#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Maha Kumbh Stampede: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ; ಹಲವು ಕನ್ನಡಿಗರಿಗೆ ಗಾಯ

ಮೌನಿ ಅವಾಮಾಸ್ಯೆಯಂದು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದೆ. ಈ ವೇಳೆ ಹಲವು ಮಂದಿ ಗಾಯಗೊಂಡಿದ್ದು, ಇದರಲ್ಲಿ ಬೆಳಗಾವಿಯವರೂ ಇದ್ದಾರೆ. ಸದ್ಯ ಅವರನ್ನು ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲಿನ ಕನ್ನಡಿಗರೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ; ಹಲವು ಕನ್ನಡಿಗರಿಗೆ ಗಾಯ

ಪ್ರಯಾಗ್‌ರಾಜ್‌ನಲ್ಲಿ ಸಂಭವಿಸಿದ ಕಾಲ್ತುಳಿತ.

Profile Ramesh B Jan 29, 2025 2:05 PM

ಲಖನೌ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ (Prayagraj)ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆ (Mauni Amavasya)ಯಂದು (ಜ. 29) ದೊಡ್ಡ ದುರಂತವೊಂದು ಸಂಭವಿಸಿದ್ದು, ಕಾಲ್ತುಳಿತದಿಂದ ಹಲವು ಮಂದಿ ಗಾಯಗೊಂಡಿದ್ದಾರೆ (Maha Kumbh Stampede). ಈ ಪೈಕಿ ಕರ್ನಾಟಕದ ಕೆಲವು ಮಂದಿಯೂ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗಾಯಗೊಂಡವರಲ್ಲಿ ಬೆಳಗಾವಿಯ ದಂಪತಿಯೂ ಇದ್ದಾರೆ.

ಬೆಳಗಾವಿಯ ವಡಗಾವಿಯ ಶೆಟ್ಟಿ ಗಲ್ಲಿಯ ಅರ್ಚನಾ ಕೋರ್ಪಡೆ, ಕಾಂಚನಾ ಕೋರ್ಪಡೆ ದಂಪತಿ ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬೆಳಗಾವಿಯಿಂದ ಒಟ್ಟು 30 ಜನರು ಕುಂಭಮೇಳಕ್ಕೆ ಹೋಗಿದ್ದರು. ಜ. 29ರಂದು ಮುಂಜಾನೆ 3 ಗಂಟೆಗೆ ಕಾಲ್ತುಳಿತ ಸಂಭವಿಸಿದೆ. ʼʼರಾಜ್ಯದಿಂದ ಎಷ್ಟು ಜನರು ಪ್ರಯಾಗ್‌ರಾಜ್‌ಗೆ ತೆರಳಿದ್ದಾರೆಂದು ತಿಳಿದು ಬಂದಿಲ್ಲ. ಅಲ್ಲಿರುವ ಕನ್ನಡಿಗರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಅವರಿಗೆ ಅಗತ್ಯವಾದ ಎಲ್ಲ ನೆರವು ಒದಗಿಸುತ್ತೇವೆʼʼ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಹೇಳಿದ್ದಾರೆ.



ಸಂಗಮ್‌ ಘಾಟ್‌ ಬಳಿ ಈ ದುರಂತ ಸಂಭವಿಸಿದೆ. ಮೌನಿ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಕೋಟ್ಯಂತರ ಭಕ್ತರು ಸೇರಿದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಜತೆಗೆ ಸ್ಥಳೀಯ ಅಧಿಕಾರಿಗಳು ಗಣ್ಯರತ್ತ ಮಾತ್ರ ಗಮನ ಹರಿಸಿದ್ದರಿಂದಲೂ ಕಾಲ್ತುಳಿತ ಸಂಭವಿಸಿದೆ ಎನ್ನುವ ಆರೋಪವೂ ಕೇಳಿ ಬಂದಿದೆ.

ಈ ಸುದ್ದಿಯನ್ನೂ ಓದಿ: Kumbhamela Stampede: ಮಹಾಕುಂಭ ಮೇಳದಲ್ಲಿ ಕಾಲ್ತುಳಿತ-ಸಿಎಂ ಯೋಗಿ ಫಸ್ಟ್‌ ರಿಯಾಕ್ಷನ್‌

ʼʼಇದ್ದಕ್ಕಿಂತೆ ತಳ್ಳಾಟ ಕಂಡು ಬಂತು. ಬಳಿಕ ನಾವು ಜನರ ಗುಂಪಿನಲ್ಲಿ ಸಿಲುಕಿಕೊಂಡೆವುʼʼ ಎಂದು ಭಕ್ತರೊಬ್ಬರು ಮಾಹಿತಿ ನೀಡಿದ್ದಾರೆ. ಗಲಾಟೆಯಲ್ಲಿ ತಮ್ಮ ಮಗನಿಗೂ ಗಾಯಗಳಾಗಿದ್ದು, ಸದ್ಯ ಎಲ್ಲಿದ್ದಾನೆಂದು ತಿಳಿದು ಬಂದಿಲ್ಲ ಎಂದು ಮಹಿಳೆಯೊಬ್ಬರು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಕರೆ ಮಾಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಗಾಯಗೊಂಡವರನ್ನು ವಿವಿದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.



ಮೋದಿ ಸಂತಾಪ

ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ʼʼಪ್ರಯಾಗ್‌ರಾಜ್ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಅಪಘಾತ ಅತ್ಯಂತ ನೋವಿನ ಸಂಗತಿ. ಇದರಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಭಕ್ತರಿಗೆ ಸಂತಾಪ ಸೂಚಿಸುತ್ತಿದ್ದೇನೆ. ಇದರೊಂದಿಗೆ, ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತಿದ್ದೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುವಲ್ಲಿ ನಿರತವಾಗಿದೆ. ಈ ನಿಟ್ಟಿನಲ್ಲಿ ನಾನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ನಾನು ರಾಜ್ಯ ಸರ್ಕಾರದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆʼʼ ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.