ಬೆಳಗಾವಿ: ಆಸ್ತಿಗಾಗಿ ಅತ್ತೆ ಮತ್ತು ಅಳಿಯನನ್ನು ಬರ್ಬರವಾಗಿ ಕೊಲೆ ಮಾಡಿರುವುದು ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಜೀವಾಪುರ ಗ್ರಾಮದಲ್ಲಿ ನಡೆದಿದೆ. ಬಸವ್ವ ನಾಯ್ಕರ್(60) ಹಾಗೂ ತಮ್ಮನ ಮಗ ರಮೇಶ್ ನಾಯ್ಕರ್(26) ಕೊಲೆಯಾದವರು. ರವಿ ಮತ್ತು ಪುಂಡಲೀಕ ಕೊಲೆಗೈದ ಆರೋಪಿಗಳಾಗಿದ್ದಾರೆ.
10 ಎಕರೆ ಆಸ್ತಿ ಹಂಚಿಕೆ ವಿಚಾರವಾಗಿ ಅಣ್ಣ-ತಮ್ಮಂದಿರು ಮತ್ತು ಅಕ್ಕ-ತಂಗಿಯರ ನಡುವೆ ಆಗಾಗ ಜಗಳವಾಗುತ್ತಿತ್ತು. ಬಸವ್ವ ಅವರ ಸಹೋದರಿಯರ ಮಕ್ಕಳಿಂದ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಕೊಡಲಿಯಿಂದ ಹೊಡೆದು ಹತ್ಯೆ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ರಾಮದುರ್ಗ ಡಿವೈಎಸ್ಪಿ ಸೇರಿ ಸ್ಥಳೀಯ ಪೊಲೀಸರು ಹಾಗೂ ಸುಕೋ ಟೀಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇನ್ನು ಘಟನೆ ಕುರಿತು ಎಸ್ಪಿ ಕೆ.ರಾಮರಾಜನ್ ಪ್ರತಿಕ್ರಿಯಿಸಿ, ನಿನ್ನೆ ಆಸ್ತಿಗಾಗಿ ಸಹೋದರಿಯರ ಮಕ್ಕಳಿಂದಲೇ ಕೊಲೆಯಾಗಿದೆ. ರವಿ ಮತ್ತು ಪುಂಡಲೀಕ ಎಂಬವರು ಕೊಲೆ ಮಾಡಿದ್ದಾರೆಂಬ ಮಾಹಿತಿ ಇದೆ. ಸ್ಥಳ ಪರಿಶೀಲನೆ ಮಾಡಿ ಮಾರ್ಗದರ್ಶನ ಮಾಡಿದ್ದೇನೆ. ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕುಟುಂಬದಲ್ಲಿ ಆಸ್ತಿ ವಿವಾದ ಸಾಕಷ್ಟು ವರ್ಷಗಳಿಂದ ಇತ್ತು. ಮಾರ್ಚ್ ತಿಂಗಳಲ್ಲಿ ರವಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಎಷ್ಟು ಜನ ಸೇರಿ ಕೊಲೆ ಮಾಡಿದ್ದಾರೆ ಎಂಬ ತನಿಖೆ ಮಾಡುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಭೂ ವಿವಾದ: 25 ವರ್ಷದ ಯುವಕನ್ನು ಗುಂಡಿಟ್ಟು ಕೊಂದ ಮಾಜಿ ಗ್ರಾ. ಪಂ ಸದಸ್ಯ
ಬೆಂಗಳೂರು: ಆಶ್ರಯ ಯೋಜನೆಯ ಭೂ ವಿವಾದಕ್ಕೆ ಸಂಬಂಧಿಸಿ 25 ವರ್ಷದ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಹೊಸಕೋಟೆ ತಾಲೂಕಿನ ಸೋಲೂರು ಗ್ರಾಮದಲ್ಲಿ ನಡೆದಿದೆ. 25 ವರ್ಷದ ಲಿಖಿತ್ ಗೌಡ ಮೃತ ದುರ್ದೈವಿ. ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ರಮೇಶ್ ಗೌಡ ಲಿಖಿತ್ ಗೌಡಗೆ ಡಬಲ್ ಬ್ಯಾರಲ್ (Bengaluru News) ಗನ್ನಿನಿಂದ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಆಶ್ರಯ ಮನೆಗಳ ನಿರ್ಮಾಣಕ್ಕೆ ಜಮೀನು ಗುರುತು ಮಾಡುವ ಕಾರ್ಯ ನಡೆಸಲಾಗುತ್ತಿತ್ತು. ಈ ವೇಳೆ ಸರ್ಕಾರಿ ಜಮೀನಿನ ಸುಮಾರು 10 ಗುಂಟೆ ಜಾಗವನ್ನು ಆರೋಪಿ ರಮೇಶ್ ಒತ್ತುವರಿ ಮಾಡಿಕೊಂಡಿದ್ದರು. ಹೀಗಾಗಿ ಒತ್ತುವರಿ ತೆರವಿಗೆ ಹೋಗಿದ್ದ ವೇಳೆ ರಮೇಶ್ ಮತ್ತು ಲಿಖಿತ್ ಗೌಡ ನಡುವೆ ಗಲಾಟೆ ನಡೆದಿದೆ. ಈ ವೇಳೆ ಲೈಸೆನ್ಡ್ ಗನ್ ನಿಂದ ರಮೇಶ್, ಲಿಖಿತ್ ಗೌಡ ಮೇಲೆ ಗುಂಡು ಹಾರಿಸಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಲಿಖಿತ್ ಗೌಡ ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಇಬ್ಬರು ಗಾಯಗೊಂಡಿದ್ದಾರೆ. ಹೊಸಕೋಟೆ ಪೊಲೀಸರು ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ, ಆರೋಪಿ ರಮೇಶ್ ಗೌಡನನ್ನು ವಶಕ್ಕೆ ಪಡೆದಿದ್ದಾರೆ.
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ನಡೆದ ಕಲಹ ವಿಕೋಪಕ್ಕೆ ತಿರುಗಿ ಅತ್ತೆ ಮತ್ತು ಅಳಿಯನನ್ನು ಸಂಬಂಧಿಕರೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯ ಯರಗಟ್ಟಿ ತಾಲೂಕಿನ ಜೀವಾಪುರ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ. ಗ್ರಾಮದ ರಮೇಶ್ ಹಣಮಂತ ನಾಯ್ಕರ (29) ಹಾಗೂ ಬಸವ್ವ ಭೀಮಪ್ಪ ನಾಯ್ಕರ (60) ಕೊಲೆಯಾದವರು. ಆಸ್ತಿ ವಿಚಾರವಾಗಿ ಕುಟುಂಬದ ನಡುವೆ ಮೊದಲಿನಿಂದಲೂ ವಿವಾದವಿತ್ತು ಎನ್ನಲಾಗಿದ್ದು, ಇದೇ ದ್ವೇಷ ಕೊಲೆಯಲ್ಲಿ ಅಂತ್ಯಗೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ; ಪ್ರಾಸಿಕ್ಯೂಷನ್ ಅರ್ಜಿ ವಜಾ, ಐವರು ಆರೋಪಿಗಳಿಗೆ ಸುಪ್ರೀಂ ಕೋರ್ಟ್ನಿಂದ ಬಿಗ್ ರಿಲೀಫ್
ಆಸ್ತಿ ವಿಚಾರವಾಗಿ ನಡೆದ ಮಾತಿನ ಚಕಮಕಿ ತೀವ್ರ ಸ್ವರೂಪ ಪಡೆದು ಇಬ್ಬರ ಹತ್ಯೆಗೆ ಕಾರಣವಾಗಿದೆ ಎನ್ನಲಾಗಿದೆ. ಒಂದೇ ಘಟನೆಯಲ್ಲಿ ಇಬ್ಬರು ಮೃತಪಟ್ಟಿರುವುದು ಗ್ರಾಮದಲ್ಲಿ ಆತಂಕ ಹಾಗೂ ಆಘಾತಕ್ಕೆ ಕಾರಣವಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮುರಗೋಡ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.