರಶ್ನೆ

ಇರಕರ ಕುಟುಂಬ ಹಾಗೂ ಉತ್ತರ ಪ್ರದೇಶದ 17 ಭಕ್ತರು ಪ್ರಾಣ ತ್ಯಾಗಕ್ಕೆ ನಿರ್ಧಾರ ಮಾಡಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಚಿಕ್ಕೋಡಿ ಉಪ ವಿಬಾಗಾಧಿಕಾರಿ ಸುಭಾಷ ಸಂಪಗಾಂವಿ ಹಾಗೂ ಪೊಲೀಸರು ಮತ್ತು ಮಠಾಧೀಶರಿಂದ ಭಕ್ತರ ಮನವೊಲಿಕೆ ಮಾಡಿದ ಬಳಿಕ ಸದ್ಯ ದೇಹತ್ಯಾಗ ‌ನಿರ್ಧಾರದಿಂದ ಭಕ್ತರು ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ.