Belagavi News: ಮರಾಠಿ ಬರಲ್ಲ, ಕನ್ನಡ ಮಾತಾಡಿ ಎಂದಿದ್ದಕ್ಕೆ ಕಂಡಕ್ಟರ್ ಮೇಲೆ ಗುಂಪು ಹಲ್ಲೆ
Belagavi News: ಬೆಳಗಾವಿ ನಗರದಿಂದ ಸುಳೇಬಾವಿ ಕಡೆಗೆ ಹೊರಟಿದ್ದ ರಾಜ್ಯ ರಸ್ತೆ ಸಾರಿಗೆ ಬಸ್‌ನಲ್ಲಿ ಟಿಕೆಟ್ ವಿಚಾರವಾಗಿ ಪ್ರಯಾಣಿಕರು ಹಾಗೂ ಕಂಡಕ್ಟರ್ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಕನ್ನಡ ಮಾತನಾಡಿ ಎಂದು ಹೇಳಿದ್ದಕ್ಕೆ ಮರಾಠಿ ಭಾಷಿಕರ ಗುಂಪು ದಾಳಿ ಮಾಡಿದೆ ಎಂದು ಕಂಡಕ್ಟರ್ ಹೇಳಿದ್ದಾರೆ.


ಬೆಳಗಾವಿ, ಫೆ.21 : ನನಗೆ ಮರಾಠಿ ಬರಲ್ಲ, ಕನ್ನಡ ಮಾತಾಡಿ ಎಂದಿದ್ದಕ್ಕೆ ಕೋಪಗೊಂಡು ಬಸ್ ಕಂಡಕ್ಟರ್ ಮೇಲೆ ಗುಂಪು ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ನಗರದ ಹೊರವಲಯದಲ್ಲಿ (Belagavi News) ನಡೆದಿದೆ. ಬೆಳಗಾವಿ ತಾಲೂಕಿನ ಸೂಳೆಬಾವಿ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ಘಟನೆ ನಡೆದಿದೆ. ಸಾರಿಗೆ ಬಸ್‌ನಲ್ಲಿ ಮರಾಠಿಯಲ್ಲಿ ಮಾತನಾಡಬೇಕು ಎಂದು ಮರಾಠಿ ಭಾಷಿಕರು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿ ಅಟ್ಟಹಾಸ ಮೆರೆದಿದ್ದಾರೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹಲ್ಲೆಗೊಳಗಾದ ಕಂಡೆಕ್ಟರ್ ಮಹಾದೇವ ಪೂಜಾರ್ ಮಾತನಾಡಿ, ಒಬ್ಬ ಹುಡುಗಿ ಹಾಗೂ ಹುಡುಗ ಸಾರಿಗೆ ಬಸ್‌ನಲ್ಲಿ ಇದ್ದರು. ಹೆಣ್ಣು ಮಕ್ಕಳಿಗೆ ಉಚಿತ ಪ್ರಯಾಣ ಇದೆ. ಆದರೆ ಆ ಹುಡುಗಿ ಹುಡಗನ ಟಿಕೆಟ್ ಉಚಿತವಾಗಿ ಕೊಡಬೇಕು ಎಂದು ದಬ್ಬಾಳಿಕೆ ಮಾಡಿ ನಿನಗೆ ಮರಾಠಿ ಭಾಷೆ ಬರುವುದಿಲ್ಲ ಎಂದು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಕಣ್ಣೀರು ಹಾಕಿದ್ದಾರೆ.
ಸಾರಿಗೆ ಬಸ್‌ನಲ್ಲಿ ಸುಮಾರು 20 ಪ್ರಯಾಣಿಕರು ಇದ್ದರು. ಮನಸೋ ಇಚ್ಛೆ ಥಳಿಸಿದ್ದಾರೆ ಎಂದು ಕಂಡಕ್ಟರ್ ಕಣ್ಣೀರು ಹಾಕಿದ್ದಾರೆ. ನೀನು ಮರಾಠಿ ಮಾತನಾಡಬೇಕು. ಕನ್ನಡ ಮಾತನಾಡಿದರೆ ತಿಳಿಯುವುದಿಲ್ಲ ಎಂದು ಸಣ್ಣಪಂತಬಾಳೆಂದ್ರಿ ಬರುವ ಹೊತ್ತಿಗೆ ನೂರಾರು ಜನ ಯುವಕರ ಗುಂಪು ನನ್ನ ಮೇಲೆ ಹಲ್ಲೆ ಮಾಡಿದೆ ಎಂದು ಕಂಡಕ್ಟರ್ ಆರೋಪಿಸಿದ್ದಾರೆ.

ಕರವೇ ಜಿಲ್ಲಾಧ್ಯಕ್ಷ ವಾಜೀದ್ ಹಿರೇಕುಡಿ ಮಾತನಾಡಿ, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಕನ್ನಡ ಭಾಷೆ ಮಾತನಾಡಿದ್ದಕ್ಕೆ ಸಾರಿಗೆ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿರುವ ಪುಂಡರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದರೇ ಕನ್ನಡಿಗರು ಮನೆ ಹೊಕ್ಕು ಹೊಡೆಯುತ್ತೇವೆ ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಕರವೇ ಮುಖಂಡರು ಆಸ್ಪತ್ರೆಯಲ್ಲಿ ಚಿಕಿತ್ಸೆ ಒಡೆಯುತ್ತಿದ್ದ ಕಂಡಕ್ಟರ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
![]()
ಸಾರಿಗೆ ಬಸ್ ನಿರ್ವಾಹಕ ಟಿಕೆಟ್ ಕೊಡುವ ಸಂದರ್ಭದಲ್ಲಿ ಮರಾಠಿ ಭಾಷೆ ಬರುವುದಿಲ್ಲ ಕನ್ನಡದಲ್ಲಿ ಮಾತನಾಡಿ ಎಂದು ಹೇಳಿದ್ದಕ್ಕೆ ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಗಳನ್ನು ಬಂಧಿಸಿ ಕ್ರಮ ಜರುಗಿಸುತ್ತೇವೆ.
ರೋಹನ್ ಜಗದೀಶ್, ಡಿಸಿಪಿ, ಬೆಳಗಾವಿ
ಈ ಸುದ್ದಿಯನ್ನೂ ಓದಿ | Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್: 1 ವಾರದಲ್ಲಿ ಖಾತೆಗೆ ಹಣ ಜಮಾ
ಪರಿಚಯಸ್ಥ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!
ಬೆಂಗಳೂರು: ಇತ್ತೀಚೆಗೆ ಕೆ.ಆರ್ ಮಾರ್ಕೆಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಬೆನ್ನಲ್ಲೇ ಅಂತಹುದೇ ಮತ್ತೊಂದು ಪೈಶಾಚಿಕ ಕೃತ್ಯ ರಾಜಧಾನಿಯಲ್ಲಿ ನಡೆದಿದೆ. ತಡರಾತ್ರಿ ಮಹಿಳೆಯ ಮೇಲೆ ನಾಲ್ವರು ಕಾಮುಕರು ಅತ್ಯಾಚಾರ ನಡೆಸಿರುವ ಘಟನೆ ಬೆಂಗಳೂರಿನ ಕೋರಮಂಗಲದ ಜ್ಯೋತಿ ನಿವಾಸ ಜಂಕ್ಷನ್ ಬಳಿ ನಡೆದಿದೆ. ತಡರಾತ್ರಿ 12 ಗಂಟೆಗೆ ಸುಮಾರಿಗೆ ನಾಲ್ವರು ಕಾಮುಕರು ಮಹಿಳೆಯನ್ನು ಭೇಟಿಯಾಗಿದ್ದರು. ಪರಿಚಯಸ್ಥ ಮಹಿಳೆಯನ್ನು ನಾಲ್ವರು ದುಷ್ಕರ್ಮಿಗಳು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಘಟನೆ ಕುರಿತು ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈಗಾಗಲೇ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಊಟಕ್ಕೆಂದು ಮುಚ್ಚಿದ ಹೋಟೆಲ್ ಟೆರೇಸ್ ಮೇಲೆ ಮಹಿಳೆಯನ್ನು ಕರೆದುಕೊಂಡು ಹೋದ ಕಾಮುಕರು, ಬಳಿಕ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಮಹಿಳೆಯ ಮೊಬೈಲ್ ಹಾಗೂ ಪರ್ಸ್ ಕಿತ್ತುಕೊಂಡು ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಪರಿಚಯಸ್ಥ ಮಹಿಳೆಯನ್ನು ಒಬ್ಬ ಹೋಟೆಲ್ ಟೆರೇಸ್ ಮೇಲೆ ಕರೆದಿಕೊಂಡು ಹೋಗಿದ್ದಾನೆ. ಈ ವೇಳೆ ಉಳಿದವರು ಅಲ್ಲೇ ಕಾದು ಕುಳಿತು ಆತನೊಂದಿಗೆ ಸೇರಿಕೊಂಡು ಸಾಮೂಹಿಕ ಆತ್ಯಾಚಾರ ಎಸಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬೆಳಗ್ಗೆ 5 ಗಂಟೆಗೆ ಸಂತ್ರಸ್ತ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಜೊತೆಗೆ, ಮಹಿಳೆಯ ದೂರನ್ನು ಆಧರಿಸಿ ಕೋರಮಂಗಲ ಠಾಣೆಯಲ್ಲಿ ಆತ್ಯಾಚಾರ ಪ್ರಕರಣ ದಾಖಲು ಆಗಿದೆ. ಈ ಪ್ರಕರಣದ ಕುರಿತಂತೆ ಕೋರಮಂಗಲ ಪೊಲೀಸರು ಸದ್ಯ ಮೂವರನ್ನು ಅರೆಸ್ಟ್ ಮಾಡಿದ್ದಾರೆ.
ಈ ಸುದ್ದಿಯನ್ನೂ ಓದಿ | ರೀಲ್ಸ್ ಗೀಳು ತಂದ ಆಪತ್ತು; ರೈಲು ಡಿಕ್ಕಿಯಾಗಿ ಮೂವರು ಯುವಕರ ಸಾವು