#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

DK Shivakumar: ಪ್ರಭಾಕರ್ ಕೋರೆಯವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆದಿಲ್ಲ ಎಂದ ಡಿಕೆಶಿ

DK Shivakumar: ಪ್ರಭಾಕರ್ ಕೋರೆ ಅವರು ನಮಗೆ ಶಾಶ್ವತ ಗೆಳೆಯರು. ಯಾವುದೇ ಸರ್ಕಾರವಿದ್ದರೂ ಅವರ ಸಂಸ್ಥೆಗಳಿಂದ ಸಹಕಾರ ನೀಡುತ್ತಾರೆ. ಗಾಂಧಿ ಭಾರತ ಕಾರ್ಯಕ್ರಮವಿರುವ ಕಾರಣ ಗಣ್ಯರು ಉಳಿದುಕೊಳ್ಳಲು ಅವರ ಶಿಕ್ಷಣ ಸಂಸ್ಥೆಗಳಿಂದ 170 ಕ್ಕೂ ಹೆಚ್ಚು ಕೊಠಡಿಗಳನ್ನು ನೀಡಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಂಸ್ಥೆಯಿಂದ ಬೇಕಾದ ಸಹಾಯ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

DK Shivakumar: ಪ್ರಭಾಕರ್ ಕೋರೆಯವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆದಿಲ್ಲ ಎಂದ ಡಿಕೆಶಿ

ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ್ ಕೋರೆ ಅವರ ಮನೆಗೆ ಭೇಟಿ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್.

Profile Siddalinga Swamy Jan 20, 2025 9:19 PM

ಬೆಳಗಾವಿ, ಜ.20, 2025: ಪ್ರಭಾಕರ್ ಕೋರೆ (Prabhakar Kore) ಅವರನ್ನು ನಾವು ಕಾಂಗ್ರೆಸ್ ಪಕ್ಷಕ್ಕೆ (Congress Party) ಕರೆದೂ ಇಲ್ಲ, ಅವರು ಬರುವುದೂ ಇಲ್ಲ. ಇದೊಂದು ಸೌಹರ್ದಯುತ ಭೇಟಿ ಅಷ್ಟೇ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದರು. ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ್ ಕೋರೆ ಅವರ ಮನೆಗೆ ಸೋಮವಾರ ಭೇಟಿ ನೀಡಿದ ನಂತರ ಮಾಧ್ಯಮಗಳ ಪ್ರಶ್ನೆಗೆ ಅವರು ಉತ್ತರಿಸಿದರು.

ಪ್ರಭಾಕರ್ ಕೋರೆ ಅವರು ನಮಗೆ ಶಾಶ್ವತ ಗೆಳೆಯರು. ಯಾವುದೇ ಸರ್ಕಾರವಿದ್ದರೂ ಅವರ ಸಂಸ್ಥೆಗಳಿಂದ ಸಹಕಾರ ನೀಡುತ್ತಾರೆ. ಗಾಂಧಿ ಭಾರತ ಕಾರ್ಯಕ್ರಮವಿರುವ ಕಾರಣ ಗಣ್ಯರು ಉಳಿದುಕೊಳ್ಳಲು ಅವರ ಶಿಕ್ಷಣ ಸಂಸ್ಥೆಗಳಿಂದ 170 ಕ್ಕೂ ಹೆಚ್ಚು ಕೊಠಡಿಗಳನ್ನು ನೀಡಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಂಸ್ಥೆಯಿಂದ ಬೇಕಾದ ಸಹಾಯ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ಈ ಕಾರಣಕ್ಕೆ ಅವರ ಮನೆಗೆ ಬಂದು ಸೌಹಾರ್ದಯುತ ಭೇಟಿ ನೀಡಿ, ಊಟ ಮಾಡಿದೆ. ಒಳ್ಳೆಯ ಜೋಳದ ರೊಟ್ಟಿ ಊಟ ನೀಡಿದ್ದಾರೆ. ಜೋಳವನ್ನು ತಿನ್ನುವವನು ಜಟ್ಟಿಯಂತೆ ಆಗುವನು ಎನ್ನುವ ಮಾತಿದೆ ಎಂದರು.

ಈ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಕೋರೆ ಅವರ ಕುಟುಂಬ ದೊಡ್ಡ ಕೊಡುಗೆ ನೀಡಿದೆ. ಸ್ವಾತಂತ್ರ್ಯ ಚಳುವಳಿಗೆ ಧನ ಸಹಾಯ ಮಾಡಿದೆ. ಪ್ರಭಾಕರ್ ಕೋರೆ ಅವರ ತಂದೆ ಸ್ವಾತಂತ್ರ್ಯ ಹೋರಾಟಗಾರರು ಎಂದರು.

ಕೋರೆ ಅವರ ಸಾಮರ್ಥ್ಯಕ್ಕೆ ತಕ್ಕಂತೆ ಸ್ಥಾನಗಳು ಸಿಗಲಿಲ್ಲ ಅಲ್ಲವೇ ಎನ್ನುವ ಪ್ರಶ್ನೆಗೆ, ಈ ಪ್ರಶ್ನೆಯನ್ನು ಬಿಜೆಪಿಯವರ ಬಳಿ ಕೇಳಿ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಯತ್ನಾಳ್‌ನ ಹುಚ್ಚಾಸ್ಪತ್ರೆಗೆ ಸೇರಿಸೋಣ

ಮಹಾತ್ಮ ಗಾಂಧಿ ಅವರ ಹತ್ಯೆಯಲ್ಲಿ ನೆಹರೂ ಅವರ ಕೈವಾಡವಿತ್ತು ಎನ್ನುವ ಯತ್ನಾಳ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, ನಮ್ಮ ಎಂ.ಬಿ.ಪಾಟೀಲ್ ಅವರ ಆಸ್ಪತ್ರೆಗೆ ದಾಖಲಿಸಿಕೊಳ್ಳಿ ಎಂದು ಅವರಿಗೆ ಹೇಳುವೆ ಅಥವಾ ಹುಚ್ಚಾಸ್ಪತ್ರೆಗೆ ಸೇರಿಸಲು ಏರ್ಪಾಟು ಮಾಡೋಣ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | BOB Recruitment 2025: ಬ್ಯಾಂಕ್‌ ಆಫ್‌ ಬರೋಡಾದ 1,267 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಟೈಮ್‌ ಟೇಬಲ್‌

ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಅವರು ಜ.21 ರ ಬೆಳಗ್ಗೆ 10.30 ಕ್ಕೆ ಆಗಮಿಸಬಹುದು. ನೇರ ಸುವರ್ಣಸೌಧಕ್ಕೆ ಆಗಮಿಸುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಉತ್ತರಿಸಿದರು.