ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಮಹಾರಾಷ್ಟ್ರದಲ್ಲಿ ಮೋದಿ ಗ್ಯಾರಂಟಿ ಏನಾಯ್ತು ಅನ್ನೋದು ಎಲ್ಲರಿಗೂ ಗೊತ್ತು: ಹೆಬ್ಬಾಳ್ಕರ್‌

Laxmi Hebbalkar: ನಮ್ಮದೇ ಯೋಜನೆ ಕಾಪಿ ಮಾಡಿ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಜಾರಿಗೊಳಿಸಿದ ಮಾಝಿ ಲಡ್ಕಿ ಬಹಿನ್ ಯೋಜನೆ ಕಥೆ ಏನಾಗಿದೆ ಎಂದು ಎಲ್ಲರಿಗೂ ಗೊತ್ತು. ಬೇರೆ ರಾಜ್ಯದ ಬಗ್ಗೆ ಮಾತಾನಾಡಬಾರದು ಎಂದು‌ ಸುಮ್ಮನಿದ್ದೆ. ನಾವು ಒಂದೇ ಒಂದು ಅಪಾದನೆ ಬರದಂತೆ ಯೋಜನೆಯನ್ನು ಜಾರಿಗೊಳಿಸುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ, ಡಿ.9: ದೇಶದಲ್ಲಿ ಮಾದರಿಯಾದ, ಮಹಿಳೆಯರ ಸಬಲೀಕರಣ ಉದ್ದೇಶ ಹೊಂದಿರುವ ಗೃಹಲಕ್ಷ್ಮಿ ಯೋಜನೆಯನ್ನು (Gruhalakshmi Scheme) ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿಗಳ ಪಾಲಾಗದಂತೆ ಜಾರಿಗೊಳಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಹೇಳಿದರು.

ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಗಸ್ಟ್ ತಿಂಗಳವರೆಗೆ 1.24 ಕೋಟಿ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ಹಣ ಜಮಾ ಮಾಡಲಾಗಿದೆ. ಮೊದಲು ಇಲಾಖೆಯಿಂದ ನೇರವಾಗಿ ಹಣ ಹಾಕಲಾಗುತ್ತಿತ್ತು. ನಂತರದಲ್ಲಿ ತಾಲೂಕು ಪಂಚಾಯತ್ ಮೂಲಕ ಹಣ ಹಾಕಲಾಗುತ್ತಿದೆ‌. ಹಾಗಾಗಿ ಮಧ್ಯದಲ್ಲಿ ಸ್ವಲ್ಪ ಮಟ್ಟಿಗೆ ವಿಳಂಬವಾಗಿದ್ದು ನಿಜ, ಆದರೆ ಒಂದೇ ಒಂದು ರೂಪಾಯಿ ಆಚೆ ಈಚೆ ಆಗದಂತೆ ಮಹಿಳೆಯರಿಗೆ ತಲುಪಿಸಲಾಗುತ್ತಿದೆ. ಸ್ಪಷ್ಟತೆ ಮತ್ತು ಬದ್ಧತೆಯಿಂದ ಯೋಜನೆ ಮುಂದುವರಿಸಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

ಆರಂಭದಲ್ಲಿ ಯೋಜನೆಯನ್ನು ನಿಲ್ಲಿಸಲು ಹೇಳಿದವರು ನೀವು, ಯೋಜನೆ ಕುರಿತು ಹಾದಿ ಬೀದಿಯಲ್ಲಿ ಟೀಕೆ ಮಾಡುತ್ತಿದ್ದ ಬಿಜೆಪಿಯವರಿಗೆ ಈಗ ಏಕಾಏಕಿ ಕಾಳಜಿ, ಪ್ರೀತಿ ಬಂತಾ ಎಂದು ಪ್ರಶ್ನಿಸಿದ ಸಚಿವರು, ನಮ್ಮದೇ ಯೋಜನೆ ಕಾಪಿ ಮಾಡಿ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಜಾರಿಗೊಳಿಸಿದ ಮಾಝಿ ಲಡ್ಕಿ ಬಹಿನ್ ಯೋಜನೆ ಕಥೆ ಏನಾಗಿದೆ ಎಂದು ಎಲ್ಲರಿಗೂ ಗೊತ್ತು. ಬೇರೆ ರಾಜ್ಯದ ಬಗ್ಗೆ ಮಾತಾನಾಡಬಾರದು ಎಂದು‌ ಸುಮ್ಮನಿದ್ದೆ. ನಾವು ಒಂದೇ ಒಂದು ಆಪಾದನೆ ಬರದಂತೆ ಯೋಜನೆಯನ್ನು ಜಾರಿಗೊಳಿಸುತ್ತಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ನನ್ನ ಹಾಗೂ ಸಿಎಂ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಡಿ.ಕೆ. ಶಿವಕುಮಾರ್

ಬಿಜೆಪಿಗರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ: ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ‌.‌ ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು ಬೇಡ ಅಂದೋರು? ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಟೀಕಾಪ್ರಹಾರ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಗರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ರೈತರ ಬಗ್ಗೆ ಬಿಜೆಪಿಯವರಿಗೆ ಕರುಣೆ ಬಂದ ಹಾಗೆ ಇದೆ. ರೈತರ ಪರವಾಗಿ ಬಿಜೆಪಿಯವರು ಏನು‌ ಮಾಡಿದ್ದಾರೆ ಅಂತ ಒಂದು ಪಟ್ಟಿ ಬಿಡುಗಡೆ ಮಾಡಲಿ.‌ ಅವರಿಗೆ ನಾಚಿಕೆ ಆಗಬೇಕು ಎಂದು ಕಿಡಿಕಾರಿದರು.

ರೈತರ ಮೇಲೆ ಗೋಲಿಬಾರ್ ಮಾಡಿಸಿದವರು, ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಚಳಿ, ಮಳೆಯಲ್ಲಿ ನೂರಾರು ಜನ ರೈತರು ಸತ್ತರು. ರೈತರ ಮೇಲೆ ಗಾಡಿ ಹತ್ತಿಸಿದವರು ಯಾರು? ಈಗ ರೈತರ ಬಗ್ಗೆ ಮಾತನಾಡಲು ಬರುತ್ತಾರೆ, ಅವರಿಗೆ ನಾಚಿಕೆಯಾಗಬೇಕು ಎಂದ ಅವರು, ಕಾಂಗ್ರೆಸ್ ಪಕ್ಷವಾಗಲಿ, ನಾನಾಗಲಿ, ಎಲ್ಲರೂ ರೈತರ ಪರ ಇದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.‌

ಮಹಿಳೆಯರು ಮುಖ್ಯವಾಹಿನಿಗೆ ಬರಬೇಕೆಂಬುದೇ ನಮ್ಮ ಸರ್ಕಾರದ ಉದ್ದೇಶ: ಹೆಬ್ಬಾಳ್ಕರ್‌

ನಮ್ಮದು ಜಾತ್ಯತೀತ ಸರ್ಕಾರ

ನಮ್ಮದು ಜಾತ್ಯತೀತ ಸರ್ಕಾರ, ಬಸವಣ್ಣ, ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಬಾಬಾ ಸಾಹೇಬ್‌ ಅಂಬೇಡ್ಕರ್, ಮಹಾತ್ಮ ಗಾಂಧೀಜಿ ಸೇರಿ ಅನೇಕ ಮಹನೀಯರ ಜಯಂತಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಟಿಪ್ಪು ಜಯಂತಿಯನ್ನು ಯಾಕೆ ವಿವಾದ ಮಾಡಲಾಗುತ್ತಿದೆ ಎಂದು‌ ತಿಳಿಯುತ್ತಿಲ್ಲ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕೆನ್ನುವುದು ನಮ್ಮ ನಿಲುವು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.‌