ಬೆಳಗಾವಿ, ಏ.11: ಬೆಳಗಾವಿ (Belagavi) ನಗರದ ನಗರಾಭಿವೃದ್ಧಿ ಕೋಶದ ಎಇಇ ಮನೆ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ನಡೆಸಿದ್ದು, ಕೋಟ್ಯಂತರ ರೂಪಾಯಿ ಅಕ್ರಮ ಆಸ್ತಿ ಪತ್ತೆಯಾಗಿದೆ. ಲೋಕಾಯುಕ್ತ ದಾಳಿಯಲ್ಲಿ ಒಟ್ಟು 14 ಕೋಟಿಗೂ ಹೆಚ್ಚು ಅಕ್ರಮ ಆಸ್ತಿ ಪತ್ತೆಯಾಗಿದ್ದು, ಸ್ವತಹ ಅಧಿಕಾರಿಗಳೇ ಅಕ್ರಮ ಆಸ್ತಿ ಕಂಡು ತಬ್ಬಿಬ್ಬಾಗಿದ್ದಾರೆ.
ಬೆಳಗಾವಿ ನಗರದ ಆಂಜನೇಯ ನಗರ ಸೇರಿದಂತೆ ಏಳು ಕಡೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. DUDC ಎಇಇ ಅಜಯಸಿಂಗ್ ರಜಪೂತ ಮನೆಯ ಮೇಲೆ ದಾಳಿ ಮಾಡಲಾಗಿತ್ತು. ಬೆಳಗಾವಿಯಲ್ಲಿ ಮೂರು ಮನೆ, ಕಚೇರಿ, ಬ್ಯಾಂಕ್ ಲಾಕರ್ ಪರಿಶೀಲನೆ ನಡೆಸಿದ ವೇಳೆ ಸವದತ್ತಿ, ಹುಕ್ಕೇರಿ, ಹುಬ್ಬಳ್ಳಿಯಲ್ಲಿ 18 ನಿವೇಶನ ಪತ್ತೆಯಾಗಿದ್ದರೆ ಮನೆಯಲ್ಲಿ 5.96 ಕೆಜಿ ಮೌಲ್ಯದ ಚಿನ್ನ, 5 ಕೆಜಿ ಬೆಳ್ಳಿ, 3.12 ಕೋಟಿ ಡೆಪಾಸಿಟ್, ಐಷಾರಾಮಿ ಕಾರು, ಬೈಕ್‌ಗಳು ಪತ್ತೆಯಾಗಿವೆ.
ಅಜಯ್ ಸಿಂಗ್ ರಜಪೂತ ಅವರು ನಗರಾಭಿವೃದ್ಧಿ ಕೋಶದಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಸೇವೆಯಲ್ಲಿದ್ದುಕೊಂಡು ತಮ್ಮ ಆದಾಯಕ್ಕಿಂತ ಬಹಳ ಹೆಚ್ಚು ಆಸ್ತಿ ಗಳಿಸಿದ್ದಾರೆ ಎಂಬ ಆರೋಪವಿದೆ. ಲೋಕಾಯುಕ್ತರು ಈ ಬಗ್ಗೆ ದೂರು ಬಂದ ನಂತರ ತನಿಖೆ ಆರಂಭಿಸಿದ್ದರು. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಹಿನ್ನೆಲೆ ತನಿಖೆ ಮುಂದುವರಿದಿದ್ದು, ಬ್ಯಾಂಕ್ ಲಾಕರ್ ಪರಿಶೀಲನೆ ಬಾಕಿ ಇದೆ. ಲಾಕರ್ ಪರಿಶೀಲನೆ ವೇಳೆ ಮತ್ತಷ್ಟು ಅಕ್ರಮ ಆಸ್ತಿ ಪತ್ತೆ ಸಾಧ್ಯತೆ ಇದ್ದು, ಕಳೆದ ಬುಧವಾರ(ಏ.07) ಅಧಿಕಾರಿಯ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು.
Lokayukta Raid: ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ
ರಜಪೂತ ಅವರ ಆಸ್ತಿಗಳಲ್ಲಿ ಬೆಳಗಾವಿ ನಗರದ ಆಂಜನೇಯ ನಗರದ ಮೂರು ಮನೆಗಳು, ಸವದತ್ತಿ, ಹುಕ್ಕೇರಿ ಪ್ರದೇಶಗಳಲ್ಲಿ ನಿವೇಶನಗಳು, ಹುಬ್ಬಳ್ಳಿಯಲ್ಲಿ ಇನ್ನಷ್ಟು ಆಸ್ತಿ ಸೇರಿವೆ. ಒಟ್ಟು 14 ಕೋಟಿ ರೂಪಾಯಿ ಮೀರಿದ ಮೌಲ್ಯದ ಆಸ್ತಿ ಪತ್ತೆಯಾಗಿರುವುದು ದೊಡ್ಡ ಆಘಾತವನ್ನು ಉಂಟುಮಾಡಿದೆ. ಚಿನ್ನದ ಆಭರಣಗಳು, ಬೆಳ್ಳಿ ವಸ್ತುಗಳು, ಬ್ಯಾಂಕ್‌ನಲ್ಲಿ ದೊಡ್ಡ ಮೊತ್ತದ ಡೆಪಾಸಿಟ್ ಮತ್ತು ಐಷಾರಾಮಿ ವಾಹನಗಳು ಜಪ್ತಿಯಾಗಿವೆ.