ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Belagavi News: ಜನ್ಮದಿನದಂದೇ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಜನ್ಮದಿನದಂದೇ ವಸತಿ ನಿಲಯದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿಯ ಅಜಂ ನಗರದಲ್ಲಿರುವ ಪರಿಶಿಷ್ಟ ಪಂಗಡಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಸೋಮವಾರ ‌ನಡೆದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಎಪಿಎಂಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತ ವಿದ್ಯಾರ್ಥಿನಿ ಕಾವೇರಿ ಉಮೇಶ ನಾಯಕ.

ಬೆಳಗಾವಿ, ಮೇ 11: ಜನ್ಮದಿನದಂದೇ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿಯ ಅಜಂ ನಗರದಲ್ಲಿರುವ ಪರಿಶಿಷ್ಟ ಪಂಗಡಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಸೋಮವಾರ ‌ನಡೆದಿದೆ. ಹುಕ್ಕೇರಿ ತಾಲೂಕಿನ (Belagavi News) ಕಟಾಬಳ್ಳಿ ಗ್ರಾಮದ ಕಾವೇರಿ ಉಮೇಶ ನಾಯಕ (21) ಬಿಎಸ್‌ಸಿ ಅಂತಿಮ‌ ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.‌ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಕಳೆದ ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಪೇದೆಯೊಂದಿಗೆ ಮದುವೆ ನಿಶ್ಚಯವಾಗಿತ್ತು.‌ ಇತ್ತ ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.‌

ಘಟನೆ ಸಂಭವಿಸಿದ ವಿಷಯ ತಿಳಿಯುತ್ತಿದ್ದಂತೆಯೇ ಎಪಿಎಂಸಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಎಪಿಎಂಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಬೆಂಗಳೂರಿನಲ್ಲಿ ಘೋರ ಘಟನೆ; ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು

ಬೆಂಗಳೂರು: ನಗರದ ಹೊರವಲಯದ ಕೊತ್ತನೂರು ಬಳಿಯ ನಾರಾಯಣಪುರದಲ್ಲಿ ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಮಕ್ಕಳು ದಾರುಣವಾಗಿ ಮೃತಪಟ್ಟಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಅರ್ಜುನ್ (5), ಆಶಾ (3) ಮೃತ ಮಕ್ಕಳು. ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತೆಲಂಗಾಣದಲ್ಲಿ ಭೀಕರ ಅಪಘಾತ: 140 ಕಿ.ಮೀ. ವೇಗದಲ್ಲಿ ಬಂದ ಹಯಾಬುಸಾ ಬೈಕ್ ಕಾರಿಗೆ ಡಿಕ್ಕಿ, ಐವರ ಸಾವು

ಮಕ್ಕಳು ಮೂಲತಃ ರಾಯಚೂರು ಮೂಲದವರು. ಇವರ ತಂದೆ-ತಾಯಿ ಕೂಲಿ ಕೆಲಸಕ್ಕೆ ಬೆಂಗಳೂರಿಗೆ ಬಂದಿದ್ದರು. ಅಜ್ಜಿ ಶೆಡ್‌ನಿಂದ ಹೊರಗಡೆ ಹೋಗಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಮಕ್ಕಳು ಶೆಡ್‌ನಲ್ಲೇ ಸಿಲುಕಿಕೊಂಡು ಸಾವನ್ನಪ್ಪಿದ್ದಾರೆ. ಒಂದು ಮಗು ಸ್ಥಳದಲ್ಲೇ ಸಾವು ಕಂಡರೆ, ಇನ್ನೊಂದು ಮಗು ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗದಲ್ಲಿ ಕೊನೆಯುಸಿರೆಳೆದಿದೆ.