ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Belagavi News: ಜೊಲ್ಲೆ ದಂಪತಿಗಳ ಸನ್ಮಾನ ಹಾಗೂ ಸತ್ಕಾರ ಸಮಾರಂಭ

ನಿಪ್ಪಾಣಿಯ ಜನಪ್ರಿಯ ಶಾಸಕಿ ಮತ್ತು ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಅವರ ಜನ್ಮದಿನ ಮತ್ತು ಬೆಳಗಾವಿ ಜಿಲ್ಲಾ ಕೇಂದ್ರ ಬ್ಯಾಂಕಿನ ನೂತನ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಎಲ್ಲಾ ನಿರ್ದೇಶಕರ ಮಂಡಳಿಯ ಸನ್ಮಾನ ಸಮಾರಂಭವು ಗುರುವಾರ, ದಿ 20 ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಕಾರ್ಯ ಸ್ಥಳದಲ್ಲಿ ನಡೆಯಲಿದೆ

ಜೊಲ್ಲೆ ದಂಪತಿಗಳ ಸನ್ಮಾನ ಹಾಗೂ ಸತ್ಕಾರ ಸಮಾರಂಭ

-

Ashok Nayak
Ashok Nayak Nov 18, 2025 10:31 PM

ಬೆಳಗಾವಿ: ನಿಪ್ಪಾಣಿಯ ಜನಪ್ರಿಯ ಶಾಸಕಿ ಮತ್ತು ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಅವರ ಜನ್ಮದಿನ ಮತ್ತು ಬೆಳಗಾವಿ ಜಿಲ್ಲಾ ಕೇಂದ್ರ ಬ್ಯಾಂಕಿನ ನೂತನ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಎಲ್ಲಾ ನಿರ್ದೇಶಕರ ಮಂಡಳಿಯ ಸನ್ಮಾನ ಸಮಾರಂಭವು ಗುರುವಾರ ದಿ.20 ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಕಾರ್ಯ ಸ್ಥಳದಲ್ಲಿ ನಡೆಯಲಿದೆ ಎಂದು ಕಾರ್ಖಾನೆ ಅಧ್ಯಕ್ಷ ಎಂ.ಪಿ.ಪಾಟೀಲ್ ಮತ್ತು ನಿರ್ದೇಶಕರ ಮಂಡಳಿ ತಿಳಿಸಿದ್ದಾರೆ.

ಕಾರ್ಖಾನೆ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಎಂ.ಪಿ. ಪಾಟೀಲ, ಶಾಸಕಿ ಶಶಿಕಲಾ ಜೊಲ್ಲೆ ಅವರ ಹುಟ್ಟುಹಬ್ಬ 20 ರಂದು ನಡೆಯಲಿದೆ.

ಈ ಸಂದರ್ಭದಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ಅಧ್ಯಕ್ಷತೆಯಲ್ಲಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಗೆ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಮಾಜಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಉಪಾಧ್ಯಕ್ಷ ಶಾಸಕ ರಾಜು ಕಾಗೆ ಮತ್ತು ನಿರ್ದೇ ಶಕರ ಮಂಡಳಿಯನ್ನು ಹಾಲ ಸಿದ್ಧನಾಥ ಕಾರ್ಖಾನೆ ಆಡಳಿತ ಮಂಡಳಿ ಪರವಾಗಿ ಸನ್ಮಾನಿ ಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಇವರ ಪ್ರಮುಖ ಉಪಸ್ಥಿತಿಯಲ್ಲಿ, ರಾಜ್ಯ ಹಾಲು ಸಂಘದ ಅಧ್ಯಕ್ಷ ಶಾಸಕ ಬಾಲಚಂದ್ರ ಜಾರಕಿ ಹೊಳಿ, ಸಂಸದ ಧನಂಜಯ ಮಹಾಡಿಕ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಮುಂತಾದವರು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ ಎಂದು ತಿಳಿಸಿದರು.

ಇದನ್ನೂ ಓದಿ: Belagavi Farmers Protest: ಕಬ್ಬು ಬೆಳೆಗಾರರ ಪ್ರತಿಭಟನೆ; ನಾಳೆ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರ ಜತೆ ಸಿಎಂ ಸಭೆ

ಹಾಲಸಿದ್ಧನಾಥ ಅಧ್ಯಕ್ಷ ಎಂ.ಪಿ.ಪಾಟೀಲ, ಹಿರಾ ಶುಗರ್ ಅಧ್ಯಕ್ಷ ಬಸವರಾಜ ಕಲ್ಲಟ್ಟಿ, ಉಪಾಧ್ಯಕ್ಷ ಅಶೋಕ ಪಟ್ಟಣಶೆಟ್ಟಿ, ಸಂಗಮ ಕಾರ್ಖಾನೆ ಅಧ್ಯಕ್ಷ ರಾಜೇಂದ್ರ ಪಾಟೀಲ, ಉಪಾಧ್ಯಕ್ಷ ಬಸಗೊಂಡ ಪಾಟೀಲ, ಬೀರೇಶ್ವರ ಕ್ರೆಡಿಟ್ ಸೌಹಾರ್ದ ಅಧ್ಯಕ್ಷ ಅಪ್ಪಾಸಾಹೇಬ ಜೊಲ್ಲೆ, ಉಪಾಧ್ಯಕ್ಷ ಆನಂದ ಪಾಟೀಲ ಮೊದಲಾದವರು ಕಾರ್ಯಕ್ರಮಕ್ಕೆ ಸ್ವಾಗತ ಅತಿಥಿಗಳಾಗಿ ಉಪಸ್ಥಿತರಿರುವರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಉಪನಗರಾಧ್ಯಕ್ಷ ಸುನಿಲ ಪಾಟೀಲ್, ಶಾಸಕಿ ಶಶಿಕಲಾ ಜೊಲ್ಲೆ ಅವರ ಜನ್ಮದಿನಾಚರಣೆ ಮತ್ತು ಗಣ್ಯರ ಸನ್ಮಾನ ಕಾರ್ಯಕ್ರಮವನ್ನು ಕಾರ್ಖಾನೆ ನಿರ್ದೇಶಕರ ಮಂಡಳಿ ಆಯೋಜಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ 6 ಸಾವಿರ ಕ್ಕಿಂತಲೂ ಹೆಚ್ಚಿನ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

anna saheb jolle

ಶಾಸಕಿ ಶಶಿಕಲಾ ಜೊಲ್ಲೆ ಅವರ ಹುಟ್ಟುಹಬ್ಬ ದೊಡ್ಡ ಪ್ರಮಾಣದಲ್ಲಿ ನಡೆಯಲಿದ್ದು ಮತ್ತು ಇದರ ಪ್ರಯುಕ್ತ ಬೋರಗಾವನಲ್ಲಿ ರಕ್ತದಾನ ಮತ್ತು ಅಂಗವಿಕಲರಿಗೆ ಧಾನ್ಯ ವಿತರಣೆ, ಯಮಗರ್ಣಿಯಲ್ಲಿ ಆರೋಗ್ಯ ತಪಾಸಣೆ ಶಿಬಿರ ಮತ್ತು ನಿಪ್ಪಾಣಿ ಮಹಾದೇವ ಗಲ್ಲಿಯಲ್ಲಿ ಅಂಗವಿಕಲರಿಗೆ ಧಾನ್ಯ ವಿತರಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾರ್ಖಾನೆಯ ಉಪಾಧ್ಯಕ್ಷ ಪವನ ಪಾಟೀಲ, ಸಂಚಾಲಕರಾದ ಜಯವಂತ ಭಾಟಲೆ, ಪ್ರಕಾಶ ಶಿಂದೆ, ಮಹಾಲಿಂಗ ಕೋಠಿವಾಲೆ, ಅವಿನಾಶ ಪಾಟೀಲ, ರಾವಸಾಹೇಬ ಫರಾಳೆ, ವಿನಾಯಕ ಪಾಟೀಲ, ಶ್ರೀಕಾಂತ ಬನ್ನೆ, ಸುಹಾಸ ಗುಗೆ, ಆರ್.ಜಿ. ಚೌಗುಲೆ, ಆನಂದ ಯಾದವ, ಭರತ್ ನಸಲಾಪುರೆ, ರಾವಸಾಹೇಬ ಫರಾಳೆ, ರಮೇಶ ಪಾಟೀಲ, ಕಿರಣ ನಿಕಾಡೆ, ವ್ಯವಸ್ಥಾಪಕ ಅಪ್ಪಾಸಾಹೇಬ ಶಿರಗಾವೇ ಉಪಸ್ಥಿತರಿದ್ದರು. ಕಛೇರಿ ಅಧೀಕ್ಷಕ ಗಜಾನನ ರಾಮಣಕಟ್ಟಿ ಸ್ವಾಗತಿಸಿದರು.