Ashok Pattana: ರಾಮದುರ್ಗ: ಬಡ ವಿದ್ಯಾರ್ಥಿಗಳ ಬಾಳಿಗೆ ಬೆಳಕಾದ ಬಿವಿವಿ ಸಂಸ್ಥೆಯ ಕಾರ್ಯಕ್ಷೇತ್ರ ಮತ್ತಷ್ಟು ಹೆಚ್ಚಿಸಲಿ: ಅಶೋಕ ಪಟ್ಟಣ ಆಶಯ
ಉತ್ತರ ಕರ್ನಾಟಕ ಭಾಗದಲ್ಲಿ ಬಸವೇಶ್ವರ ಸಂಸ್ಥೆ ಹೆಮ್ಮೆಯ ಶಿಕ್ಷಣ ಸಂಸ್ಥೆಯಾಗಿ ಹೊರಹೊಮ್ಮಿದೆ. ಈ ಭಾಗದ ಗ್ರಾಮೀಣ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದೆ. ಗುಣಮಟ್ಟದ
Ashok Nayak
January 10, 2025
ರಾಮದುರ್ಗ: ಬಸವೇಶ್ವರ ವಿದ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ ಹಲವಾರು ವಿದ್ಯಾರ್ಥಿಗಳು ಉನ್ನತ ಸ್ಥಾನ ಹೊಂದಿ, ಸಂಸ್ಥೆ ಹಾಗೂ ತಾಲೂಕಿನ ಕೀರ್ತಿ ಹೆಚ್ಚಿಸಿದ್ದಾರೆ. ಸಂಸ್ಥೆ ಮತ್ತಷ್ಟು ಅಭಿವೃದ್ಧಿ ಹೊಂದಿ ಬಡ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಲಿ ಎಂದು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಆಶಯ ವ್ಯಕ್ತಪಡಿಸಿದರು.
ಬಾಗಲಕೋಟ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಸ್ಟೇಟ್ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲ ಯದ ಆವರಣದಲ್ಲಿ ಶುಕ್ರವಾರ ಜರುಗಿದ ಬಿವಿವಿಎಸ್ ಸಂಭ್ರಮ-ರಾಮದುರ್ಗ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಉತ್ತರ ಕರ್ನಾಟಕ ಭಾಗದಲ್ಲಿ ಬಸವೇಶ್ವರ ಸಂಸ್ಥೆ ಹೆಮ್ಮೆಯ ಶಿಕ್ಷಣ ಸಂಸ್ಥೆಯಾಗಿ ಹೊರಹೊಮ್ಮಿದೆ. ಈ ಭಾಗದ ಗ್ರಾಮೀಣ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದೆ. ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಇಂದು ಸಂಸ್ಥೆಯಿಂದ ಸುಮಾರು 166 ಶಿಕ್ಷಣ ಸಂಸ್ಥೆಗಳನ್ನು ಮುನ್ನೆಡೆಸುತ್ತಿದೆ. ತಾಲೂಕಿನಲ್ಲಿ 10 ಅಂಗ ಸಂಸ್ಥೆಗಳನ್ನು ಹೊಂದಿ ಸಾವಿರಾರು ಮಕ್ಕಳ ವಿದ್ಯೆಗೆ ದಾರಿದೀಪವಾಗಿದ್ದು ಶ್ಲಾಘನೀಯ ಎಂದು ಬಣ್ಣಿಸಿದರು.
ಧಾರವಾಡ ವಿಸ್ತಾರ ಜಿಂದಗಿಯ ಮನಶಾಸ್ತç ತರಬೇತಿದಾರ ಮಹೇಶ ಮಾಸಾಳ ಮಾತನಾಡಿ, ವಿದ್ಯಾರ್ಥಿಗಳು ವ್ಯಾಸಂಗಕ್ಕೆ ಉಂಟಾಗುವ ಅಡೆತಡೆಗಳ ಕುಂಟು ನೆಪಗಳನ್ನು ಮುಂದಿಟ್ಟುಕೊAಡು ಚಿಂತಿಸುವ ಬದಲು, ಸಾಧನೆ ಹಾದಿಯ ಬಗೆಗೆ ಚಿಂತನೆ ನಡೆಸಿ, ಮನಸ್ಥಿತಿ ಬದಲಾಯಿಸಿಕೊಂಡರೇ ಮಾತ್ರ ಪರಸ್ಥಿತಿ ಬದಲಾಗಿ, ಸಾಧನೆ ಸಾಧ್ಯವಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ, ಬಿವಿವಿ ಸಂಸ್ಥೆಯಿಂದ ತಾಲೂಕಿನಲ್ಲಿ 10 ಅಂಗ ಸಂಸ್ಥೆಗಳಲ್ಲಿ ಸುಮಾರು 4500ಕ್ಕೂ ಅಧಿಕ ವಿದ್ಯಾರ್ಥಿ ಗಳು ವ್ಯಾಸಂಗ ಮಾಡುತ್ತಿದ್ದಾರೆ. ಸ್ಥಳೀಯ ಶಾಸಕರು ಹಾಗೂ ಜನಪ್ರತಿನಿಧಿಗಳ ಸಹಕಾರದಿಂದ ತಾಲೂಕಿನಲ್ಲಿ ಮತ್ತಷ್ಟು ಶಿಕ್ಷಣ ಸಂಸ್ಥೆಗಳನ್ನು ತೆರೆದು, ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಯೋಜನೆ ಯನ್ನು ಸಂಸ್ಥೆಯ ಪದಾಧಿಕಾರಿಗಳು ಹೊಂದಿದ್ದೇವೆ ಎಂದರು.
ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಅಥಣಿ ತಾಲೂಕಿನ ಶೇಗುಣಸಿ ವಿರಕ್ತಮಠದ ಡಾ. ಮಹಾಂತಪ್ರಭು ಸ್ವಾಮೀಜಿ, ಐತಿಹಾಸಿಕ ಗುರು ಪರಂಪರೆಯಿAದ ಬಂದ ಬಿವ್ಹಿವ್ಹಿ ಸಂಘ ರಾಜ್ಯದ ಶೈಕ್ಷಣಿಕ ರಂಗದಲ್ಲಿ ಮುಂಚುಣಿಯಲ್ಲಿದ್ದು, ರಾಷ್ಟçದ ಶೈಕ್ಷಣಿಕ ಪ್ರಗತಿಗೆ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ ಎಂದು ಹರ್ಷ ವ್ಯಕ್ತಪಡಿಸಿದರು.
ವಿ.ಆರ್. ಶಿರೋಳ ಸೇರಿದಂತೆ ಸಂಸ್ಥೆಯ ಆಡಳಿತಾಧಿಕಾರಿಗಳು, ಗಣ್ಯರು, ವಿವಿಧ ಅಂಗ ಸಂಸ್ಥೆಗಳ ಪದಾಧಿಕಾರಿಗಳು, ಉಪನ್ಯಾಸಕರು, ಶಿಕ್ಷಕರು ಹಾಗೂ ಸಿಬ್ಬಂದಿ ಇದ್ದರು.
ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ ಸ್ವಾಗತಿಸಿದರು. ಶಾಲಾ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಮಹಾಂತೇಶ ಶೆಟ್ಟರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಆಡಳಿತಾಧಿಕಾರಿ ಡಾ.ವ್ಹಿ.ಎಸ್. ಕಟಗಿಹಳ್ಳಿಮಠ ಪರಿಚಯಿಸಿದರು. ಉಪನ್ಯಾಸಕರಾದ ಸುಮಂಗಲಾ ಕಳಸಪ್ಪನವರ ಹಾಗೂ ಸಂಜೀವ ನಾಯಕ ಕಾರ್ಯಕ್ರಮ ನಿರೂಪಿಸಿದರು. ಪ್ರಾಚಾರ್ಯ ಕೆ.ಎಸ್.ಹೊಸೂರ ವಂದಿಸಿದರು.
*ಉದ್ಘಾಟನಾ ಪರ ಭಾಷಣ ಮಾಡುವ ಸಂದರ್ಭದಲ್ಲಿ ಶಾಸಕ ಹಾಗೂ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ, ಇಂದಿನ ರಾಜಕೀಯದಲ್ಲಿ ಮೌಲ್ಯಗಳು ಕುಸಿದು ಹೋಗುತ್ತಿದೆ. ತಮ್ಮ ಸಂಸ್ಥೆಯಿಂದ ಜನತೆಯೊಂದಿಗೆ ರಾಜಕಾರಣಿಗಳು ಹೇಗೆ ವರ್ತಿಸುವುದು, ರಾಜಕಾರಣ ಮಾಡುವುದು ಹೇಗೆ ಎಂಬ ತರಬೇತಿ ಪ್ರಾರಂಭಿಸಿ ಎಂದು ಹಾಸ್ಯಭರಿತವಾಗಿ ಮಾತನಾಡಿದರು. ಅದಕ್ಕೆ ಪ್ರತಿಕ್ರಿಯಿಸಿದ ಮಾಜಿ ಶಾಸಕ ಹಾಗೂ ಸಂಸ್ಥೆಯ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಏನೇ ತರಬೇತಿ ನೀಡಿದರೂ, ರಾಜಕೀಯ ವ್ಯವಸ್ಥೆಯನ್ನು ಬದಲಾಣೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.