ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Rains: ಗೋಕಾಕ್‌ನಲ್ಲಿ ಭಾರಿ ಮಳೆಯಿಂದ ಗೋಡೆ ಕುಸಿದು 3 ವರ್ಷದ ಬಾಲಕಿ ಸಾವು

Karnataka Rains: ಬೆಳಗಾವಿ ಜಿಲ್ಲೆಯ ಗೋಕಾಕ್‌ನ ಮಹಾಲಿಂಗೇಶ್ವರ ನಗರದಲ್ಲಿ ಘಟನೆ ನಡೆದಿದೆ. ಭಾರಿ ಮಳೆಯ ಸಮಯದಲ್ಲಿ ಪಕ್ಕದ ಮನೆಯ ಗೋಡೆ ಕುಸಿದು ಮೇಲೆ ಬಿದ್ದಿದ್ದರಿಂದ ಮೂರು ವರ್ಷದ ಮಗು ಮೃತಪಟ್ಟು, ಮತ್ತೊಂದು ಮಗುವಿಗೆ ಗಾಯಗಳಾಗಿವೆ.

ಗೋಕಾಕ್‌ನಲ್ಲಿ ಭಾರಿ ಮಳೆಯಿಂದ ಗೋಡೆ ಕುಸಿದು 3 ವರ್ಷದ ಬಾಲಕಿ ಸಾವು

Profile Prabhakara R May 26, 2025 3:52 PM

ಬೆಳಗಾವಿ: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಆರಂಭವಾಗಿದ್ದು, ವಿವಿಧೆಡೆ ಭಾರಿ ಅವಾಂತರ ಸೃಷ್ಟಿಸುತ್ತಿದೆ. ಈ ನಡುವೆ ಗೋಡೆ ಕುಸಿದು 3 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ (Karnataka Rains) ನಡೆದಿದೆ. ಮೃತಳನ್ನು ಕೀರ್ತಿಕಾ ನಾಗೇಶ್‌ ಪೂಜಾರಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆಕೆಯ ತಾಯಿ ರೇಷ್ಮಾ ಮತ್ತು ತಂಗಿ ಖುಷಿ ಗಾಯಗೊಂಡಿದ್ದಾರೆ. ಇವರು ಪ್ರಾಣಾಪಾಯದಿಂದ ಪಾರಾಗಿದ್ದು, ಗೋಕಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೆಳಗ್ಗೆ 7.30 ರ ಸುಮಾರಿಗೆ ಗೋಕಾಕ್‌ನ ಮಹಾಲಿಂಗೇಶ್ವರ ನಗರದಲ್ಲಿ ಈ ಘಟನೆ ಸಂಭವಿಸಿದೆ. ಕೃತಿಕಾ ಮತ್ತು ಆಕೆಯ ಸಹೋದರಿ ಖುಷಿ ಮಲಗಿದ್ದಾಗ, ಭಾರಿ ಮಳೆಯ ಸಮಯದಲ್ಲಿ ಪಕ್ಕದ ಮನೆಯ ಗೋಡೆ ಕುಸಿದು ಅವರ ಮೇಲೆ ಬಿದ್ದಿದೆ. ಈ ದುರ್ಘಟನೆಯಲ್ಲಿ ಕೃತಿಕಾ ಸ್ಥಳದಲ್ಲೇ ಸಾವನ್ನಪ್ಪಿದರೆ, ಆಕೆಯ ತಾಯಿ ರೇಷ್ಮಾ ಮತ್ತು ಖುಷಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Corona Virus: ರಾಜ್ಯದಲ್ಲಿ ಕೊರೊನಾಗೆ ಇನ್ನೊಬ್ಬ ಬಲಿ, ಪ್ರಕರಣ 98ಕ್ಕೆ ಏರಿಕೆ

ಇಂದು ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರಿ ಮಳೆಯಾಗುವ (Karnataka Weather) ಮುನ್ಸೂಚನೆ ಸಿಕ್ಕಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆಯು ಮುಂದಿನ ಎರಡು ದಿನ ರೆಡ್‌ ಅಲರ್ಟ್‌ ಘೋಷಿಸಿದೆ. ಇನ್ನು ಮೇ 26ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಗದಗ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 21°C ಇರುವ ಸಾಧ್ಯತೆ ಇದೆ.

ಮೇ 27ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ರಾಯಚೂರು, ಯಾದಗಿರಿ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮೇ 28ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್, ಹಾವೇರಿ, ಬಾಗಲಕೋಟೆ, ಕಲಬುರಗಿ, ವಿಜಯಪುರ, ಗದಗ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Karnataka Rains: ಶಿರಾಡಿ ಘಾಟ್‌ನಲ್ಲಿ ಭೂ ಕುಸಿತ, ಸಂಚಾರಕ್ಕೆ ಅಡಚಣೆ; ಸಕಲೇಶಪುರದಲ್ಲಿ ಹೋಟೆಲ್ ಗೋಡೆ ಬಿದ್ದು ನಾಲ್ವರಿಗೆ ಗಾಯ

ಮೇ 29 ಮತ್ತು 30ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್, ಹಾವೇರಿ, ಬಾಗಲಕೋಟೆ, ಕಲಬುರಗಿ, ವಿಜಯಪುರ, ಗದಗ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು. ರಾಮನಗರ, ತುಮಕೂರು ಮತ್ತು ವಿಜಯನಗರ ಭಾರಿ ಮಳೆಯಾಗುವ ಸಾಧ್ಯತೆ ಇದೆ.