ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Mudalgi News: ನಮ್ಮ ಪರಿಸರ ರಕ್ಷಿಸುವ, ಸಂರಕ್ಷಿಸುವ ಕರ್ತವ್ಯ ಪ್ರತಿಯೊಬ್ಬರದ್ದು

ನಾವು ವಾಸಿಸುತ್ತಿರುವ ಸುತ್ತಮುತ್ತಲಿನ ವಾತಾವರಣವೇ ನಮಗೆ ಮುಖ್ಯವಾಗಿದ್ದು. ಇದು ಮಾನವನ ಸಾಮಾಜಿಕ, ಮಾನಸಿಕ, ದೈಹಿಕ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಸ್ವಚ್ಛ ವಾಗಿರಿಸಿಕೊಳ್ಳುವುದು ನಮ್ಮೆಲ್ಲರ ಹೊಣೆ ಎಂದು ಗೋಕಾಕ ಅರಣ್ಯ ವಲಯ ಅಧಿಕಾರಿ ಆನಂದ ಹೆಗಡೆ ಹೇಳಿದರು.

ಮೂಡಲಗಿ: ನಾವು ವಾಸಿಸುತ್ತಿರುವ ಸುತ್ತ ಮುತ್ತಲಿನ ವಾತಾವರಣವೇ ನಮ್ಮಗೆ ಮುಖ್ಯ ವಾಗಿದ್ದು. ಇದು ಮಾನವನ ಸಾಮಾಜಿಕ, ಮಾನಸಿಕ, ದೈಹಿಕ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಸ್ವಚ್ಛ ವಾಗಿರಿಸಿಕೊಳ್ಳುವುದು ನಮ್ಮೆಲ್ಲರ ಹೊಣೆ ಎಂದು ಗೋಕಾಕ ಅರಣ್ಯ ವಲಯ ಅಧಿಕಾರಿ ಆನಂದ ಹೆಗಡೆ ಹೇಳಿದರು.

ಗುರುವಾರದಂದು ಪಟ್ಟಣದ ಕೆ ಎಚ್ ಸೋನವಾಲ್ಕರ ಸರ್ಕಾರಿ ಪ್ರೌಢ ಶಾಲೆಯ ಆವರಣ ದಲ್ಲಿ ಜರುಗಿದ, ನಿಸರ್ಗ ಫೌಂಡೇಶನ್, ಯುವ ಜೀವನ ಸೇವಾ ಸಂಸ್ಥೆ ಹಾಗೂ ಗೋಕಾಕ ಅರಣ್ಯ ಇಲಾಖೆಯ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಹಾಗೂ 228ನೇ ಸಂಗೊಳ್ಳಿ ರಾಯಣ್ಣನವರ ಜನ್ಮದಿನದ ಪ್ರಯುಕ್ತ ಬೃಹತ್ ವನಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ನಮ್ಮ ಈ ಜಗತ್ತಿನಲ್ಲಿ ಆಧುನಿಕತೆ, ನಗರೀಕರಣ, ಕೈಗಾರೀಕರಣ, ವಿಜ್ಞಾನ, ತಂತ್ರಜ್ಞಾನದ ಅಭಿವೃದ್ಧಿ ಎಂಬ ಹತ್ತು ಹಲವು ಕಾರಣಗಳಿಗೆ ಶರಣಾಗಿ ಅನೇಕ ರೀತಿಯಲ್ಲಿ ಇಂದು ಪರಿಸರಕ್ಕೆ ಅರಿತೋ ಅರಿಯದೆಯೋ ತೀವ್ರ ಹಾನಿ ಯನ್ನುಂಟು ಮಾಡುತ್ತಿದ್ದೇವೆ. ನಮ್ಮ ಪರಿಸರ ರಕ್ಷಿಸುವ, ಸಂರಕ್ಷಿಸುವ ಕರ್ತವ್ಯ ಪ್ರತಿ ಯೊಬ್ಬರದ್ದು ಎಂದು ಹೇಳಿದರು.

ಇದನ್ನೂ ಓದಿ; Belagavi News: ಬೆಳಗಾವಿಯಲ್ಲಿ ಅಪರೂಪದ ಘಟನೆ; ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ!

ಕರ್ನಾಟಕ ಸರ್ಕಾರದ ಕರ್ನಾಟಕ ಅರಣ್ಯ ಇಲಾಖೆಯಿಂದ 2015ರಲ್ಲಿ ಆರಂಭವಾದ 'ಚಿಣ್ಣರ ವನ ದರ್ಶನ' ಯೋಜನೆಯು ಪ್ರೌಢಶಾಲಾ (9ನೇ ತರಗತಿ) ವಿದ್ಯಾರ್ಥಿಗಳಲ್ಲಿ ಕಾಡು ಮತ್ತು ವನ್ಯಜೀವಿಗಳ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವ ವಿನೂತನ ಶೈಕ್ಷಣಿಕ ಕಾರ್ಯಕ್ರಮವಾಗಿದೆ. ಮಕ್ಕಳು ನೇರವಾಗಿ ಪ್ರಕೃತಿಯನ್ನು ಅನುಭವಿಸುವ ಮೂಲಕ ಪರಿಸರ ಪ್ರೇಮಿಗಳಾಗಿ ಬೆಳೆಯಲು ಇದು ನೆರವಾಗುತ್ತದೆ ಆದರಿಂದ ನಿಸರ್ಗ ಫೌಂಡೇಶನ್ ಅವರು ಈ ಕುರಿತು ಮನವಿ ಮಾಡಿದ್ದು, ಮೂಡಲಗಿ ತಾಲೂಕಿನ ವಿದ್ಯಾರ್ಥಿಗಳಿಗೂ ಈ ಬಾರಿ ಅವಕಾಶ ನೀಡುವುದಾಗಿಯೂ ಭರವಸೆ ನೀಡಿದರು.

ಇದೇ ವೇಳೆ ಪರಿಸರ ಸಂರಕ್ಷಣೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗ್ರೇಡ್ -2 ತಹಶೀಲ್ದಾರ ಶಿವಾನಂದ ಬಬಲಿ ಅವರಿಗೆ ನಿಸರ್ಗ ಫೌಂಡೇಶನ್ ದಿಂದ ಮೂಡಲಗಿ ತಾಲೂಕ ಪರಿಸರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಉಪನೋಂದಣಾಧಿಕಾರಿ ಡಿ ಕೆ ಕುಳ್ಳೂರ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಭಾರತಿ ಕೋಣಿ, ಪಶು ವೈದ್ಯಾಧಿಕಾರಿ ಪ್ರಶಾಂತ ಕುರುಬೇಟ್ಟ, ಕರುನಾಡು ಸೈನಿಕ ತರಬೇತಿ ಕೇಂದ್ರದ ಮುಖ್ಯಸ್ಥೆ ಸವಿತಾ ತುಕ್ಕನ್ನವರ, ಶಿಕ್ಷಕ ಬಸವರಾಜ ಟಿ, ಕರ್ನಾಟಕ ಪ್ರದೇಶ ಕುರುಬರ ಸಂಘದ ತಾಲೂಕಾಧ್ಯಕ್ಷ ಎಸ್ ಎಸ್ ಪಾಟೀಲ, ನಿಸರ್ಗ ಫೌಂಡೇಶನ್ ಅಧ್ಯಕ್ಷ ಈರಪ್ಪ ಢವಳೇಶ್ವರ, ಉಪಾಧ್ಯಕ್ಷ ಮಲ್ಲು ಬೋಳನವರ, ಯುವ ಜೀವನ ಸಂಸ್ಥೆಯ ಉಪಾಧ್ಯಕ್ಷ ಗುರುನಾಥ ಗಂಗನ್ನವರ, ಸದಸ್ಯರಾದ ಸುಭಾಷ ಮನ್ನಿಕೇರಿ, ರಮೇಶ ಉಪ್ಪಾರ, ಸುಭಾಷ ಗೋಡ್ಯಾಗೋಳ, ಸುನೀಲ ಗಸ್ತಿ, ಅರಣ್ಯ ಇಲಾಖೆಯ ಸಿಬ್ಬಂದಿ ಮಹಾಂತೇಶ ಹಿಪ್ಪರಗಿ ಹಾಗೂ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಅರಣ್ಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.