Chinese Manja: ನಿಷೇಧಿತ ಚೈನೀಸ್ ಮಾಂಜಾ ದಾರದಿಂದ ಕುತ್ತಿಗೆಗೆ ಗಾಯ, ಬಾಲಕಿ ಗಂಭೀರ
Belagavi news: ಚೈನೀಸ್ ಮಾಂಜಾ ದಾರ ಮಾರಾಟ ಮತ್ತು ಬಳಕೆಯ ಮೇಲೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ನಿಷೇಧ ಹೇರಿದೆ. ಆದರೂ, ದಾರವನ್ನು ಬಹಿರಂಗವಾಗಿ ಮಾರಾಟ ಮಾಡಲಾಗುತ್ತಿದೆ. ಕಳೆದ ಕೆಲವು ವರ್ಷಗಳಿಂದ, ಇದೇ ರೀತಿಯ ಘಟನೆಗಳಲ್ಲಿ ಕನಿಷ್ಠ ಮೂರರಿಂದ ನಾಲ್ಕು ಜನರು ಪ್ರಾಣ ಕಳೆದುಕೊಂಡಿದ್ದಾರೆ.

-

ಬೆಳಗಾವಿ: ನಿಷೇಧದ (ban) ಹೊರತಾಗಿಯೂ ರಾಜ್ಯದಲ್ಲಿ ಚೈನೀಸ್ ಮಾಂಜಾ (Chinese Manja) ದಾರ ಬಳಕೆ, ಮಾರಾಟ ಮುಂದುವರೆದಿದ್ದು, ಇದಕ್ಕೆ ಸಿಲುಕಿ ಬಲಿಯಾಗುವ, ತೀವ್ರವಾಗಿ ಗಾಯಗೊಳ್ಳುವವರ (Injury) ಸಂಖ್ಯೆಯೂ ಹೆಚ್ಚುತ್ತಲೇ ಇದೆ. ಬೆಳಗಾವಿಯಲ್ಲಿ (Belagavi news) ಇಂಥ ಘಟನೆಯೊಂದು ನಡೆದಿದೆ. ಚೈನೀಸ್ ಮಾಂಜಾದಾರದಿಂದ ಮೂರು ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ದ್ವಿಚಕ್ರ ವಾಹನದಲ್ಲಿ ತನ್ನ ಪೋಷಕರೊಂದಿಗೆ ಮಾರುಕಟ್ಟೆಗೆ ಹೋಗುತ್ತಿದ್ದ ಮಗುವಿಗೆ ಚೈನೀಸ್ ಮಾಂಜಾ ದಾರದಿಂದ ಕುತ್ತಿಗೆಗೆ ಆಳವಾದ ಗಾಯಗಳಾಗಿದ್ದು, ಪ್ರಸ್ತುತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ವಡ್ಗಾಂವ್ ನಿವಾಸಿಯಾದ ಬಾಲಕಿ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ತನ್ನ ಪೋಷಕರೊಂದಿಗೆ ಶಹಾಪುರಕ್ಕೆ ಪ್ರಯಾಣಿಸುತ್ತಿದ್ದಳು. ಶಹಾಪುರ ಪೊಲೀಸ್ ಠಾಣೆಯ ಹಿಂದಿನ ರಸ್ತೆಯಲ್ಲಿ ಹೋಗುತ್ತಿದ್ದಾಗ ಗಾಳಿಪಟದ ದಾರ ಮಗುವಿನ ಕುತ್ತಿಗೆ ಸೀಳಿದೆ. ಪೋಷಕರು ತಕ್ಷಣ ಬಾಲಕಿಯನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಇದನ್ನೂ ಓದಿ: Chinese Firecrackers: ಗ್ರಾಹಕರೇ ಎಚ್ಚರ; ಮಾರ್ಕೆಟ್‌ಗೆ ಬರ್ತಿದೆ ಚೈನಾ ಪಟಾಕಿ! ಖರೀದಿಸಿದ್ರೆ ಗೋವಿಂದಾ..
ಚೈನೀಸ್ ಮಾಂಜಾ ದಾರ ಮಾರಾಟ ಮತ್ತು ಬಳಕೆಯ ಮೇಲೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ನಿಷೇಧ ಹೇರಿದೆ. ಆದರೂ, ದಾರವನ್ನು ಬಹಿರಂಗವಾಗಿ ಮಾರಾಟ ಮಾಡಲಾಗುತ್ತಿದೆ. ಕಳೆದ ಕೆಲವು ವರ್ಷಗಳಿಂದ, ಇದೇ ರೀತಿಯ ಘಟನೆಗಳಲ್ಲಿ ಕನಿಷ್ಠ ಮೂರರಿಂದ ನಾಲ್ಕು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ವಾರವಷ್ಟೇ, ಕೇಂದ್ರ ಬಸ್ ನಿಲ್ದಾಣದ ಬಳಿ ದ್ವಿಚಕ್ರ ವಾಹನ ಸವಾರನೊಬ್ಬ ಮಾಂಜಾ ದಾರದಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ.
ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿ ಆತ್ಮಹತ್ಯೆ
ಬೆಂಗಳೂರು : ಬೆಂಗಳೂರಿನಲ್ಲಿ (Bengaluru) ಲಿವಿಂಗ್ ಟುಗೆದರ್‌ನಲ್ಲಿದ್ದ (Living togethar) ಜೋಡಿಯೊಂದು (Couple) ಆತ್ಮಹತ್ಯೆಗೆ (Self Harming) ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಲ್ಲುಬಾಳು ಗ್ರಾಮದಲ್ಲಿ ಒಡಿಶಾ ಮೂಲದ ಸೀಮಾ ನಾಯಕ್ (25), ರಾಕೇಶ್ (23) ಮೃತರು ಎಂದು ಗುರುತಿಸಲಾಗಿದೆ.
ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಮೂಡಿದೆ. ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಅನುಮಾನಗೊಂಡು ಕಿಟಕಿ ಗಾಜು ಒಡೆದು ನೋಡಿದಾಗ ಬೆಳಕಿಗೆ ಬಂದಿದೆ. ಕೂಡಲೇ ಜಿಗಣಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ರಾಕೇಶ್ ಪದೇ ಪದೆ ಕುಡಿದು ಬಂದು ಜಗಳ ಮಾಡುತ್ತಿದ್ದ. ಭಾನುವಾರವೂ ಜಗಳ ಮಾಡಿದ್ದ. ಸೋಮವಾರ ಬೆಳಗ್ಗೆ ನೋಡಿದಾಗ ರಾಕೇಶ್ ನೇಣು ಬಿಗಿದುಕೊಂಡಿದ್ದ. ಬಳಿಕ ಸೀಮಾ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.