DK Shivakumar: ಬೆಳಗಾವಿ ಸಮಾವೇಶದಲ್ಲಿ ಹೃದಯಾಘಾತದಿಂದ ಕೆಂಚಪ್ಪ ಸಾವು: 5 ಲಕ್ಷ ರೂ.ಪರಿಹಾರ ಘೋಷಿಸಿದ ಡಿಕೆಶಿ
DK Shivakumar: ಬೆಳಗಾವಿಯ ‘ಜೈ ಬಾಪು ಜೈ ಭೀಮ್ ಜೈ ಸಂವಿಧಾನ’ ಸಮಾವೇಶಕ್ಕೆ ಆಗಮಿಸಿದ್ದಾಗ ಹೃದಯಘಾತದಿಂದ ಮೃತಪಟ್ಟ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ನದಿಹರ್ಲಳ್ಳಿಯ ಬಸಪ್ಪ ಕೆಂಚಪ್ಪ ಪಾಮೆನಳ್ಳಿ ಅವರ ಕುಟುಂಬಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್, ಕೆಪಿಸಿಸಿ ವತಿಯಿಂದ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
Siddalinga Swamy
January 22, 2025
ಬೆಂಗಳೂರು: ಬೆಳಗಾವಿಯ ‘ಜೈ ಬಾಪು ಜೈ ಭೀಮ್ ಜೈ ಸಂವಿಧಾನ’ ಸಮಾವೇಶಕ್ಕೆ ಆಗಮಿಸಿದ್ದಾಗ ಹೃದಯಘಾತದಿಂದ ಮೃತಪಟ್ಟ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ನದಿಹರ್ಲಳ್ಳಿಯ ಬಸಪ್ಪ ಕೆಂಚಪ್ಪ ಪಾಮೆನಳ್ಳಿ ಅವರ ಕುಟುಂಬಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅವರು ಕೆಪಿಸಿಸಿ ವತಿಯಿಂದ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಬೆಳಗಾವಿಯಲ್ಲಿ ಜನವರಿ 21ರಂದು ನಡೆದ ಸಮಾವೇಶದಲ್ಲಿ ಸುಮಾರು 60 ವರ್ಷ ವಯಸ್ಸಿನ ಕೆಂಚಪ್ಪ ಅವರು ಕುಸಿದು ಬಿದ್ದು ಮೃತಪಟ್ಟಿದ್ದರು.
ಕೆಂಚಪ್ಪ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರಿಗೆ ಭಗವಂತ ನೀಡಲಿ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | CM Siddaramaiah: ಎರಡು ಅಪಘಾತಗಳಲ್ಲಿ ಮಡಿದ 14 ಮಂದಿಗೆ ಸಿಎಂ ಸಂತಾಪ, ಪರಿಹಾರ ಘೋಷಣೆ