ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕು ನೀಡುತ್ತಿರುವ ಮೋದಿಯವರ ದೂರದೃಷ್ಟಿಯ ನಾಯಕತ್ವ: ಡಾ. ಸೋನಾಲಿ ಸರ್ನೋಬತ್

2023ರಲ್ಲಿ ಸಂಸತ್ತಿನ ಅಂಗೀಕಾರ ಪಡೆದ ಈ ಕಾಯ್ದೆಯನ್ನು ಶೀಘ್ರ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸ ಸಂವಿಧಾನ ತಿದ್ದುಪಡಿ ಪ್ರಸ್ತಾವನೆಗೆ ಮುಂದಾಗಿರುವುದು ಮಹಿಳಾ ನಾಯಕತ್ವಕ್ಕೆ ಮತ್ತಷ್ಟು ಬಲ ನೀಡಲಿದೆ. ಮಹಿಳೆಯರಿಗೆ ಅಧಿಕಾರ ನೀಡುವ ಮಾತನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.

ಬೆಳಗಾವಿ: ಮಹಿಳೆಯರನ್ನು ಕೇವಲ ಮತದಾರರು ಮತ್ತು ರಾಜಕೀಯ ಕಾರ್ಯಕರ್ತೆಯರನ್ನಾಗಿ ನೋಡುವ ಮನೋಭಾವಕ್ಕೆ ತೆರೆ ಎಳೆದು, ದೇಶದ ಆಡಳಿತ ಹಾಗೂ ನೀತಿ ನಿರೂಪಣೆಯಲ್ಲಿಯೇ ನಿರ್ಣಾಯಕ ಪಾತ್ರ ವಹಿಸುವ ಅವಕಾಶ ಕಲ್ಪಿಸುವ ದೂರದೃಷ್ಟಿಯ ನಾಯಕತ್ವವನ್ನು ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕೆ ನೀಡಿದ್ದಾರೆ ಎಂದು ಬಿಜೆಪಿ ಮಹಿಳಾ ಮೋರ್ಚಾದ ನಾಯಕಿ ಡಾ.ಸೋನಾಲಿ ಸರ್ನೋಬತ್(Dr. Sonali Sarnobat) ಹೇಳಿದ್ದಾರೆ.

ಸಂಸತ್ತು ಮತ್ತು ರಾಜ್ಯಗಳ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಲ್ಪಿಸುವ ನಾರಿ ಶಕ್ತಿ ವಂದನ್ ಅಧಿನಿಯಮವು ಭಾರತೀಯ ಪ್ರಜಾಪ್ರಭುತ್ವದಲ್ಲಿ ಐತಿಹಾಸಿಕ ಬದಲಾವಣೆಗೆ ನಾಂದಿ ಹಾಡಲಿದೆ.

2023ರಲ್ಲಿ ಸಂಸತ್ತಿನ ಅಂಗೀಕಾರ ಪಡೆದ ಈ ಕಾಯ್ದೆಯನ್ನು ಶೀಘ್ರ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸ ಸಂವಿಧಾನ ತಿದ್ದುಪಡಿ ಪ್ರಸ್ತಾವನೆಗೆ ಮುಂದಾಗಿರುವುದು ಮಹಿಳಾ ನಾಯಕತ್ವಕ್ಕೆ ಮತ್ತಷ್ಟು ಬಲ ನೀಡಲಿದೆ. ಮಹಿಳೆಯರಿಗೆ ಅಧಿಕಾರ ನೀಡುವ ಮಾತನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Dr. Sonali Sarnobat on Budget: ಕರ್ನಾಟಕ ರಾಜ್ಯ ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲ: ಡಾ.ಸೋನಾಲಿ ಸರ್ನೋಬತ

ಮಹಿಳಾ ಮೀಸಲಾತಿಯ ಅನುಷ್ಠಾನಕ್ಕೆ ಪೂರಕವಾಗಿ ಕೇಂದ್ರ ಸಚಿವ ಸಂಪುಟವು ನವೆಂಬರ್ 27ರಂದು ಅನುಮೋದಿಸಿರುವ ಹೊಸ ಪ್ರಸ್ತಾವನೆಯಲ್ಲಿ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆ ಗಳ ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ ಬಲಕ್ಕಿಂತ ಶೇ. 50ರಷ್ಟು ಹೆಚ್ಚಿಸುವ ಅಂಶವಿದೆ. ಲೋಕಸಭೆಯ ಗರಿಷ್ಠ ಸದಸ್ಯಬಲವನ್ನು 850ಕ್ಕೆ ಹಾಗೂ ರಾಜ್ಯ ವಿಧಾನಸಭೆಗಳ ಗರಿಷ್ಠ ಸದಸ್ಯಬಲವನ್ನು 650ಕ್ಕೆ ಹೆಚ್ಚಿಸುವ ಉದ್ದೇಶವೂ ಪ್ರಸ್ತಾವನೆಯಲ್ಲಿದೆ. ನವೆಂಬರ್ 30ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಈ ಸಂಬಂಧದ ಮಸೂದೆಗಳನ್ನು ಮಂಡಿಸಲು ಉದ್ದೇಶಿಸಿರುವುದು ಮಹಿಳಾ ರಾಜಕೀಯ ಪ್ರಾತಿನಿಧ್ಯದ ಹಾದಿಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

ಇದುವರೆಗೆ ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ಉದ್ಯಮ, ಕ್ರೀಡೆ, ರಕ್ಷಣಾ ಮತ್ತು ಆಡಳಿತ ಕ್ಷೇತ್ರಗಳಲ್ಲಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಿರುವ ಮಹಿಳೆಯರಿಗೆ ಇದೀಗ ಶಾಸನ ರಚನೆಯಲ್ಲಿಯೂ ಸಮಾನ ಅವಕಾಶ ಕಲ್ಪಿಸುವ ಅಗತ್ಯವಿದೆ. ಶೇ. 33ರಷ್ಟು ಮೀಸಲಾತಿ ಜಾರಿಯಾದರೆ ಮಹಿಳೆಯರ ಸಮಸ್ಯೆ ಗಳು, ಆರೋಗ್ಯ, ಶಿಕ್ಷಣ, ಸುರಕ್ಷತೆ, ಉದ್ಯೋಗ ಮತ್ತು ಆರ್ಥಿಕ ಸ್ವಾವಲಂಬನೆಗೆ ಸಂಬಂಧಿಸಿದ ವಿಚಾರಗಳು ಶಾಸನಸಭೆಗಳಲ್ಲಿ ಹೆಚ್ಚಿನ ಪ್ರಾತಿನಿಧ್ಯ ಪಡೆಯಲಿವೆ. ಇದರಿಂದ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಮಹಿಳೆಯರಿಗೆ ಹೊಸ ನಾಯಕತ್ವದ ಅವಕಾಶಗಳು ತೆರೆದುಕೊಳ್ಳಲಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

image

ಮಹಿಳಾ ಸಬಲೀಕರಣವೆಂದರೆ ಕೇವಲ ಯೋಜನೆಗಳ ಘೋಷಣೆಯಲ್ಲ; ಮಹಿಳೆಯರಿಗೆ ನಿರ್ಧಾರ ಕೈಗೊಳ್ಳುವ ಅಧಿಕಾರ, ಸಮಾನ ಅವಕಾಶ ಮತ್ತು ನಾಯಕತ್ವದ ಸ್ಥಾನಮಾನ ಕಲ್ಪಿಸುವುದಾಗಿದೆ. ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಾರಿಶಕ್ತಿಯನ್ನು ರಾಷ್ಟ್ರಶಕ್ತಿಯನ್ನಾಗಿ ರೂಪಿಸುವ ಪ್ರಯತ್ನ ವೇಗ ಪಡೆದುಕೊಂಡಿದೆ. ವಿಕಸಿತ ಭಾರತದ ನಿರ್ಮಾಣದಲ್ಲಿ ಮಹಿಳೆಯರು ಸಮಾನ ಪಾಲುದಾರರಾಗಬೇಕೆಂಬ ಈ ದೂರದೃಷ್ಟಿಯ ಉಪಕ್ರಮಕ್ಕೆ ಪ್ರತಿಯೊಬ್ಬರೂ ಬೆಂಬಲ ನೀಡಬೇಕು ಎಂದು ಡಾ. ಸೋನಾಲಿ ಸರ್ನೋಬತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

– ಡಾ. ಸೋನಾಲಿ ಸರ್ನೋಬತ್ ಬಿಜೆಪಿ ಮಹಿಳಾ ಮೋರ್ಚಾ ಕರ್ನಾಟಕ