ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BY Vijayendra: ರಾಜ್ಯ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ: ಬಿ.ವೈ. ವಿಜಯೇಂದ್ರ ಕಿಡಿ

State Congress Government: ಕಬ್ಬು ಬೆಳೆಗಾರರ ಹೋರಾಟದಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿ ಬೆಳಗಾವಿಯ ಕೆಎಲ್‍ಇ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಪಡೆಯುತ್ತಿರುವ ರೈತನನ್ನು ಹಾಗೂ ಅವರ ಕುಟುಂಬಸ್ಥರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಮುಖಂಡರು ಭೇಟಿ ಮಾಡಿದ ವೇಳೆ ಮಾಧ್ಯಮಗಳ ಮಾತನಾಡಿದ ಬಿ.ವೈ. ವಿಜಯೇಂದ್ರ ಮಾತನಾಡಿದ್ದಾರೆ.

ರಾಜ್ಯ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ: ಬಿ.ವೈ. ವಿಜಯೇಂದ್ರ ಕಿಡಿ

-

Profile Siddalinga Swamy Nov 5, 2025 10:37 PM

ಬೆಳಗಾವಿ, ನ.5: ಹಿಂದೆ ಯಾವುದೇ ರಾಜ್ಯ ಸರ್ಕಾರಗಳು ರೈತರ ಹೋರಾಟದ (Sugarcane farmers protest) ವಿಚಾರದಲ್ಲಿ ಇಷ್ಟೊಂದು ಕೆಟ್ಟದಾಗಿ ನಡೆದುಕೊಂಡಿರಲಿಲ್ಲ. ಸರ್ಕಾರಕ್ಕೆ (State Congress Government) ಅಧಿಕಾರದ ಮದ ಏರಿದ್ದು, ಅದರಿಂದ ಈ ರೀತಿ ಮಾಡುತ್ತಿರುವಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಟೀಕಿಸಿದ್ದಾರೆ. ಕಬ್ಬು ಬೆಳೆಗಾರರ ಹೋರಾಟದಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿ ಬೆಳಗಾವಿಯ ಕೆಎಲ್‍ಇ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಪಡೆಯುತ್ತಿರುವ ರೈತನನ್ನು ಹಾಗೂ ಅವರ ಕುಟುಂಬಸ್ಥರನ್ನು ಬಿ.ವೈ. ವಿಜಯೇಂದ್ರ ಹಾಗೂ ಮುಖಂಡರು ಭೇಟಿ ಮಾಡಿದರು.

ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಬಿ.ವೈ. ವಿಜಯೇಂದ್ರ, ಕಬ್ಬು ಬೆಳೆಗಾರರ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಆ ಕುಟುಂಬದ ಕುರಿತು ಗಮನಿಸಬೇಕು ಎಂದು ಮುಖ್ಯಮಂತ್ರಿಗಳನ್ನು ಅವರು ಆಗ್ರಹಿಸಿದರು. ಸರ್ಕಾರವು ಕಬ್ಬು ಬೆಳೆಗಾರರ ವಿಚಾರದಲ್ಲಿ ಕಣ್ಣಿದ್ದೂ ಕುರುಡನಂತೆ, ಕಿವಿಯಿದ್ದೂ ಕಿವುಡನಂತೆ ವರ್ತಿಸುತ್ತಿತ್ತು. ಇದನ್ನು ಗಮನಿಸಿ ನಾನು ಮತ್ತು ಪಕ್ಷದ ನಾಯಕರು ಹೋರಾಟದಲ್ಲಿ ಭಾಗವಹಿಸಿದ್ದಾಗಿ ತಿಳಿಸಿದರು.

ನಿನ್ನೆ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಿದ್ದೇನೆ. ಇವತ್ತು ಕೂಡ ಹೋರಾಟದಲ್ಲಿ ಭಾಗವಹಿಸಿದ್ದೇವೆ. ಈ ಮೂಲಕ ಧೈರ್ಯ ತುಂಬಿಸಲು ಪ್ರಯತ್ನಿಸಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ವಿವರಿಸಿದರು.

ಈ ಸುದ್ದಿಯನ್ನೂ ಓದಿ | Basavaraj Bommai: ಕಬ್ಬಿನ ದರ ನಿಗದಿ ಪಡಿಸಲು ತಕ್ಷಣ ಸಿಎಂ ಮಧ್ಯ ಪ್ರವೇಶಿಸಲಿ: ಬಸವರಾಜ ಬೊಮ್ಮಾಯಿ ಆಗ್ರಹ

BY Vijayendra: ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದ್ದರೆ ತಕ್ಷಣ ರೈತರ ಸಂಕಷ್ಟಕ್ಕೆ ಪರಿಹಾರ ನೀಡಲಿ: ಬಿ.ವೈ. ವಿಜಯೇಂದ್ರ ಆಗ್ರಹ

ಬೆಳಗಾವಿ: ರಾಜ್ಯ ಸರ್ಕಾರವು (State Congress Government) ರೈತರನ್ನು ಕಡೆಗಣಿಸಿ ಉಳಿಯಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಎಚ್ಚರಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗುರ್ಲಾಪುರ ಕ್ರಾಸ್‌ನಲ್ಲಿ ನಡೆಯುತ್ತಿರುವ ಆಹೋರಾತ್ರಿ ಹೋರಾಟದಲ್ಲಿ ಮಂಗಳವಾರ ಪಾಲ್ಗೊಂಡಿದ್ದ ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಭಟನೆಯ ಕಿಚ್ಚು ಹೆಚ್ಚಾಗುತ್ತಿದೆ. ಇವತ್ತು ಗೋಕಾಕದಲ್ಲಿ ಪ್ರತಿಭಟನೆ ಆರಂಭವಾಗಿದೆ. ಚಿಕ್ಕೋಡಿ, ಬೈಲಹೊಂಗಲದಲ್ಲೂ ಹೋರಾಟ ಶುರುವಾಗಿದೆ. ಇನ್ನೂ ಕೂಡ ರಾಜ್ಯ ಸರ್ಕಾರವು ಕಬ್ಬು ಬೆಳೆಗಾರರ ಬಗ್ಗೆ ನಿರ್ಲಕ್ಷ್ಯ ತೋರಿದರೆ ಆ ಭಗವಂತ ಬಂದರೂ ನಿಮ್ಮ ಸರ್ಕಾರವನ್ನು ರಕ್ಷಿಸಲು ಸಾಧ್ಯವಾಗದು ಎಂದು ಹೇಳಿದರು.

ಕಬ್ಬು ಬೆಳೆಗಾರರ ನಿರ್ಲಕ್ಷ್ಯ ಮಾಡದಿರಿ ಎಂದು ಮುಖ್ಯಮಂತ್ರಿಗಳಲ್ಲಿ ವಿನಂತಿಸುವುದಾಗಿ ತಿಳಿಸಿದರು. ಇನ್ನೂ ಬೆಂಗಳೂರಿನಲ್ಲಿ ಕಣ್ಮುಚ್ಚಿ ಕೂತಿದ್ದರೆ, ಈ ಜ್ವಾಲೆ ಬೆಂಗಳೂರು ವಿಧಾನಸೌಧವನ್ನೂ ಸುಡಬಹುದು. ರಾಜ್ಯ ಸರ್ಕಾರವು ಇವತ್ತು ಅಥವಾ ನಾಳೆಯೇ ರೈತ ಮುಖಂಡರನ್ನು ಕೂರಿಸಿ, ಒಂದು ವೇದಿಕೆ ನಿರ್ಮಿಸಿ ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿದರು.

ರೈತ ವಿಷ ತೆಗೆದುಕೊಂಡ ವಿಚಾರ ತಿಳಿದು ಮನಸ್ಸು ತಡೆಯಲಿಲ್ಲ. ಮುಗ್ಧ ರೈತರ ಸಂಕಷ್ಟ ತಿಳಿದು ಮನಸ್ಸು ಕರಗಿಹೋಗಿದೆ. ಸಚಿವರ ಜತೆಗೆ ಮಾತನಾಡಿದ್ದೇನೆ ಎಂದ ಅವರು, ನಾಡಿಗೆ ಅನ್ನ ನೀಡುವ ರೈತರಿಗೆ ನ್ಯಾಯ ಕೊಡಲಾಗದ ಸರ್ಕಾರ ಬದುಕಿದ್ದೂ ಸತ್ತಂತೆ ಎಂದು ಅವರು ತಿಳಿಸಿದರು.

ಈ ಸುದ್ದಿಯನ್ನೂ ಓದಿ | Nikhil Kumaraswamy: ಸಕ್ಕರೆ ಕಾರ್ಖಾನೆ ಮಾಲೀಕರ ಲಾಬಿಗೆ ಮಣಿದು ಕಬ್ಬು ಬೆಳೆಗಾರರನ್ನು ಬಲಿಪಶು ಮಾಡಬೇಡಿ: ನಿಖಿಲ್ ಕುಮಾರಸ್ವಾಮಿ

ನಾನು ರಾಜಕಾರಣ ಮಾಡುತ್ತಿಲ್ಲ. ರೈತರು ಇವತ್ತು ಕಂಗಾಲಾಗಿದ್ದಾರೆ. ಕಬ್ಬು ಬೆಳೆಗಾರರು ಕೇಳುತ್ತಿರುವುದು ಭಿಕ್ಷೆಯಲ್ಲ, ನ್ಯಾಯಸಮ್ಮತ ಬೇಡಿಕೆಯನ್ನು ಅವರು ಕೇಳುತ್ತಿದ್ದಾರೆ. ಮುಖ್ಯಮಂತ್ರಿಗಳಿಗೆ ಜವಾಬ್ದಾರಿ ಇದ್ದಲ್ಲಿ, ರಾಜ್ಯ ಸರ್ಕಾರಕ್ಕೆ ಕಿಂಚಿತ್ತಾದರೂ ಮನುಷ್ಯತ್ವ ಇದ್ದರೆ, ತಕ್ಷಣ ಸಭೆ ಕರೆದು ರೈತರ ಸಂಕಷ್ಟಕ್ಕೆ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.