ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Laxmi Hebbalkar: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಆರೋಗ್ಯ ವಿಚಾರಿಸಿದ ವೀರೇಂದ್ರ ಹೆಗ್ಗಡೆಯವರ ಸಹೋದರ

Laxmi Hebbalkar: ವೀರೇಂದ್ರ ಹೆಗ್ಗಡೆ ಅವರು ಕಳುಹಿಸಿರುವ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಪ್ರಸಾದವನ್ನು ಸಚಿವೆ ಹೆಬ್ಬಾಳ್ಕರ್‌ಗೆ ಸುರೇಂದ್ರ ಹೆಗ್ಗಡೆ ಅವರು ನೀಡಿ, ಆರೋಗ್ಯ ವಿಚಾರಿಸಿದ್ದಾರೆ.

Laxmi Hebbalkar: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಆರೋಗ್ಯ ವಿಚಾರಿಸಿದ ವೀರೇಂದ್ರ ಹೆಗ್ಗಡೆ ಸಹೋದರ

Profile Prabhakara R Jan 19, 2025 9:55 PM

ಬೆಳಗಾವಿ: ಕಾರು ಅಪಘಾತದಲ್ಲಿ ಗಾಯಗೊಂಡು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಸುರೇಂದ್ರ ಹೆಗ್ಗಡೆ ಅವರು ಭಾನುವಾರ ಸಂಜೆ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಭೇಟಿ ವೇಳೆ ವೀರೇಂದ್ರ ಹೆಗ್ಗಡೆ ಅವರು ಕಳುಹಿಸಿರುವ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಪ್ರಸಾದವನ್ನು ಸಚಿವೆ ಹೆಬ್ಬಾಳ್ಕರ್‌ಗೆ ಸುರೇಂದ್ರ ಹೆಗ್ಗಡೆ ಅವರು ನೀಡಿದರು.

Laxmi Hebbalkar 3

ಈ ಸುದ್ದಿಯನ್ನೂ ಓದಿ | Delhi Tragedy: ಕಾರು ದುರಂತ; ಹಸೆಮಣೆ ಏರಬೇಕಿದ್ದವನು ಹೆಣವಾಗಿ ಮನೆಗೆ ಬಂದ

ಆಸ್ಪತ್ರೆಗೆ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಭೇಟಿ

ರಸ್ತೆ ಅಪಘಾತದಲ್ಲಿ ಗಾಯಗೊಂಡು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯವನ್ನು ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ವಿಚಾರಿಸಿದರು.

ಆಸ್ಪತ್ರೆಗೆ ಶನಿವಾರ ಭೇಟಿ ನೀಡಿ, ಆದಷ್ಟು ಬೇಗನೇ ಗುಣಮುಖರಾಗಿ ಮತ್ತೆ ಜನರ ಸೇವೆಗೆ ಅಣಿಯಾಗುವಂತೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸ್ವಾಮೀಜಿ ಆಶೀರ್ವದಿಸಿದರು. ಇದೇ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಆಸ್ಪತ್ರೆಗೆ ತೆರಳಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅರೋಗ್ಯ ವಿಚಾರಿಸಿ, ಧೈರ್ಯ ತುಂಬಿದರು.