ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

Raju Kage: ಕಾಗವಾಡ ಶಾಸಕ ರಾಜು ಕಾಗೆ ಪುತ್ರಿ ನಿಧನ

ಬೆಳಗಾವಿ ಜಿಲ್ಲೆಯ ಕಾಗವಾಡ ಶಾಸಕ ರಾಜು ಕಾಗೆ ಅವರ ಹಿರಿಯ ಪುತ್ರಿ ಕೃತಿಕಾ ಅನಾರೋಗ್ಯ ಹಿನ್ನೆಲೆಯಲ್ಲಿ ಶನಿವಾರ (ಮಾ. 1) ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ನೇರ್ಲಿ ಗ್ರಾಮದ ಡಾ. ಅನಿಲ ಪಾಟೀಲ ಅವರನ್ನು ವರಿಸಿದ್ದ ರಾಜು ಕಾಗೆ ಅವರ ಪುತ್ರಿ ಕೃತಿಕಾ ರಾಜು ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

ಕಾಗವಾಡ ಶಾಸಕ ರಾಜು ಕಾಗೆ ಪುತ್ರಿ ನಿಧನ

ಕೃತಿಕಾ ರಾಜು.

Profile Ramesh B Mar 1, 2025 7:54 PM

ಚಿಕ್ಕೋಡಿ: ಕಾಗವಾಡ ಶಾಸಕ ರಾಜು ಕಾಗೆ (Raju Kage) ಅವರ ಹಿರಿಯ ಪುತ್ರಿ ಕೃತಿಕಾ ಅನಾರೋಗ್ಯ ಹಿನ್ನೆಲೆಯಲ್ಲಿ ಶನಿವಾರ (ಮಾ. 1) ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ನೇರ್ಲಿ ಗ್ರಾಮದ ಡಾ. ಅನಿಲ ಪಾಟೀಲ ಅವರನ್ನು ವರಿಸಿದ್ದ ರಾಜು ಕಾಗೆ ಅವರ ಪುತ್ರಿ ಕೃತಿಕಾ ರಾಜು ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು (Belgavi News). ಆದರೆ ಚಿಕಿತ್ಸೆ ಪಲಕಾರಿಯಾಗದೆ ಶನಿವಾರ ಇಹಲೋಕ ತ್ಯಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಭಾನುವಾರ ಬೆಳಗ್ಗೆ 10 ಗಂಟೆಗೆ ಕಾಗವಾಡ ಶಾಸಕ ರಾಜು ಕಾಗೆ ಅವರ ಸ್ವಗ್ರಾಮದಲ್ಲಿ‌ ಅಂತ್ಯಕ್ರಿಯೆ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನೂ ಓದಿ: Madhu Bangarappa: ಕರ್ನಾಟಕ ಬಂದ್‌ಗಾಗಿ 7, 8, 9ನೇ ತರಗತಿ ಪರೀಕ್ಷೆಗಳನ್ನು ಮುಂದೂಡುವುದಿಲ್ಲ: ಮಧು ಬಂಗಾರಪ್ಪ

ಹಿರಿಯ ರಂಗ ಕಲಾವಿದೆ ವಿಮಲಾ ರಂಗಾಚಾರ್ ಇನ್ನಿಲ್ಲ

ಬೆಂಗಳೂರು: ನಗರದ ಹಿರಿಯ ರಂಗ ಕಲಾವಿದೆ, ಸಂಘಟಕಿ, ಲಲಿತಕಲೆಗಳ ಪೋಷಕರಾಗಿದ್ದ ವಿಮಲಾ ರಂಗಾಚಾರ್ (97) (Vimala Rangachar) ಅವರು ಮಂಗಳವಾರ (ಫೆ. 25) ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇವರು ಬೆಂಗಳೂರಿನ ಎಂಇಎಸ್ ಸಂಸ್ಥೆಯ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿದ್ದರು. ಬೆಂಗಳೂರಿನ ಸೇವಾ ಸದನ ಕಟ್ಟಿ ಬೆಳೆಸಿದ ಇವರು, ಕಮಲಾದೇವಿ ಚಟ್ಟೋಪಾಧ್ಯಾಯ ಅವರು ಕಟ್ಟಿದ ಭಾರತೀಯ ನಾಟ್ಯ ಸಂಘದ ಕರ್ನಾಟಕ ಘಟಕದ ಅಧ್ಯಕ್ಷರಾಗಿದ್ದರು. ಅಲ್ಲದೇ ಬೆಂಗಳೂರಿನ ಎಡಿಎ ರಂಗಮಂದಿರದ ಗೌರವ ಕಾರ್ಯದರ್ಶಿಯಾಗಿಯೂ ದುಡಿದಿದ್ದರು.

ʼʼವಿಮಲಾ ರಂಗಾಚಾರ್ ಅವರು ಭಾರತೀಯ ನಾಟ್ಯ ಸಂಘದ ಕರ್ನಾಟಕ ಘಟಕದ ಅಧ್ಯಕ್ಷರಾಗಿದ್ದರು, ಬೆಂಗಳೂರಿನ ಎಡಿಎ ರಂಗಮಂದಿರದ ಗೌರವ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿರುವ ಅವರು ಸ್ವತಹ ಕಲಾವಿದರಾಗಿ ಹೆಸರು ಮಾಡಿದ್ದರುʼʼ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತಮ್ಮ ಶೋಕ ಸಂದೇಶದಲ್ಲಿ ಸ್ಮರಿಸಿದ್ದರು.