ಕರ್ನಾಟಕ ಬಜೆಟ್​ ವಿದೇಶ ಮಹಿಳಾ ದಿನಾಚರಣೆ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ex-Goa MLA dies: ಬೆಳಗಾವಿಯಲ್ಲಿ ಆಟೋ ಚಾಲಕನ ಹಲ್ಲೆಯಿಂದ ಗೋವಾ ಮಾಜಿ‌ ಶಾಸಕ ಸಾವು

Lavoo Mamledar: ಬೆಳಗಾವಿಯ ಶ್ರೀನಿವಾಸ ಲಾಡ್ಜ್ ಎದುರು ಆಟೋಗೆ ಗೋವಾ ಮಾಜಿ ಶಾಸಕ ಲಾವೋ ಕಾರು ಡಿಕ್ಕಿಯಾದ ಹಿನ್ನೆಲೆಯಲ್ಲಿ ಚಾಲಕ, ಮಾಜಿ ಶಾಸಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಇದರಿಂದ ಸ್ಥಳದಲ್ಲಿಯೇ ಕುಸಿದ ಬಿದ್ದು ಮೃತಪಟ್ಟಿದ್ದಾರೆ.

ಬೆಳಗಾವಿಯಲ್ಲಿ ಆಟೋ ಚಾಲಕನ ಹಲ್ಲೆಯಿಂದ ಗೋವಾ ಮಾಜಿ‌ ಶಾಸಕ ಸಾವು

Profile Prabhakara R Feb 15, 2025 3:20 PM

ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕ ಮಾರಣಾಂತಿಕ ಹಲ್ಲೆ ಮಾಡಿದ ಪರಿಣಾಮ ಸ್ಥಳದಲ್ಲೇ ಗೋವಾದ ಮಾಜಿ ಶಾಸಕ ಲಾವೋ ಮಾಮಲೇದಾರ್ (69) (Lavoo Mamledar) ಮೃತಪಟ್ಟ ಘಟನೆ ಶನಿವಾರ ಶ್ರೀನಿವಾಸ್ ಲಾಡ್ಜ್‌ನಲ್ಲಿ ನಡೆದಿದೆ. ಬೆಳಗಾವಿ ನಗರದ ಶ್ರೀನಿವಾಸ ಲಾಡ್ಜ್ ಎದುರು ಆಟೋಗೆ ಲಾವೋ ಕಾರು ಡಿಕ್ಕಿಯಾದ ಹಿನ್ನೆಲೆಯಲ್ಲಿ ಚಾಲಕ, ಗೋವಾದ ಮಾಜಿ ಶಾಸಕ ಲಾವೋ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಇದರಿಂದ ಸ್ಥಳದಲ್ಲಿಯೇ ಕುಸಿದ ಬಿದ್ದು ಲಾವೋ (Ex-Goa MLA dies) ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೆಳಗಾವಿ ನಗರದ ಮಾರ್ಕೆಟ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಆರೋಪಿಯನ್ನು ಸುಭಾಷ್‌ ನಗರದ ನಿವಾಸಿ ಮುಜಾಹಿದಿಲ್ ಶಕೀಲ್ ಜಮಾದಾರ್ (28) ಎಂಬ ಗುರುತಿಸಲಾಗಿದೆ. ಖಡೇಬಜಾರ್ ಬಳಿ ಆಟೋಗೆ ಮಾಜಿ ಶಾಸಕರ ಕಾರು ಟಚ್ ಆದ ಬಳಿಕ ಶ್ರೀನಿವಾಸ ಲಾಡ್ಜ್ ಕಡೆಗೆ ಲಾವೋ ಮಾಮಲೇದಾರ್ ಬಂದಿದ್ದರು. ಆಗ ಲಾಡ್ಜ್ ಎದುರು ಬಂದು ಮಾಜಿ ಶಾಸಕನ ಮೇಲೆ ಚಾಲಕ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಹಲ್ಲೆಯಿಂದ ಸ್ಥಳದಲ್ಲೇ ಮೃತಪಟ್ಟ ಲಾವೋ ಮಾಮಲೇದಾರ್ ಮೃತ ದೇಹ ಬೆಳಗಾವಿ ಬೀಮ್ಸ್‌ಗೆ ರವಾನೆ ಮಾಡಲಾಗಿದೆ. ತಕ್ಷಣವೇ ಆರೋಪಿಯನ್ನು ಮಾರ್ಕೆಟ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Mujahidil Shakeel Jamadar

ಈ ಸುದ್ದಿಯನ್ನೂ ಓದಿ | Gruha Lakshmi Scheme: ಮಹಿಳೆಯರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಗೃಹ ಲಕ್ಷ್ಮೀ ಹಣ: ಲಕ್ಷ್ಮೀ ಹೆಬ್ಬಾಳ್ಕರ್‌ ಮಾಹಿತಿ



ಈ ಬಗ್ಗೆ ಶ್ರೀನಿವಾಸ ಲಾಡ್ಜ್ ಸಿಬ್ಬಂದಿಯೊಬ್ಬರು ಪ್ರತಿಕ್ರಿಯಿಸಿ, ಗೋವಾದ ಮಾಜಿ ಶಾಸಕ ಲಾವೋ ಮಾಮಲೇದಾರ್ ನಮ್ಮ ಹೋಟೆಲ್‌ಗೆ ಆಗಾಗ ಬರುತ್ತಿದ್ದರು. ಅವರು ನಮ್ಮ ರೆಗ್ಯುಲರ್ ಕಸ್ಟಮರ್‌ ಆಗಿದ್ದು, ಖಡೇಬಜಾರ್ ಬಳಿ ಆಟೋಗೆ ಅವರ ಟಚ್‌ ಆಗಿತ್ತು ಎನ್ನಲಾಗಿದೆ. ಹೀಗಾಗಿ ಆಟೋ ಚಾಲಕ ಹೋಟೆಲ್‌ ಬಳಿ ಬಂದು ಮಾಜಿ ಶಾಸಕನ ಮೇಲೆ ಹಲ್ಲೆ ನಡೆಸಿದ್ದಾನೆ. ನಾವು ಆತನನ್ನು ತಡೆಯಲು ಯತ್ನಿಸಿದೆವು, ಆದರೆ ತೀವ್ರ ಹಲ್ಲೆಯಿಂದ ಮಾಜಿ ಶಾಸಕ ಲಾವೋ ಮಾಮಲೇದಾರ್ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.



ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ, ಬಾಲ್ಯವಿವಾಹವಾಗಿದ್ದ ಆರೋಪಿಗೆ 20 ವರ್ಷ ಜೈಲು

ಕೋಲಾರ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ (POCSO Case) ಬಾಲ್ಯ ವಿವಾಹ ಮಾಡಿಕೊಂಡಿದ್ದ ಪ್ರಕರಣದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ (Jail sentence) ಹಾಗೂ 45,000 ದಂಡ ವಿಧಿಸಿ ಕೋಲಾರ (Kolara news) ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಅಪರಾಧಿ ಕಾರು ಚಾಲಕ ಗಂಗಾಧರ್‌ಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ಮಾರುತಿ ನಗರದ ನಿವಾಸಿಯಾಗಿರುವ ಗಂಗಾಧರ್ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ. ಬಳಿಕ ಮದುವೆ ಕೂಡ ಮಾಡಿಕೊಂಡಿದ್ದ. ಈ ಕುರಿತು 2023 ಮೇ 17ರಂದು ಬಾಲಕಿಯ ಪೋಷಕರು ದೂರು ನೀಡಿದ್ದರು. ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ತನಿಖೆ ಬಳಿಕ ಪೊಲೀಸರು ಕೋರ್ಟಿಗೆ ದೋಷಾರೋಪ ಪಟ್ಟಿ ಸಲ್ಲಿಸಿದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಬಿ ಪ್ರಸಾದ್ ಅವರು ಅಪರಾಧಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಗಂಗಾಧರ್‌ಗೆ 20 ವರ್ಷ ಶಿಕ್ಷೆ ಹಾಗೂ ರೂ. 45,000 ದಂಡ ವಿಧಿಸಿ ತೀರ್ಪು ನೀಡಿದ್ದು ಸಂತ್ರಸ್ತೆಗೆ 4 ಲಕ್ಷ ಪರಿಹಾರ ನೀಡುವಂತೆ ಸರ್ಕಾರಕ್ಕೆ ಕೋರ್ಟ್ ಆದೇಶ ನೀಡಿದೆ.