Belagavi news: ಪತ್ನಿಯ ಆತ್ಮಹತ್ಯೆ ಸುದ್ದಿ ತಿಳಿದು ಧಾವಿಸಿ ಬರುವಾಗ ಆಕ್ಸಿಡೆಂಟ್, ಪತಿಯೂ ಸಾವು!
ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದ ಕರೆಪ್ಪ (36) ಹಾಗೂ ಅವರ ಪತ್ನಿ ಮಧುರಾ (30) ಮೃತ ದಂಪತಿ. ಹಲವು ವರ್ಷಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಧುರಾ, ನೋವು ತಾಳಲಾರದೆ ಕ್ರಿಮಿನಾಶಕ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ಸಾವಿನ ಸುದ್ದಿ ತಿಳಿದು ಆಘಾತಗೊಂಡ ಕರೆಪ್ಪ, ಬೈಕ್‌ನಲ್ಲಿ ಆಸ್ಪತ್ರೆಗೆ ಧಾವಿಸುತ್ತಿದ್ದ ವೇಳೆ ಅಪಘಾತವಾಗಿದೆ.
ಮೃತ ಕರೆಪ್ಪ ಹಾಗೂ ಮಧುರಾ -
ಬೆಳಗಾವಿ, ಏ. 06: ಜಿಲ್ಲೆಯಲ್ಲಿ (belagavi news) ಒಂದೇ ದಿನ ಪತಿ- ಪತ್ನಿ ವಿಚಿತ್ರ ರೀತಿಯಲ್ಲಿ ಸಾವನ್ನಪ್ಪಿದ (death) ಘಟನೆ ನಡೆದಿದ್ದು, ಎರಡು ಸಾವುಗಳ ಹಿನ್ನೆಲೆ ಮನ ಕಲಕುವಂತಿದೆ. ಪತ್ನಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ (Self harming) ಮಾಡಿಕೊಂಡ ವಿಷಯ ತಿಳಿದ ಪತಿ, ಬೈಕ್‌ನಲ್ಲಿ ಧಾವಿಸಿ ಬರುವಾಗ (accident) ಅಪಘಾತಕ್ಕೀಡಾಗಿದ್ದು, ದಾರುಣವಾಗಿ ಸಾವನ್ನಪ್ಪಿದ್ದಾರೆ. ದಂಪತಿಯ ಮೂವರು ಮಕ್ಕಳು ಅನಾಥರಾಗಿದ್ದಾರೆ.
ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದ ಕರೆಪ್ಪ (36) ಹಾಗೂ ಅವರ ಪತ್ನಿ ಮಧುರಾ (30) ಮೃತ ದಂಪತಿ. ಹಲವು ವರ್ಷಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಧುರಾ, ನೋವು ತಾಳಲಾರದೆ ಕ್ರಿಮಿನಾಶಕ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಸಾಗಿಸಲು ಮುಂದಾದರೂ, ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ.
ಪತ್ನಿಯ ಸಾವಿನ ಸುದ್ದಿ ತಿಳಿದು ಆಘಾತಗೊಂಡ ಕರೆಪ್ಪ, ಬೈಕ್‌ನಲ್ಲಿ ಆಸ್ಪತ್ರೆಗೆ ಧಾವಿಸುತ್ತಿದ್ದ ವೇಳೆ ಅಪಘಾತಕ್ಕೀಡಾಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅವಸರದಲ್ಲಿ ಬರುತ್ತಿದ್ದ ವೇಳೆ ಬಸ್ ಚಕ್ರಕ್ಕೆ ಸಿಲುಕಿದ ಪರಿಣಾಮ ಸ್ಥಳದಲ್ಲೇ ಅವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
Road Accident: ಬೈಕ್‌ಗೆ ಬೊಲೆರೋ ಡಿಕ್ಕಿ, ಇಬ್ಬರು ಅರಣ್ಯ ಇಲಾಖೆ ಸಿಬ್ಬಂದಿ ಸಾವು
ಒಂದೇ ದಿನ ದಂಪತಿಗಳ ಸಾವಿನಿಂದ ಕುಟುಂಬದಲ್ಲಿ ಶೋಕದ ವಾತಾವರಣ ಆವರಿಸಿದ್ದು, ಗ್ರಾಮದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ದಂಪತಿಗೆ ಒಂದು ಹೆಣ್ಣು ಮಗು ಹಾಗೂ ಇಬ್ಬರು ಗಂಡು ಮಕ್ಕಳಿದ್ದು, ಇದೀಗ ಅವರು ಅನಾಥರಾಗಿದ್ದಾರೆ. ಕರೆಪ್ಪ ಮತ್ತು ಮಧುರಾ ದಂಪತಿ ಸುಮಾರು ಒಂಬತ್ತು ವರ್ಷಗಳ ಹಿಂದೆ ವಿವಾಹವಾಗಿದ್ದರು. ನಿನ್ನೆಯಷ್ಟೇ ತಮ್ಮ ಮಕ್ಕಳಿಗೆ ಹೊಸ ಬಟ್ಟೆಗಳನ್ನು ಖರೀದಿಸಿ, ಮನೆಗೆ ಬೇಕಾದ ಸಾಮಗ್ರಿಗಳನ್ನು ಕೂಡ ತಂದಿದ್ದರು.
ಮಧುರಾ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ತೀವ್ರ ನೋವಿನ ಹಿನ್ನೆಲೆಯಲ್ಲಿ ಈ ರೀತಿಯ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಘಟನೆ ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಕರ್ನಾಟಕದಲ್ಲಿ ಮೂರು ವರ್ಷದಲ್ಲಿ 2,809 ರೈತರ ಸಾವು: ಕಾಂಗ್ರೆಸ್ ಸರ್ಕಾರದ ಆಡಳಿತದ ಬಗ್ಗೆ ಸಚಿವ ಸೋಮಣ್ಣ ಕಿಡಿ