ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Belagavi shootout: ಬೆಳಗಾವಿಯ ಖ್ಯಾತ ವಕೀಲೆ ಮನೆ ಮೇಲೆ ಗುಂಡಿನ ದಾಳಿ; ಪುತ್ರಿ ಅಪಾಯದಿಂದ ಪಾರು

ಬೆಳಗಾವಿ ನಗರದ ಮಾಂಡೋಳಿ ರಸ್ತೆಯಲ್ಲಿರುವ ವಕೀಲೆ ಪೂಜಾ ಕಾಕತಕರ್​ ಮನೆ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಶನಿವಾರ ಮಧ್ಯೆ ರಾತ್ರಿ ಕಿಡಿಗೇಡಿಗಳು ಫೈರಿಂಗ್​ ಮಾಡಿದ್ದು, ಬೆಳಗಾವಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬೆಳಗಾವಿಯ ಖ್ಯಾತ ವಕೀಲೆ ಮನೆ ಮೇಲೆ ಗುಂಡಿನ ದಾಳಿ

ಬೆಳಗಾವಿ ವಕೀಲೆ ಪೂಜಾ ಕಾಕತಕರ್. -

Prabhakara R
Prabhakara R Apr 26, 2026 7:03 PM

ಬೆಳಗಾವಿ: ನಗರದ ಖ್ಯಾತ ವಕೀಲೆಯೊಬ್ಬರ ಮನೆ ಮೇಲೆ ಗುಂಡಿನ ದಾಳಿ ನಡೆದಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ. ಬೆಳಗಾವಿ ನಗರದ ಮಾಂಡೋಳಿ ರಸ್ತೆಯಲ್ಲಿರುವ ವಕೀಲೆ ಪೂಜಾ ಕಾಕತಕರ್​ ಮನೆ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ (Belagavi shootout) ನಡೆಸಿದ್ದಾರೆ. ನೆನ್ನೆ ಮಧ್ಯೆ ರಾತ್ರಿ ಕಿಡಿಗೇಡಿಗಳು ಫೈರಿಂಗ್​ ಮಾಡಿದ್ದು, ಈ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಪ್ರಭಾವಿ ವಕೀಲೆಯಾಗಿರುವ ಪೂಜಾ ಕಾಕತಕರ್​ ಅವರು ಕಳೆದ 18 ವರ್ಷಗಳಿಂದ ವಕೀಲೆ ವೃತ್ತಿಯಲ್ಲಿ ತೊಡಗಿದ್ದಾರೆ. ಹೈ ಪ್ರೊಫೈಲ್ ಕೇಸ್​ಗಳ ಪರ ವಾದ ಮಾಡುತ್ತಿದ್ದರು. ಆದರೆ ನೆನ್ನೆ ರಾತ್ರಿ ದುಷ್ಕರ್ಮಿಗಳಿಂದ ಅವರ ಮನೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಮನೆಯ ಮೊದಲ ಮಹಡಿಯನ್ನು ಗುರಿಯಾಗಿಸಿ ದಾಳಿ ನಡೆಸಿದ್ದಾರೆ.

_Belagavi shootout (1)

ಮನೆಯ ಮೊದಲ ಮಹಡಿಯಲ್ಲಿ ವಕೀಲೆ ಪೂಜಾ ಅವರ ಪುತ್ರಿ ಸಂಸ್ಕೃತಿ ಓದುತ್ತಾ ಕುಳಿತಿದ್ದರು ಎಂದು ತಿಳಿದು ಬಂದಿದ್ದು, ಗುಂಡಿನ ದಾಳಿಗೆ ಮನೆಯ ಗ್ಲಾಸ್​ ಮೇಲೆ ಫೈರಿಂಗ್​ ಮಾರ್ಕ್​ ಬಿದ್ದಿದೆ. ದಾಳಿ ವೇಳೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಸುಕೋ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಗುಂಡು ತಗುಲಿರೋ ಗ್ಲಾಸ್​ ಅನ್ನು ಎಫ್​ಎಸ್​ಎಲ್​ಗೆ ರವಾನಿಸಲಾಗಿದ್ದು, ಎಫ್‌ಎಸ್‌ಎಲ್‌ ವರದಿಗಾಗಿ ಕಾಯುತ್ತಿರುವ ಬೆಳಗಾವಿ ಪೊಲೀಸರು, ವಕೀಲೆ ಪೂಜಾ ಅವರಿಗೆ ರಕ್ಷಣೆ ನೀಡುವ ಭರವಸೆಯನ್ನು ನೀಡಿದ್ದಾರೆ.

ಮಡಿಕೇರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ: ತಲೆಗೆ ಗುಂಡು ಹಾರಿಸಿಕೊಂಡು ಸರ್ಕಾರಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ. ಎ.ರೋಹಿಣಿ (51) ಆತ್ಮಹತ್ಯೆಗೆ ಶರಣಾದ ಮಹಿಳೆ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Haveri News: ಹಾವೇರಿಯಲ್ಲಿ ನಿಶ್ಚಿತಾರ್ಥದ ಹಿಂದಿನ ದಿನ ಯುವತಿ ನಾಪತ್ತೆ; ಇಬ್ರಾಹಿಂ ವಿರುದ್ಧ ಲವ್‌ ಜಿಹಾದ್‌ ಆರೋಪ

ಮನೆಯಲ್ಲಿ ಎಲ್ಲರೂ ಮಲಗಿದ್ದ ವೇಳೆ ಮುಂಜಾನೆ 5 ಗಂಟೆ ವೇಳೆಗೆ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ತಮ್ಮ ಮನೆಯಲ್ಲಿದ್ದ ಕೋವಿಯಿಂದಲೇ ಗುಂಡು ಹಾರಿಸಿಕೊಂಡು ಅವರು ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೊಡಗು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.