ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Ramadurga News: ಜನರ ಬಾಳಿಗೆ ಬೆಳಕಾದ ಧರ್ಮಸ್ಥಳ ಸಂಸ್ಥೆ ಕಾರ್ಯ ಯೋಜನೆ

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಆರ್ಥಿಕ ಸಹಾಯ, ನಿರ್ಗತಿಕರಿಗೆ ಮಾಶಾಸನ, ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೇರಿದಂತೆ ನೂರಾರು ಕಾರ್ಯಕ್ರಮಗಳನ್ನು ಜಾರಿಗೆ ತಂದು, ಲಕ್ಷಾಂತರ ಜನರ ಬಾಳಿಗೆ ಬೆಳಕಾಗಿದ್ದಾರೆ. ಕ್ಷೇತ್ರದ ಕಾರ್ಯ ಯೋಜನೆ ಇನ್ನಷ್ಟು ವಿಸ್ತಾರವಾಗಲಿ

ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ಗ್ರಾಮ ಸುಭೀಕ್ಷೆಗಾಗಿ ಈಚೆಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ನೇತ್ರತ್ವದಲ್ಲಿ ಸಾಮೂಹಿಕ ಶ್ರೀಶನೇಶ್ವರ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.

ರಾಮದುರ್ಗ: ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ಗ್ರಾಮ ಸುಭೀಕ್ಷೆಗಾಗಿ ಈಚೆಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಶ್ರೀ ಶನೇಶ್ವರ ಪೂಜಾ ವ್ಯವಸ್ಥಾಪನಾ ಸಮಿತಿ, ಸಾಲಹಳ್ಳಿಯ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ, ಶ್ರೀ ಸಾಯಿ ಸೇವಾ ಸಮಿತಿ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಶ್ರೀಶನೇಶ್ವರ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಕಮಕೇರಿ ಗ್ರಾಮದ ವೃಂದಾರಣ್ಯ ಮಠದ ಶ್ರೀ ವಾಸುದೇವ ಸುತದಾಸ ಪ್ರಭುಜಿ ಹಾಗೂ ಶ್ರೀಸಂಗಮೇಶ್ವರ ಮಠದ ಶ್ರೀಮಹಾದೇವಮ್ಮ ಮಾತೆ ಯವರು, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಆರ್ಥಿಕ ಸಹಾಯ, ನಿರ್ಗತಿಕರಿಗೆ ಮಾಶಾಸನ, ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೇರಿದಂತೆ ನೂರಾರು ಕಾರ್ಯಕ್ರಮಗಳನ್ನು ಜಾರಿಗೆ ತಂದು, ಲಕ್ಷಾಂತರ ಜನರ ಬಾಳಿಗೆ ಬೆಳಕಾಗಿದ್ದಾರೆ. ಕ್ಷೇತ್ರದ ಕಾರ್ಯ ಯೋಜನೆ ಇನ್ನಷ್ಟು ವಿಸ್ತಾರವಾಗಲಿ ಎಂದು ಹೇಳಿದರು.

ಇದನ್ನೂ ಓದಿ: Ramadurga News: ಚಂದರಗಿ ಕ್ರೀಡಾ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ, ಪಾಲಕರ ದಿನಾಚರಣೆ

ಸಂಸ್ಥೆಯ ಜಿಲ್ಲಾ ನಿರ್ದೇಶಕ ಎಚ್.ಆರ್. ಲವಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಪ್ಪಾಜಿಗೌಡ ಪಾಟೀಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗ್ರಾಮದ ಮುಖಂಡ ರಾಜೇಂದ್ರ ಗೌಡ ನಾಡಗೌಡ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಚಾರ್ಯ ಎಲ್.ಎಸ್. ಕೊಳಚಿ ಧಾರ್ಮಿಕ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಲ್ಲಮ್ಮ ಮಾದರ, ಪಿಕೆಪಿಎಸ್ ಅಧ್ಯಕ್ಷ ನಿಂಗಪ್ಪ ನಾಯಕ, ಹಾಲು ಉತ್ಪಾದನಾ ಮಂಡಳಿ ಅಧ್ಯಕ್ಷ ಅಶೋಕ ನಾಡಗೌಡರ, ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಅಶೋಕ ಕುಲಗೋಡ, ಗ್ರಾಪಂ ಸದಸ್ಯರಾದ ವಿಜಯಕುಮಾರ್ ಕೃಷ್ಣಗೌಡ್ರ, ಗಿರೀಶ್ ನಾಡಗೌಡ್ರ, ಲಕ್ಷ್ಮೀಬಾಯಿ ಮಳ್ಳಿಕೇರಿ, ಸುನಂದಾ ಪಾಟೀಲ, ವಿಜಯಲಕ್ಷ್ಮೀ ನಾಡಗೌಡರ, ಪ್ರತಿಭಾ ಕೃಷ್ಣಗೌಡ್ರ, ಮಾಲತಿ ಒಂಟಗೋಡಿ, ಜ್ಞಾನ ವಿಕಾಸ ಸಮನ್ವ ಯಾಧಿಕಾರಿ ಸುನಿತಾ ಬಡಿಗೇರ, ಲೆಕ್ಕ ಪರಿಶೋಧಕ ಶರಣು ಬಸಪ್ಪ ಸೇರಿದಂತೆ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಯೋಜನಾಧಿಕಾರಿ ಸಚಿನ್ ಸ್ವಾಗತಿಸಿದರು. ವಲಯ ಮೇಲ್ವಿಚಾರಕ ಗಿರೀಶ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.