ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Child Marriage: ಬಾಲಕಿಯನ್ನು ವಿವಾಹವಾದ ಗ್ರಾಪಂ ಅಧ್ಯಕ್ಷನ ವಿರುದ್ಧ ಕಾನೂನು ಕ್ರಮ: ಲಕ್ಷ್ಮಿ ಹೆಬ್ಬಾಳ್ಕರ್

Laxmi Hebbalkar: ಗ್ರಾಮ ಪಂಚಾಯಿತಿ ಅಧ್ಯಕ್ಷ 15 ವರ್ಷದ ಬಾಲಕಿಯನ್ನು ವಿವಾಹವಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪೂರ ಗ್ರಾಮದಲ್ಲಿ ನಡೆದಿದೆ. ಬಸ್ಸಾಪುರ ಗ್ರಾಪಂ ಅಧ್ಯಕ್ಷ ‌ಭೀಮಶಿ ಅಪ್ಪಯ್ಯ ಕಳ್ಳಿಮಣಿ ಎಂಬಾತನಿಂದ ಈ ಕೃತ್ಯ ನಡೆದಿದೆ. ಬಾಲ್ಯ ವಿವಾಹ ಮಾಡಿಕೊಂಡ ಗ್ರಾಪಂ ಅಧ್ಯಕ್ಷ ಭೀಮಶಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಬಾಲಕಿಯನ್ನು ವಿವಾಹವಾದ ಗ್ರಾಪಂ ಅಧ್ಯಕ್ಷನ ವಿರುದ್ಧ ಕಾನೂನು ಕ್ರಮ

-

Prabhakara R Prabhakara R Aug 31, 2025 3:45 PM

ಬೆಳಗಾವಿ: ಹುಕ್ಕೇರಿ ತಾಲೂಕಿನ ಬಸಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ, ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ವಿವಾಹವಾಗಿರುವ ಪ್ರಕರಣವನ್ನು (Child Marriage) ಗಂಭೀರವಾಗಿ ಪರಿಗಣಿಸಲಾಗಿದೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಮೂಲಕ ಈಗಾಗಲೆ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಕಾನೂನು ಕ್ರಮ ಮುಂದುವರಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಏನಿದು ಪ್ರಕರಣ?

ಗ್ರಾಮ ಪಂಚಾಯಿತಿ ಅಧ್ಯಕ್ಷ 15 ವರ್ಷದ ಬಾಲಕಿಯನ್ನು ವಿವಾಹವಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪೂರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬಸ್ಸಾಪುರ ಗ್ರಾಪಂ ಅಧ್ಯಕ್ಷ ‌ಭೀಮಶಿ ಅಪ್ಪಯ್ಯ ಕಳ್ಳಿಮಣಿ ಎಂಬಾತನಿಂದ ಈ ಕೃತ್ಯ ನಡೆದಿದೆ. ಬಾಲ್ಯ ವಿವಾಹ ಮಾಡಿಕೊಂಡ ಗ್ರಾಪಂ ಅಧ್ಯಕ್ಷ ಭೀಮಶಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಹುಕ್ಕೇರಿ ತಾಲೂಕಿನ ಯಮಕನಮರಡಿ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.‌ 2023 ನವೆಂಬರ್ 5 ರಂದು ಅಪ್ರಾಪ್ತೆ ಜತೆಗೆ ಭೀಮಶಿ ಕಾಲಿಮಣಿ ವಿವಾಹವಾಗಿದ್ದ. ಬಂಧನದ ಭೀತಿಯಿಂದ ತಪ್ಪಿಸಿಕೊಳ್ಳಲು ಗ್ರಾಪಂ ಅಧ್ಯಕ್ಷ ಭೀಮಶಿ ಕಳ್ಳಾಟ ನಡೆಸುತ್ತಿದ್ದಾನೆ‌. ದೂರು ಬಂದ ತಕ್ಷಣವೇ ಬಸ್ಸಾಪುರ ಗ್ರಾಮಕ್ಕೆ ನಾಲ್ಕು ಸಲ ಮಕ್ಕಳ ರಕ್ಷಣಾ ತಂಡ ಹೋಗಿದೆ.

ಜಿಲ್ಲಾ ‌ಮಕ್ಕಳ ರಕ್ಷಣಾಧಿಕಾರಿ ಡಾ. ಪ್ರವೀಣ ನೇತೃತ್ವದ ತಂಡ ನಾಲ್ಕು ಸಲ ಬಸ್ಸಾಪುರಕ್ಕೆ ಭೇಟಿ ನೀಡಿದೆ. ಆದ್ರೂ ಕೂಡಾ ಬಾಲಕಿ ಪತ್ತೆ ಹಚ್ಚಲು ಮಕ್ಕಳ ರಕ್ಷಣಾ ‌ತಂಡ ವಿಫಲವಾಗಿದೆ. ಈ ಮಧ್ಯೆಯೇ ಆಕೆ ಪ್ರಾಪ್ತ ವಯಸ್ಸಿನವಳು ಎಂಬ ಅಧ್ಯಕ್ಷ ದಾಖಲೆ ಬಿಡುಗಡೆ ಮಾಡಿದ್ದ.

ಈ ಸುದ್ದಿಯನ್ನೂ ಓದಿ | POCSO Case: ಅಪ್ರಾಪ್ತ ಬಾಲಕಿಯನ್ನು ವರಿಸಿದ ಗ್ರಾ.ಪಂ ಅಧ್ಯಕ್ಷ; ಪೋಕ್ಸೋ ಪ್ರಕರಣ ದಾಖಲು

ಅಧ್ಯಕ್ಷ ಭೀಮಶಿ ಬಂಧನದ ಭೀತಿಯಿಂದ ‌ಪತ್ನಿಯ ನಕಲಿ ಜನನ ಪ್ರಮಾಣ ಪತ್ರ ವೈರಲ್ ಮಾಡಿದ್ದ? ಶಾಲಾ‌ ಟ್ರಾನ್ಸ್‌ಫರ್‌ ಸರ್ಟಿಫಿಕೇಟ್ ಜೊತೆಗೆ ಹೊಸ ಜನನ ಪ್ರಮಾಣದ ‌ದಾಖಲೆ‌ ಹೋಲಿಕೆ ಮಾಡಿದ ಅಧಿಕಾರಿಗಳು ಈ ವೇಳೆ ಗ್ರಾಪಂ ಅಧ್ಯಕ್ಷ ‌ಭೀಮಶಿ ಬಾಲ್ಯ ವಿವಾಹ ಆಗಿರುವುದು ದೃಢವಾಗಿದೆ. ಕೃತ್ಯ‌ ಎಸಗಿರುವುದು ದೃಢವಾದ ಹಿನ್ನೆಲೆಯಲ್ಲಿ ಗ್ರಾಪಂ ‌ಅಧ್ಯಕ್ಷನ‌ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.