ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Winter Session: ಕುಣಿಗಲ್‌ಗೆ ಅನುದಾನ ನೀಡಿಕೆಯಲ್ಲಿ ತಾರತಮ್ಯ ನಿವಾರಣೆ: ಸಿಎಂ ಭರವಸೆ

ಮಧುಗಿರಿ ತಾಲೂಕಿಗೆ ಹೆಚ್ಚು ಅನುದಾನ ನೀಡಿ, ಕುಣಿಗಲ್ ತಾಲೂಕಿಗೆ ಕಡಿಮೆಯಾಗಿರುವ ಬಗ್ಗೆ ಶಾಸಕರು ತಿಳಿಸಿದ್ದಾರೆ. ಆದರೆ, ಮಧುಗಿರಿಯಲ್ಲಿ ಶೇ. 26 ರಷ್ಟು ಎಸ್‌ಸಿ, ಎಸ್‌ಟಿ ಸಮುದಾಯದವರಿದ್ದು, ಕುಣಿಗಲ್‌ನಲ್ಲಿ ಕೇವಲ ಶೇ. 8 ರಷ್ಟು ಮಾತ್ರ ಎಸ್‌ಸಿ-ಎಸ್‌ಟಿಗೆ ಸೇರಿದ ಸಮುದಾಯಗಳಿವೆ. ಆದ್ದರಿಂದ ಅನುದಾನದ ಹೆಚ್ಚಿನ ಪಾಲು ಮಧುಗಿರಿಗೆ ನೀಡಿರಬಹುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ)

ಬೆಳಗಾವಿ, ಡಿ.16: ಕುಣಿಗಲ್ ತಾಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ, ಶಾಸಕ ಡಾ. ಎಚ್.ಡಿ.ರಂಗನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂ:82(1612) ಕ್ಕೆ ಉತ್ತರ ನೀಡಿದರು.

2024-25ರಲ್ಲಿ ನಬಾರ್ಡ್‌ನಿಂದ 5600 ಕೋಟಿ ಕಮ್ಮಿ ಬಡ್ಡಿದರದಲ್ಲಿ ಬರಬೇಕಾಗಿತ್ತು. ಅದರಲ್ಲಿ 3415 ಕೋಟಿ ರೂ. ಬಂದಿದ್ದು, 2185 ಕೋಟಿ ರೂ.ಗಳ ಕೊರತೆಯಾಗಿದೆ. ಮಧುಗಿರಿ ತಾಲೂಕಿಗೆ ಹೆಚ್ಚು ಅನುದಾನ ನೀಡಿ, ಕುಣಿಗಲ್ ತಾಲೂಕಿಗೆ ಕಡಿಮೆಯಾಗಿರುವ ಬಗ್ಗೆ ಶಾಸಕರು ತಿಳಿಸಿದ್ದಾರೆ. ಆದರೆ, ಮಧುಗಿರಿಯಲ್ಲಿ ಶೇ. 26 ರಷ್ಟು ಎಸ್ ಸಿ ಎಸ್ ಟಿ ಸಮುದಾಯದವರಿದ್ದು, ಕುಣಿಗಲ್‌ನಲ್ಲಿ ಕೇವಲ ಶೇ. 8 ರಷ್ಟು ಮಾತ್ರ ಎಸ್‌ಸಿ-ಎಸ್‌ಟಿಗೆ ಸೇರಿದ ಸಮುದಾಯಗಳಿವೆ. ಆದ್ದರಿಂದ ಅನುದಾನದ ಹೆಚ್ಚಿನ ಪಾಲು ಮಧುಗಿರಿಗೆ ನೀಡಿರಬಹುದು. ಆದರೆ ಮುಂದಿನ ವರ್ಷದಿಂದ ಈ ತಾರತಮ್ಯವನ್ನು ಕಾನೂನುಪ್ರಕಾರ ನಿವಾರಣೆ ಮಾಡಲಾಗುವುದು ಎಂದರು.

ಕುಣಿಗಲ್ ತಾಲೂಕಿನಲ್ಲಿ 4 ಲಕ್ಷ ಪಹಣಿ ಇದ್ದು, 1 ಲಕ್ಷ ರೈತರಿದ್ದಾರೆ. ಆದರೆ ಡಿಸಿಸಿ ಬ್ಯಾಂಕ್‌ಗಳ ಮೂಲಕ ಕೇವಲ 20 ರೈತರಿಗೆ ಮಾತ್ರ ಅಲ್ಪಾವಧಿ ಸಾಲ ಕೊಟ್ಟಿರುತ್ತಾರೆ. ರೈತರ ಹಣವನ್ನು ತಮ್ಮ ಕಪಿಮುಷ್ಟಿಯಲ್ಲಿ ಹಿಡಿದಿರುವ ಇಂತಹ ಸಂಘಗಳಿಂದ ರೈತರ ರಕ್ಷಣೆಗೆ ಸರ್ಕಾರ ಬರಬೇಕಿದೆ ಎಂದು ಕುಣಿಗಲ್ ಶಾಸಕ ಡಾ. ಎಚ್.ಡಿ.ರಂಗನಾಥ್ ಅವರು ತಮ್ಮ ಪ್ರಶ್ನೆಯ ಮೂಲಕ ಮುಖ್ಯಮಂತ್ರಿಗಳ ಗಮನ ಸೆಳೆದರು.

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ಹೋರಾಟ: ಡಿ.ಕೆ. ಶಿವಕುಮಾರ್

2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: 2023ರಂತೆ 2028 ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ , ವಿರೋಧಪಕ್ಷದವರ ಪ್ರಶ್ನೆಗೆ ಉತ್ತರಿಸುತ್ತಾ ಮಾತನಾಡಿದರು.

ಗಾದೆ ಮಾತೆನಂತೆ ಉರಿಯುವುದರ ಮೇಲೆ ಉಪ್ಪು ಹಾಕಬಾರದೆಂಬ ಎಂಬ ಗಾದೆ ಮಾತಿದೆ. ವಿರೋಧಪಕ್ಷದವರು ಇರುವುದೇ ಉರಿಯುವುದರ ಮೇಲೆ ಉಪ್ಪು ಸುರಿಯಲು ಎಂದರು. ವಿರೋಧಪಕ್ಷದವರು ಏನೇ ಪ್ರಚೋದನೆ ಮಾಡಿದರೂ, ನಮ್ಮ ಶಾಸಕರಾರೂ ಪ್ರಚೋದಿತರಾಗುವುದಿಲ್ಲ. ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರಬೇಕೆಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ. 140 ಶಾಸಕರು ನಮ್ಮೊಂದಿಗಿದ್ದಾರೆ. ವಿರೋಧಪಕ್ಷದವರು ಇದರಲ್ಲಿ ಹುಳಿ ಹಿಂಡುವ ಅಗತ್ಯವಿಲ್ಲ ಎಂದರು.

ಜನರ ನಾಡಿಮಿಡಿತ ಕಾಂಗ್ರೆಸ್ ಸರ್ಕಾರಕ್ಕೆ ತಿಳಿದಿದೆ

2023 ರಲ್ಲಿ ಜನರು ಆಶೀರ್ವಾದ ಮಾಡಿದಂತೆ 2028 ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಆಡಳಿತಕ್ಕೆ ಬರಲಿದೆ. ಜನರ ನಾಡಿಮಿಡಿತ ಸರ್ಕಾರಕ್ಕೆ ತಿಳಿದಿದೆ. ಕರ್ನಾಟಕದ ಜನ ಬಿಜೆಪಿಗೆ ಎಂದಿಗೂ ಅಧಿಕಾರಕ್ಕೆ ತರುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಎರಡು ಬಾರಿ ಅಧಿಕಾರ ನಡೆಸಿದರೂ, ಒಂದು ಬಾರಿಯೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿಲ್ಲ. 2008 , 2018 ರಲ್ಲಿ ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ. 2019 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಾರದೆಂಬ ಉದ್ದೇಶದಿಂದ ಜೆಡಿಎಸ್ ನೊಂದಿಗೆ ಸರ್ಕಾರ ರಚಿಸಲಾಯಿತು. ಆದರೆ ಬಿಜೆಪಿಯವರು , ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಉದ್ದೇಶದ ಬಗ್ಗೆ ಪ್ರಶ್ನಿಸಿದರು.

ಹೈಕಮಾಂಡ್ ಹೇಳುವ ತನಕವೂ ನಾನೇ ಮುಖ್ಯಮಂತ್ರಿ ಎಂದ ಸಿದ್ದರಾಮಯ್ಯ

ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ

ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ಮಾತು ಅಂತಿಮವಾಗಿರುತ್ತದೆ. ಆದರೆ ಬಿಜೆಪಿಯ ಅಧ್ಯಕ್ಷಗಿರಿ ಆಯ್ಕೆಯಲ್ಲಿ ಒಮ್ಮತ ಸಾಧಿಸಿಲ್ಲ. ಬಿಜೆಪಿಯವರಿಗೆ ಅಸೂಯೆ ಕಾಡುತ್ತಿದೆ. ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ ಹಾಗೂ ಮತ್ತೆ ಚುನಾವಣೆ ಎದುರಿಸಿ 2028 ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕ್ಆರಕ್ಕೆ ಬರಲಿದೆ. 2013 ರಲ್ಲಿ 2023 ರಲ್ಲಿಯೂ ಕಾಂಗ್ರೆಸ್ ಗೆ ಜನರು ಆಶೀರ್ವಾದ ಮಾಡಿದ್ದಾರೆ, ಆದರೆ ಬಿಜೆಪಿಯವರಿಗೆ ಒಮ್ಮೆಯೂ ಜನಾದೇಶ ದೊರೆತಿಲ್ಲ ಹಾಗೂ ಭವಿಷ್ಯದಲ್ಲಿಯೂ ದೊರೆಯುವುದಿಲ್ಲ. ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದೆ. “‘ನಾನು’ ಹೋದರೆ ಹೋದೇನು” ಅಂತ ಕನಕದಾಸರು ಹೇಳಿದ್ದರು. “ಇದು ನನ್ನ ಸರ್ಕಾರವಲ್ಲ, ನಮ್ಮ ಸರ್ಕಾರ”. ಈಗಲೂ ನಾನೇ ಮುಖ್ಯಮಂತ್ರಿ. ಹೈಕಮಾಂಡ್ ಹೇಳುವ ತನಕವೂ ನಾನೇ ಮುಖ್ಯಮಂತ್ರಿ ಎಂದು ತಿಳಿಸಿದರು.