Physical abuse: ಸಾಂಗ್ಲಿಯಲ್ಲಿ ಬೆಳಗಾವಿಯ ವೈದ್ಯ ವಿದ್ಯಾರ್ಥಿನಿ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ; ಮತ್ತು ಬರುವ ಔಷಧ ನೀಡಿ ಕೃತ್ಯ!
Physical abuse: ಯುವತಿಗೆ ಪಾನೀಯದಲ್ಲಿ ಮತ್ತು ಬರಿಸುವ ಮಾತ್ರೆ ಕೊಟ್ಟು ಪ್ರಜ್ಞೆ ತಪ್ಪಿದ ನಂತರ ಮೂವರಿಂದ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಆರೋಪಿಗಳ ವಿರುದ್ಧ ಮಹಾರಾಷ್ಟ್ರದ ಸಾಂಗ್ಲಿಯ ವಿಶ್ರಂಬಾಗ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


ಸಾಂಗ್ಲಿ(ಮಹಾರಾಷ್ಟ್ರ): ಕುಡಿದ ಅಮಲಿನಲ್ಲಿ 22 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಮೇಲೆ ಇಬ್ಬರು ಸಹಪಾಠಿಗಳು ಹಾಗೂ ಒಬ್ಬ ಸ್ನೇಹಿತ ಅತ್ಯಾಚಾರ (Physical Abuse) ಎಸಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ. ಮೇ 18ರಂದು ಮಧ್ಯರಾತ್ರಿ ಸಿನಿಮಾ ನೋಡಲು ಯುವತಿ ತನ್ನ ಸ್ಮೇಹಿತರ ಜತೆ ತೆರಳಿದ್ದಳು. ನಂತರ ಯುವತಿಯನ್ನು ಖಾಸಗಿ ಫ್ಯಾಟ್‌ಗೆ ಕರೆದೊಯ್ದಿದ್ದಾರೆ. ಈ ಸಂದರ್ಭದಲ್ಲಿ ಯುವತಿಗೆ ಪಾನೀಯದಲ್ಲಿ ಮತ್ತು ಬರಿಸುವ ಮಾತ್ರೆ ಕೊಟ್ಟು ಪ್ರಜ್ಞೆ ತಪ್ಪಿದ ನಂತರ ಮೂವರಿಂದ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಪ್ರಜ್ಞೆ ಬಂದ ನಂತರ ಯುವತಿ ಬೆಳಗಾವಿಯ ತಮ್ಮ ಮನೆಯವರಿಗೆ ಘಟನೆ ಕುರಿತು ವಿವರಿಸಿದ ನಂತರದಲ್ಲಿ ಸಾಂಗ್ಲಿಯ ವಿಶ್ರಂಬಾಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪುಣೆ, ಸೋಲಾಪುರ ಮತ್ತು ಸಾಂಗ್ಲಿ ಮೂಲದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಮೇ 27ರ ವರೆಗೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.