Balachandra Jarkiholi: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ: ಶಾಸಕ ಬಾಲಚಂದ್ರ ಜಾರಕಿಹೊಳಿ
ನಾವು 13 ಸ್ಥಾನಗಳಿಗೆ ಸ್ಪರ್ಧಿಸಲಿದ್ದೇವೆ. ಆದರೆ, ಅವಿರೋಧ ಆಯ್ಕೆ ನಡೆಯುತ್ತದೆಯೋ? ಇಲ್ಲವೋ? ಎಂಬುದು ಅ. 11 ರ ಮಧ್ಯಾಹ್ನ 3 ಗಂಟೆವರೆಗೆ ಗೊತ್ತಾಗಲಿದೆ. ನಮ್ಮ 13 ಜನ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ಇದೆ. ಗೆಲ್ಲಬೇಕೆಂದೇ ನಾವು ಚುನಾವಣೆಗೆ ಸ್ಪರ್ಧಿಸುತ್ತೇದ್ದೇವೆ. ಗೆಲ್ಲುತ್ತೇವೆ ಎಂಬ ವಿಶ್ವಾಸ ನಮಗಿದೆ. ಬ್ಯಾಂಕಿನ ಆಡಳಿತ ಚುಕ್ಕಾಣಿ ಹಿಡಿಯುವ ಮೂಲಕ ಉತ್ತಮ ಆಡಳಿತ ನಡೆಸುತ್ತೇವೆ

-

ಬೆಳಗಾವಿ : ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ಪೆನಲ್‌ದಿಂದ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಗೆಲ್ಲಬೇಕೆಂದೇ ನಾವು ಸ್ಪರ್ಧೆ ಮಾಡುತ್ತಿದ್ದೇವೆ ಎಂದು ಅರಬಾವಿ ಶಾಸಕ, ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ( Arabavi MLA and Bemul President Balachandra Jarkiholi) ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪೆನಲ್‌ದಿಂದ 16 ಸ್ಥಾನಗಳ ಪೈಕಿ 13 ಸ್ಥಾನಗಳಿಗೆ ಸ್ಪರ್ಧೆ ಮಾಡಲಾಗುವುದು. ಈಗಾಗಲೇ 7 ಜನ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಅ. 11 ರಂದು 6 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ ಎಂದರು.
ನಾವು 13 ಸ್ಥಾನಗಳಿಗೆ ಸ್ಪರ್ಧಿಸಲಿದ್ದೇವೆ. ಆದರೆ, ಅವಿರೋಧ ಆಯ್ಕೆ ನಡೆಯುತ್ತದೆಯೋ? ಇಲ್ಲವೋ? ಎಂಬುದು ಅ. 11 ರ ಮಧ್ಯಾಹ್ನ 3 ಗಂಟೆವರೆಗೆ ಗೊತ್ತಾಗಲಿದೆ. ನಮ್ಮ 13 ಜನ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ಇದೆ. ಗೆಲ್ಲಬೇಕೆಂದೇ ನಾವು ಚುನಾವಣೆಗೆ ಸ್ಪರ್ಧಿಸುತ್ತೇದ್ದೇವೆ. ಗೆಲ್ಲುತ್ತೇವೆ ಎಂಬ ವಿಶ್ವಾಸ ನಮಗಿದೆ. ಬ್ಯಾಂಕಿನ ಆಡಳಿತ ಚುಕ್ಕಾಣಿ ಹಿಡಿಯುವ ಮೂಲಕ ಉತ್ತಮ ಆಡಳಿತ ನಡೆಸುತ್ತೇವೆ ಎಂದರು.
ಇದನ್ನೂ ಓದಿ: Belagavi news: ಅನೈತಿಕ ಸಂಬಂಧದ ಶಂಕೆ, ಗಂಡನ ಮೇಲೆ ಕುದಿವ ಎಣ್ಣೆ ಸುರಿದ ಹೆಂಡತಿ
ಈಗ ನಿಪ್ಪಾಣಿಯಿಂದ ಅಣ್ಣಾಸಾಹೇಬ ಜೊಲ್ಲೆ, ರಾಯಬಾಗದಿಂದ ಅಪ್ಪಾಸಾಹೇಬ ಕುಲಗೋಡೆ, ಯರಗಟ್ಟಿಯಿಂದ ಶಾಸಕ ವಿಶ್ವಾಸ ವೈದ್ಯ, ಸವದತ್ತಿಯಿಂದ ವಿರುಪಾಕ್ಷ ಮಾಮನಿ, ಬೈಲಹೊಂಗಲ ದಿಂದ ಮಹಾಂತೇಶ ದೊಡ್ಡಗೌಡ್ರ, ಖಾನಾಪುರದಿಂದ ಅರವಿಂದ ಪಾಟೀಲ ಹಾಗೂ ಕಿತ್ತೂರಿನಿಂದ ವಿಕ್ರಮ್ ಇನಾಮದಾರ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು 7 ಜನ ಅಭ್ಯರ್ಥಿಗಳು ಅ. 11 ರಂದೇ ನಾಮಪತ್ರ ಸಲ್ಲಿಸಲಿದ್ದಾರೆ.
ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ, ಎಲ್ಲರೊಂದಿಗೆ ಮಾತುಕತೆ ನಡೆಸಿ, ಗೋಕಾಕ, ಮೂಡಲಗಿ, ಬೆಳಗಾವಿ, ರಾಮದುರ್ಗ, ಹುಕ್ಕೇರಿ ಹಾಗೂ ಇತರೆ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು. ಜಾರಕಿಹೊಳಿ ಕುಟುಂಬದಿಂದ ಯಾರಾದರೂ ಸ್ಪರ್ಧ ಮಾಡುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಬೆಂಗಳೂರಿಗೆ ತೆರಳಿದ್ದಾರೆ. ಅವರ ಬಂದ ಬಳಿಕ ಅವರೊಂದಿಗೆ ಮಾತುಕತೆ ನಡೆಸಿ, ಬಳಿಕ ತೀರ್ಮಾನ ಮಾಡಲಾಗುವುದು ಎಂದರು.
ಹುಕ್ಕೇರಿಯಿಂದ ಸ್ಪರ್ಧೆಗೆ ರಾಜೇಂದ್ರ ಪಾಟೀಲ ಅವರನ್ನು ನಮ್ಮ ಅಭ್ಯರ್ಥಿಯೆಂದು ಘೋಷಿಸಲಾಗಿದೆ. ನಾವು ಅವಿರೋಧ ಆಯ್ಕೆಗೆ ಪ್ರಯತ್ನಿಸುತ್ತಿದ್ದೇವೆ ನಿಜ. ಚುನಾವಣೆಗೂ ಕೂಡ ನಾವು ಸಿದ್ಧ ಇದ್ದೇವೆ. ಕೆಲವು ಕಡೆ ಜಿದ್ದಾಜಿದ್ದಿ ಆಗಬಹುದು. ಕೆಲವೆಡೆ ನಾಮ ಕೇ ವಾಸ್ತೆ ಚುನಾವಣೆ ನಡೆಯಬಹುದು. 20 ವರ್ಷ ಗಟ್ಟಲೇ ಒಂದೊಂದು ತಾಲೂಕಿಗೆ ಚುನಾವಣೆಗೆ ಆಗಿಲ್ಲ. ಚುನಾವಣೆ ನಡೆಯೇಕೆಂದು ನಮ್ಮ ಆಶಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಭ್ಯರ್ಥಿಗಳಾದ ಅಣ್ಣಾಸಾಹೇಬ ಜೊಲ್ಲೆ, ಅಪ್ಪಾಸಾಹೇಬ ಕುಲಗೋಡೆ, ಮಹಾಂತೇಶ ದೊಡ್ಡಗೌಡರ, ಅರವಿಂದ ಪಾಟೀಲ, ವಿಕ್ರಮ ಇನಾಂದಾರ, ವೀರುಪಾಕ್ಷ ಮಾಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕತ್ತಿ ವಿರುದ್ಧ ಕಾನೂನು ಹೋರಾಟ
ಹುಕ್ಕೇರಿ ವಿದ್ಯುತ್ ಸಂಘದ ಚುನಾವಣೆ ಹಾಗೂ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ವಿರುದ್ಧ ರಮೇಶ್ ಕತ್ತಿ ಸಾಕಷ್ಟು ಅಪಪ್ರಚಾರ ಮಾಡಿದ್ದಾರೆ. ನಾವು ಆ ಮಟ್ಟಕ್ಕೆ ಇಳಿದು ಮಾತನಾಡು ವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಯಾವ ಹೋರಾಟ ಮಾಡಬೇಕು ಎಂಬುದನ್ನು ಚರ್ಚಿಸಿ ನಿರ್ಧರಿಸುತ್ತೇವೆ. ದೀಪಾವಳಿ ಹಬ್ಬ ಮುಗಿದ ನಂತರ ಕಾನೂನು ಹೋರಾಟದ ಮುಖಾಂತರ ಉತ್ತರಿಸುತ್ತೇನೆ ಎಂದು ಹರಿಹಾಯ್ದರು.