ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Karnataka 2nd PUC Results 2026: ದ್ವಿತೀಯ ಪಿಯುಸಿ ಫಲಿತಾಂಶ: ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳಗಾವಿ ಕುವರಿ

Karnataka 2nd PUC Results 2026: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (Karnataka 2nd PUC Results 2026) ಪ್ರಕಟವಾಗಿದ್ದು ಬೆಳಗಾವಿ ವಿದ್ಯಾರ್ಥಿನಿ ಕಾಮರ್ಸ್ ವಿಭಾಗದಲ್ಲಿ 600 ಕ್ಕೆ 599 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶ; ರಾಜ್ಯಕ್ಕೆ 2ನೇ ಸ್ಥಾನ ಪಡೆದ ಬೆಳಗಾವಿ ಕುವರಿ

ದ್ವಿತೀಯ ಪಿಯುಸಿ ಕಾಮರ್ಸ್ ವಿಭಾಗದಲ್ಲಿ 600 ಕ್ಕೆ 599 ಅಂಕ ಪಡೆದ ವಿದ್ಯಾರ್ಥಿನಿ ಧ್ವನಿ ಕುಲಕರ್ಣಿ. -

Profile
Siddalinga Swamy Apr 9, 2026 7:40 PM

ಬೆಳಗಾವಿ, ಏ.9: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (Karnataka 2nd PUC Results 2026) ಪ್ರಕಟವಾಗಿದ್ದು ಬೆಳಗಾವಿ ವಿದ್ಯಾರ್ಥಿನಿ ಕಾಮರ್ಸ್ ವಿಭಾಗದಲ್ಲಿ 600 ಕ್ಕೆ 599 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ. ಬೆಳಗಾವಿ ನಗರದ ಗೋಗಟೆ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ಧ್ವನಿ ಕುಲಕರ್ಣಿ ಕಾಮರ್ಸ್ ವಿಭಾಗದಲ್ಲಿ 599 ಅಂಕ ಪಡೆಯುವ ಮೂಲಕ ಅಪ್ರತಿಮ ಸಾಧನೆ ಮಾಡಿದ್ದಾರೆ.

ಇಂಗ್ಲಿಷ್ ವಿಷಯದಲ್ಲಿ 100 ಕ್ಕೆ 99 ಅಂಕ ಪಡೆದಿದ್ದರೆ ಇನ್ನುಳಿದ ವ್ಯವಹಾರ ಅಧ್ಯಯನ, ಸಂಖ್ಯಾಶಾಸ್ತ್ರ, ಲೆಕ್ಕಶಾಸ್ತ್ರ, ಬೇಸಿಕ್ ಮ್ಯಾಥ್ಸ್ ಹಾಗೂ ಸಂಸ್ಕೃತ ವಿಷಯಗಳಲ್ಲಿ 100 ಕ್ಕೆ 100 ಅಂಕ ಪಡೆದಿದ್ದಾರೆ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಶೇ.86 ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು: 2025-26ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು (Karnataka 2nd PUC Results 2026) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿದೆ. ಈ ಬಾರಿ ಶೇ.86 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಳೆದ ವರ್ಷಕ್ಕಿಂತ ಶೇ.12.50 ಫಲಿತಾಂಶ ಏರಿಕೆ ಕಂಡಿದೆ. ಫಲಿತಾಂಶವನ್ನು karresults.nic.in ಅಥವಾ Karnataka one ಮೊಬೈಲ್‌ ಆ್ಯಪ್‌ ಮೂಲಕ ಪಡೆಯಬಹುದು.

ಕಳೆದ ವರ್ಷ 73.45 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಬಾರಿ ಶೇ.86 ವಿದ್ಯಾರ್ಥಿಗಳು ಪಾಸ್‌ ಆಗಿದ್ದು, ದಾಖಲೆ ಮಟ್ಟದಲ್ಲಿ ಫಲಿತಾಂಶದಲ್ಲಿ ಏರಿಕೆ ದಾಖಲಾಗಿದೆ. ಇನ್ನು ಫಲಿತಾಂಶದ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಸಂಜೆ 6 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ’ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ವೇಳೆ ಜಿಲ್ಲಾವಾರು ಸಾಧನೆ, ತೇರ್ಗಡೆ ಪ್ರಮಾಣ ಹಾಗೂ ಟಾಪರ್‌ಗಳ ವಿವರಗಳನ್ನು ಸಚಿವರು ಅಧಿಕೃತವಾಗಿ ಹಂಚಿಕೊಳ್ಳಲಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನೋಡುವುದು ಹೇಗೆ?

  • ಮೊದಲು ಅಧಿಕೃತ ವೆಬ್‌ಸೈಟ್ karresults.nic.in ಗೆ ಲಾಗ್ ಇನ್ ಆಗಿ
  • ಮುಖಪುಟದಲ್ಲಿ ಕಾಣುವ ‘Karnataka 2nd PUC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
  • ಮಾಹಿತಿ ಭರ್ತಿ ಮಾಡಿದ ನಂತರ ‘Submit’ ಬಟನ್ ಒತ್ತಿರಿ.
  • ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸಲಿದೆ. ಭವಿಷ್ಯದ ಬಳಕೆಗಾಗಿ ಇದನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

2nd PUC District Wise Result 2026: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್; ಜಿಲ್ಲಾವಾರು ಪಟ್ಟಿ ಇಲ್ಲಿದೆ

ರಾಜ್ಯದಲ್ಲಿ ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆದಿದ್ದವು. ಒಟ್ಟು 1,217 ಪರೀಕ್ಷಾ ಕೇಂದ್ರಗಳಲ್ಲಿ 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 5,174 ಕಾಲೇಜುಗಳ 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದರು. ವಿಜ್ಞಾನ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. ಇದೀಗ ಫಲಿತಾಂಶ ಬಿಡುಗಡೆಯಾಗಿದೆ.