ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Belagavi News: ಕೋಣೆಯೊಳಗೆ ಹೊಗೆಯಿಂದ ಉಸಿರುಗಟ್ಟಿ ಮೂವರು ಯುವಕರ ಸಾವು

Belagavi Tragedy: ನಿನ್ನೆ ರಾತ್ರಿ ನಾಮಕರಣ ಕಾರ್ಯಕ್ರಮ ಮುಗಿಸಿಕೊಂಡು ನಾಲ್ವರು ಯುವಕರು ಬಂದಿದ್ದಾರೆ. ಚಳಿ ಹಿನ್ನೆಲೆಯಲ್ಲಿ ರೂಮ್‌ನಲ್ಲಿ ಬೆಂಕಿ ಹಾಕಿಕೊಂಡು ಮಲಗಿದ್ದಾರೆ. ಸೊಳ್ಳೆ ಕಾಟದ ಹಿನ್ನೆಲೆ ನಾಲ್ಕೈದು ಮಸ್ಕಿಟೋ ಕಾಯಿಲ್ ಹಾಕಿ ಮಲಗಿದ್ದಾರೆ. ಹೊಗೆ ಹೊರಹೋಗಲು ಕಿಟಕಿ ಓಪನ್ ಮಾಡದ ಹಿನ್ನೆಲೆ ಇಡೀ ಕೊಠಡಿ ತುಂಬಾ ಹೊಗೆ ಆವರಿಸಿದ್ದು, ಉಸಿರುಗಟ್ಟಿ ಮೂವರು ಸಾವನ್ನಪ್ಪಿದ್ದಾರೆ.

ಕೋಣೆಯೊಳಗೆ ಹೊಗೆಯಿಂದ ಉಸಿರುಗಟ್ಟಿ ಮೂವರು ಯುವಕರ ಸಾವು

ಬೆಳಗಾವಿಯಲ್ಲಿ ಹೊಗೆಯಿಂದ ಉಸಿರುಗಟ್ಟಿ ಸಾವು -

ಹರೀಶ್‌ ಕೇರ
ಹರೀಶ್‌ ಕೇರ Nov 19, 2025 7:05 AM

ಬೆಳಗಾವಿ, ನ.18: ರಾತ್ರಿ ರೂಮ್​​ನಲ್ಲಿ ಮಲಗಿದ್ದ ನಾಲ್ವರ ಪೈಕಿ ಮೂವರು ಯುವಕರು (boys) ಹೊಗೆಯಿಂದ ಉಸಿರುಗಟ್ಟಿ (Asphyxiation) ಸಾವನ್ನಪ್ಪಿದ್ದು (death), ಮತ್ತೊಬ್ಬ ಯುವಕ ತೀವ್ರವಾಗಿ ಅಸ್ವಸ್ಥನಾಗಿರುವ ಘಟನೆ ಬೆಳಗಾವಿಯ (Belagavi news) ಅಮನ್ ನಗರದಲ್ಲಿ ನಡೆದಿದೆ. ರಿಹಾನ್ ಮತ್ತಿ(22), ಸರ್ಫರಾಜ್(22), ಮೊಯಿನ್‌ ನಲಬಂದ್‌(22) ಮೃತರು. ಗಂಭೀರವಾಗಿ ಅಸ್ವಸ್ಥಗೊಂಡಿರುವ ಮತ್ತೊಬ್ಬನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಹೇಗೆ ನಡೆಯಿತು?

ನಿನ್ನೆ ರಾತ್ರಿ ನಾಮಕರಣ ಕಾರ್ಯಕ್ರಮ ಮುಗಿಸಿಕೊಂಡು ನಾಲ್ವರು ಯುವಕರು ಬಂದಿದ್ದಾರೆ. ಚಳಿ ಹಿನ್ನೆಲೆಯಲ್ಲಿ ರೂಮ್‌ನಲ್ಲಿ ಬೆಂಕಿ ಹಾಕಿಕೊಂಡು ಮಲಗಿದ್ದಾರೆ. ಸೊಳ್ಳೆ ಕಾಟದ ಹಿನ್ನೆಲೆ ನಾಲ್ಕೈದು ಮಸ್ಕಿಟೋ ಕಾಯಿಲ್ ಹಾಕಿ ಮಲಗಿದ್ದಾರೆ. ಹೊಗೆ ಹೊರಹೋಗಲು ಕಿಟಕಿ ಓಪನ್ ಮಾಡದ ಹಿನ್ನೆಲೆ ಇಡೀ ಕೊಠಡಿ ತುಂಬಾ ಹೊಗೆ ಆವರಿಸಿದ್ದು, ಉಸಿರುಗಟ್ಟಿ ಮೂವರು ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳದಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಸ್ಥಳ ಪಂಚನಾಮೆ ಬಳಿಕ ಮೃತದೇಹಗಳನ್ನ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಸ್ಥಳಾಂತರಿಸಿದ್ದಾರೆ. ಜೊತೆಗೆ ಬೂದಿಯ ಸ್ಯಾಂಪಲ್ಸ್ ಅನ್ನು ಪೊಲೀಸರು ತೆಗೆದುಕೊಂಡು ಹೋಗಿದ್ದಾರೆ.

ಬಂಟ್ವಾಳದಲ್ಲಿ ಕಾರು ಅಪಘಾತ, ಮೂವರು ಸಾವು

ಮಂಗಳೂರು: ದಕ್ಷಿಣ ಕನ್ನಡ (Dakshina kannada) ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡಿನ (BC Road) ಸರ್ಕಲ್‌ನಲ್ಲಿ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು, ಉಡುಪಿ ಶ್ರೀಕೃಷ್ಣ ಮಠಕ್ಕೆ ದೇವರ ದರ್ಶನಕ್ಕಾಗಿ ಆಗಮಿಸುತ್ತಿದ್ದರು ಎಂದು ತಿಳಿದುಬಂದಿದೆ.

ಬಿಸಿ ರೋಡಿನ ಸರ್ಕಲ್‌ನಲ್ಲಿ ಇನ್ನೋವಾ ಕಾರು ಬಂದು ಎನ್.ಜಿ ಸರ್ಕಲ್‌ಗೆ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಕಾರಿನಲ್ಲಿದ್ದ ರಮ್ಯ (23), ರವಿ ‌(64), ನಂಜಮ್ಮ (75) ಮೃತ ದುರ್ದೈವಿಗಳು. ಮೃತರು ಬೆಂಗಳೂರಿನ ಪೀಣ್ಯದವರಾಗಿದ್ದು, ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದರು. ಕಾರಿನಲ್ಲಿ ಇದ್ದ ಪ್ರಯಾಣಿಕರಲ್ಲಿ ರವಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಎಂಬ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿ ರೋಡು – ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ನಿರ್ಮಾಣವಾದ ನೂತನ‌ ಸರ್ಕಲ್ ಅವೈಜ್ಞಾನಿಕವಾಗಿರುವುದರಿಂದಲೇ ಈ ಅಪಘಾತ ಸಂಭವಿಸಿದೆ ಎಂಬ ಆರೋಪ ಕೇಳಿ ಬಂದಿದೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.