ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Belagavi Rains: ಬೈಲಹೊಂಗಲದಲ್ಲಿ ಮಳೆ ಆರ್ಭಟ; ನೀರಿನಲ್ಲಿ ಕೊಚ್ಚಿಹೋದ ಬೈಕ್‌ಗಳು, ಜನಜೀವನ ಅಸ್ತವ್ಯಸ್ತ!

Bailhongal News: ಬೈಲಹೊಂಗಲ ಪಟ್ಟಣದಲ್ಲಿ ಸುರಿದ ಧಾರಾಕಾರ ಮಳೆಯಿಂದ ರಸ್ತೆಗಳು ನದಿಗಳಂತಾಗಿ ಹರಿದರೆ, ತಗ್ಗು ಪ್ರದೇಶಗಳು ಜಲಾವೃತಗೊಂಡು ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದರು. ಮಳೆಯ ರಭಸಕ್ಕೆ ನಗರದ ಅನೇಕ ಬಡಾವಣೆಗಳು ಮತ್ತು ಪ್ರಮುಖ ರಸ್ತೆಗಳು ನೀರಿನಿಂದ ಆವೃತಗೊಂಡಿವು.

ಬೈಲಹೊಂಗಲದಲ್ಲಿ ಮಳೆ ಆರ್ಭಟ; ನೀರಿನಲ್ಲಿ ಕೊಚ್ಚಿಹೋದ ಬೈಕ್‌ಗಳು

ಬೈಲಹೊಂಗಲ ಪಟ್ಟಣದಲ್ಲಿ ಮಳೆ ನೀರಿನಲ್ಲಿ ಕೊಚ್ಚಿಹೋದ ಬೈಕ್‌ಗಳು. -

Prabhakara R
Prabhakara R Jun 8, 2026 10:33 PM

ಬೆಳಗಾವಿ: ಬೈಲಹೊಂಗಲ ಪಟ್ಟಣದಲ್ಲಿ (Bailhongal) ಸುರಿದ ಧಾರಾಕಾರ ಮಳೆಯಿಂದ (Belagavi Rains) ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ನಿರಂತರ ಮಳೆಯಿಂದ ನಿಲ್ಲಿಸಿದ್ದ ಬೈಕ್‌ಗಳು ಹರಿದು ಹೋಗಿದ್ದು ವಾಹನ ಸವಾರರು ಪರದಾಡಿದ ಪರಿಸ್ಥಿತಿ ನಿರ್ಮಾಣವಾಯಿತು. ನಗರದಲ್ಲಿ ಸೋಮವಾರ ಮಧ್ಯಾಹ್ನ ಏಕಾಏಕಿ ಸುರಿದ ಭಾರೀ ಮಳೆಯು ಜನಜೀವನವನ್ನು ಸಂಪೂರ್ಣ ಅಸ್ತವ್ಯಸ್ತಗೊಳಿಸಿತು.

Belagavi Rain (4)

ಕೆಲವೇ ನಿಮಿಷಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ರಸ್ತೆಗಳು ನದಿಗಳಂತಾಗಿ ಹರಿದರೆ, ತಗ್ಗು ಪ್ರದೇಶಗಳು ಜಲಾವೃತಗೊಂಡು ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದರು. ಮಳೆಯ ರಭಸಕ್ಕೆ ನಗರದ ಅನೇಕ ಬಡಾವಣೆಗಳು ಮತ್ತು ಪ್ರಮುಖ ರಸ್ತೆಗಳು ನೀರಿನಿಂದ ಆವೃತಗೊಂಡವು. ಹರಳಯ್ಯ ಕಾಲೋನಿಯಲ್ಲಿನ ಹಲವು ಮನೆಗಳಿಗೆ ಮಳೆ ನೀರು ನುಗ್ಗಿ ನಿವಾಸಿಗಳು ತೀವ್ರ ತೊಂದರೆ ಅನುಭವಿಸಿದರು.

Belagavi Rain (5)

ಮನೆಯೊಳಗೆ ನುಗ್ಗಿದ ನೀರನ್ನು ಪಾತ್ರೆಗಳು ಹಾಗೂ ಬಕೆಟ್‌ಗಳ ಮೂಲಕ ಹೊರ ಹಾಕಲು ಮಹಿಳೆಯರು ಮತ್ತು ಕುಟುಂಬಸ್ಥರು ಹರಸಾಹಸ ಪಟ್ಟ ದೃಶ್ಯಗಳು ಕಂಡುಬಂದವು.

Belagavi Rain (6)

ಬಸ್ ನಿಲ್ದಾಣದ ಬಳಿ ಭಾರಿ ಪ್ರಮಾಣದಲ್ಲಿ ನೀರಿನ ಹರಿವು

ಮಳೆ ನೀರು ಭಾರಿ ಪ್ರಮಾಣದಲ್ಲಿ ಹರಿದಿದ್ದರಿಂದ ರಸ್ತೆಬದಿ ನಿಲ್ಲಿಸಿದ್ದ ಕೆಲ ಬೈಕ್‌ಗಳು ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ತಟವಟಿ ಹೀರೋ ಶೋ ರೂಂ ಆವರಣವೂ ಸಂಪೂರ್ಣ ನೀರಿನಿಂದ ಆವೃತಗೊಂಡು ಆಸ್ತಿಪಾಸ್ತಿಗೆ ತುಸು ಹಾನಿಯಾಗಿದೆ.