ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Belagavi News: ಬಸ್​ನಲ್ಲಿ ವಿಂಡೋ ಸೀಟ್​ಗಾಗಿ ಕಿತ್ತಾಟ; ಕಿಡಿಗೇಡಿಗಳಿಂದ ಯುವಕನಿಗೆ ಚಾಕು ಇರಿತ

Stabbing Case: ಬೆಳಗಾವಿ ತಾಲೂಕಿನ ಪಂತಬಾಳೇಕುಂದ್ರಿ ಗ್ರಾಮದಿಂದ ಸಿಬಿಟಿಗೆ ಬರುತ್ತಿದ್ದ ಬಸ್​​ನಲ್ಲಿ ಸೀಟ್‌ಗಾಗಿ ಜಗಳವಾಗಿದೆ. ಈ ವೇಳೆ ಯುವಕನಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ. ಗಾಯಾಳುವನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ.

ಬಸ್​ನಲ್ಲಿ ಕಿಟಕಿ ಪಕ್ಕದ ಸೀಟ್​ಗಾಗಿ ಕಿತ್ತಾಟ; ಯುವಕನಿಗೆ ಚಾಕು ಇರಿತ

Profile Prabhakara R Jun 18, 2025 6:50 PM

ಬೆಳಗಾವಿ: ಕೆಎಸ್ಆರ್​ಟಿಸಿ ಬಸ್​​ನಲ್ಲಿ ಕಿಟಕಿ ಪಕ್ಕದ ಸೀಟ್​​ಗಾಗಿ ಯುವಕರ ನಡುವೆ ಗಲಾಟೆ ನಡೆದು ಅಪರಿಚಿತ ಯುವಕರ ಗುಂಪೊಂದು, ಯುವಕನಿಗೆ ಚಾಕು ಇರಿದು ಪರಾರಿಯಾದ ಘಟನೆ ಬೆಳಗಾವಿಯಲ್ಲಿ ಬುಧವಾರ ನಡೆದಿದೆ. ಬೆಳಗಾವಿ ತಾಲೂಕಿನ (Belagavi News) ಪಂತಬಾಳೇಕುಂದ್ರಿ ಗ್ರಾಮದಿಂದ ಸಿಬಿಟಿಗೆ ಬರುತ್ತಿದ್ದ ಬಸ್​​ನಲ್ಲಿ ಸೀಟ್‌ಗಾಗಿ ಜಗಳವಾಗಿದೆ. ಈ ವೇಳೆ ಯುವಕನಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ. ಪಂತಬಾಳೆಕುಂದ್ರಿ ಗ್ರಾಮದ ಮಾಜ್ ಸನದಿ (20) ಚಾಕು ಇರಿತಕ್ಕೆ ಒಳಗಾದ ಯುವಕ.

ಎದೆ ಭಾಗಕ್ಕೆ ಚಾಕು ಇರಿದು ಅಪರಿಚಿತ ಯುವಕರ ಗ್ಯಾಂಗ್ ಪರಾರಿಯಾಗಿದೆ. ಆತನನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಪಂತಬಾಳೇಕುಂದ್ರಿಯಿಂದ ಬೆಳಗಾವಿ ಕೇಂದ್ರ ಬಸ್ ನಿಲ್ದಾಣಕ್ಕೆ ಬರುವವರೆಗೂ ಪರಸ್ಪರ ಜಗಳವಾಡಿದ್ದಾರೆ. ಈ ವೇಳೆ ಅಪರಿಚಿತರು ಹರಿತವಾದ ಆಯುಧದಿಂದ ಯುವಕನಿಗೆ ಇರಿದಿದ್ದಾರೆ. ಈಗಾಗಲೇ ಬಸ್ ಯಾವುದೆಂದು ಗೊತ್ತಾಗಿದ್ದು, ಅಪರಿಚಿತರನ್ನು ಪತ್ತೆ ಮಾಡಲು 3 ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಡಿಸಿಪಿ ರೋಹನ್ ಜಗದೀಶ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನೂ ಓದಿ | Actress Rachita Ram: ಅಡ್ವಾನ್ಸ್‌ ಹಣ ವಾಪಸ್‌ ಕೊಡದ ಆರೋಪ; ರಚಿತಾ ರಾಮ್‌ ವಿರುದ್ಧ ಮತ್ತೊಂದು ದೂರು

ಮೊಬೈಲ್‌ನಲ್ಲಿ ಬರೋಬ್ಬರಿ 13 ಸಾವಿರ ಮಹಿಳೆಯರ ಅಶ್ಲೀಲ ಫೋಟೋ, ವಿಡಿಯೋ ಪತ್ತೆ; ಸಂಡೂರಿನಲ್ಲಿ ಕಾಮುಕ ಅರೆಸ್ಟ್

ಬಳ್ಳಾರಿ: ನಕಲಿ‌ ಖಾತೆ ಸೃಷ್ಟಿಸಿ ಮಹಿಳೆ ಹಾಗೂ ಯುವತಿಯರ ನಗ್ನ ಪೋಟೋ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಮೋಸ್ಟ್ ವಾಂಟೆಡ್​ ಕಾಮುಕ ಕೊನೆಗೂ ಬಳ್ಳಾರಿಯ ಸಂಡೂರಿನಲ್ಲಿ ಸಿಕ್ಕಿಬಿದ್ದಿದ್ದಾನೆ. ಶುಭಂ ಕುಮಾರ್ ಮನೋಜ್ ಪ್ರಸಾದ್ ಸಿಂಗ್(25) ಬಂಧಿತ ಆರೋಪಿ. ಆರೋಪಿಯು ಬೆತ್ತಲೆ ಫೋಟೋ, ವಿಡಿಯೋಗಳನ್ನು ಅಪ್ಲೋಡ್ ಮಾಡಿ ಮಹಿಳೆಯರ ಮಾನಹಾನಿ ಮಾಡುತ್ತಿದ್ದ. ಈ ಬಗ್ಗೆ ವಿದ್ಯಾರ್ಥಿನಿಯೊಬ್ಬಳು ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ್ದ ಮುಂಬೈ ಪೊಲೀಸರು, ಸಂಡೂರಿನಲ್ಲಿ ಕಾಮುಕ ಶುಭಂನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನ ಮೊಬೈಲ್‌​ನಲ್ಲಿ ಬರೋಬ್ಬರಿ 13,000 ಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ಛಾಯಾಚಿತ್ರಗಳು ಮತ್ತು ವೀಡಿಯೊಗಳು ಪತ್ತೆಯಾಗಿದ್ದು, ಇವುಗಳನ್ನು ನೋಡಿ ಪೊಲೀಸರೇ ಶಾಕ್‌ ಆಗಿದ್ದಾರೆ.

ದೆಹಲಿಯಲ್ಲಿ ಡಿಪ್ಲೊಮಾ ಪಡೆದಿದ್ದ ಶುಭಂ, ಸಂಡೂರಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಇದರ ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರು, ಯುವತಿಯರನ್ನು ಪರಿಚಯ ಮಾಡಿಕೊಂಡು ಬಳಿಕ ಅವರಿಗೆ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಪೀಡಿಸುತ್ತಿದ್ದ. ಇದಕ್ಕೆ ಒಪ್ಪದಿದ್ದಾಗ ಅವರ ಹೆಸರಿನಲ್ಲೇ ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ಫೋಟೋ, ವಿಡಿಯೋಗಳನ್ನು ಪೋಸ್ಟ್ ಮಾಡುತ್ತಿದ್ದ.

ಈ ಸುದ್ದಿಯನ್ನೂ ಓದಿ | Actress Rachita Ram: ಅಡ್ವಾನ್ಸ್‌ ಹಣ ವಾಪಸ್‌ ಕೊಡದ ಆರೋಪ; ರಚಿತಾ ರಾಮ್‌ ವಿರುದ್ಧ ಮತ್ತೊಂದು ದೂರು

ತನ್ನ ಹೆಸರಿನಲ್ಲಿ ನಕಲಿ ಖಾತೆ ರಚಿಸಿ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿರುವ ಸಂಬಂಧ ವಿದ್ಯಾರ್ಥಿನಿಯೊಬ್ಬಳು ನೀಡಿದ್ದ ದೂರು ದಾಖಲಿಸಿಕೊಂಡ ಬಳಿಕ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದರು. ಈ ಪ್ರಕರಣ ಸಂಬಂಧ ಗೂಗಲ್‌ನಿಂದ ತಾಂತ್ರಿಕ ಮಾಹಿತಿ ಸಂಗ್ರಹಿಸಿ, ಆರೋಪಿಯನ್ನು ಬಂಧಿಸಿದ್ದಾರೆ. ಶುಭಂ 10 ನಕಲಿ ಖಾತೆಗಳನ್ನು ಮತ್ತು 90ಕ್ಕೂ ಹೆಚ್ಚು ಇ-ಮೇಲ್ ಐಡಿಗಳನ್ನು ಸೃಷ್ಟಿಸಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.