ಜ.19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಾಯಣ್ಣ ಪ್ರತಿಮೆ ಲೋಕಾರ್ಪಣೆ ಮತ್ತು ವಿವಿಧ ಕಾಮಗಾರಿಗಳ ಭೂಮಿಪೂಜೆ
ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡದಲ್ಲಿ ನಿರ್ಮಿಸಲಾಗಿರುವ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ, ರಾಯಣ್ಣ ಪ್ರತಿಮೆ ಲೋಕಾರ್ಪಣೆ ಮತ್ತು ವಿವಿಧ ಕಾಮಗಾರಿಗಳ ಭೂಮಿಪೂಜೆ ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಮಧ್ಯಾಹ್ನ 12 ಗಂಟೆಗೆ ನೆರವೇರಿಸಲಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಆತನ ಸಂಗಡಿಗರಿಗೆ ನೇಣು ಹಾಕಿದ್ದ ನಂದಗಡದಲ್ಲಿ ವೀರಭೂಮಿ ಹೆಸರಿನಲ್ಲಿ ವಸ್ತು ಸಂಗ್ರಹಾಲಯ ನಿರ್ಮಾಣ ಮಾಡಲಾಗಿದೆ.
-
ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡದಲ್ಲಿ ನಿರ್ಮಿಸಲಾಗಿರುವ ಸಂಗೊಳ್ಳಿ ರಾಯಣ್ಣ ವಸ್ತುಸಂಗ್ರಹಾಲಯ, ರಾಯಣ್ಣ ಪ್ರತಿಮೆ ಲೋಕಾರ್ಪಣೆ ಮತ್ತು ವಿವಿಧ ಕಾಮಗಾರಿಗಳ ಭೂಮಿಪೂಜೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ(Chief Minister Siddaramaiah) ಸೋಮವಾರ ಮಧ್ಯಾಹ್ನ 12 ಗಂಟೆಗೆ ನೆರವೇರಿಸಲಿದ್ದಾರೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಆತನ ಸಂಗಡಿಗರಿಗೆ ನೇಣು ಹಾಕಿದ್ದ ನಂದಗಡದಲ್ಲಿ ವೀರಭೂಮಿ ಹೆಸರಿನಲ್ಲಿ ವಸ್ತು ಸಂಗ್ರಹಾಲಯ ನಿರ್ಮಾಣ ಮಾಡಲಾಗಿದೆ.
ಇದನ್ನೂ ಓದಿ: Siddaramaiah Record: ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ʼಸಿದ್ದʼಹಸ್ತ
ಆಧುನಿಕ ತಂತ್ರಜ್ಞಾನ ಒಳಗೊಂಡಂತೆ ಸಂಗೊಳ್ಳಿ ರಾಯಣ್ಣ ಅವರ ಯಶೋಗಾಥೆಯನ್ನು ವಾಸ್ತ ವಿಕ ನೆಲೆಗಟ್ಟಿನಲ್ಲಿ ಮೂರ್ತಿಶಿಲ್ಪ, ಉಬ್ಬುಶಿಲ್ಪ, ಚಿತ್ರ ಫಲಕವನ್ನು ಧ್ವನಿ ಮೂಲಕ ಮಾಹಿತಿ ನೀಡುವ ತಂತ್ರಜ್ಞಾನ ವನ್ನು ಇಲ್ಲಿ ಅಳವಡಿಸಲಾಗಿದೆ.
ಅಷ್ಟೇ ಅಲ್ಲದೆ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ನಿರ್ಮಾಣವಾದ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ, 100 ಎಕ ಪ್ರದೇಶದಲ್ಲಿ ನಿರ್ಮಾಣವಾಗಿರುವ ಶೌರ್ಯ ಭೂಮಿ ಶಿಲ್ಪ ನಿರ್ಮಾಣ ಕಾಮಗಾರಿಯನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ.