ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Physical Abuse: ಬೆಳಗಾವಿಯಲ್ಲಿ 14 ವರ್ಷದ ಬಾಲಕಿ ಮೇಲೆ ಮೂವರಿಂದ ಸಾಮೂಹಿಕ ಅತ್ಯಾಚಾರ; ಪ್ರಕರಣ ದಾಖಲು

Physical Abuse: ಬೆಳಗಾವಿ ನಗರದ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸದ ಪೊಲೀಸರ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್ ಆಕ್ರೋಶ ಹೊರಹಾಕಿದ್ದರು. ಇದೀಗ ಘಟನೆ ಕುರಿತಂತೆ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಳಗಾವಿಯಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

Profile Prabhakara R May 13, 2025 9:49 PM

ಬೆಳಗಾವಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರ (Physical Abuse) ಎಸಗಿರುವ ಘಟನೆ ಬೆಳಗಾವಿ ನಗರದ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ನಡೆದರೂ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸದ ಪೊಲೀಸರ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್ ಆಕ್ರೋಶ ಹೊರಹಾಕಿದ್ದರು. ಸದ್ಯ ಈ ಘಟನೆ ಕುರಿತಂತೆ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | Pahalgam Terror Attack: ಪಹಲ್ಗಾಮ್‌ ಉಗ್ರರ ದಾಳಿ ರೂವಾರಿ ಶಹೀದ್‌ ಕುಟ್ಟೆ ಎನ್‌ಕೌಂಟರ್‌

ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿ ಮನೆ ಮೇಲೆ ದಾಳಿ; ಸುಳ್ಳು ಸುದ್ದಿ ಹಬ್ಬಿಸಿದ ಯುವಕ!

Colonel Sofia Qureshi

ಬೆಳಗಾವಿ: ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಇತ್ತೀಚೆಗೆ ನಡೆಸಿದ್ದ ಆಪರೇಷನ್ ಸಿಂದೂರ ಕಾರ್ಯಾಚರಣೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ‌ (Sofia Qureshi) ಅವರ ಮನೆ ಮೇಲೆ, ಆರ್‌ಎಸ್‌ಎಸ್ ಕಾರ್ಯಕರ್ತರು ದಾಳಿ ಮಾಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ, ಇದು ಸುಳ್ಳು ಸುದ್ದಿಯಾಗಿದ್ದು, ಇಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಬೆಳಗಾವಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಕಿಡಿಗೇಡಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುವುದು ಕಂಡುಬಂದಿದೆ. ಅನಿಸ್ ಉದ್ದೀನ್ ಎಂಬಾತ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಸೇನಾಧಿಕಾರಿ ಸೋಫಿಯಾ ಖುರೇಷಿ ಅವರ ಗೋಕಾಕ್ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿರುವ ಪತಿ‌ ಮನೆ ಮೇಲೆ ದಾಳಿ ಮಾಡಲಾಗಿದೆ ಎಂದು ಹಳೆ ಪೋಟೋ ಒಂದನ್ನು ಸೇರಿಸಿ ಸುಳ್ಳು ಸುದ್ದಿ ಹಬ್ಬಿಸಿದ್ದಾನೆ. ಅಷ್ಟೇ ಅಲ್ಲದೆ ದಾಳಿಕೋರರಿಂದ ತಪ್ಪಿಸಿಕೊಳ್ಳಲು ಖುರೇಷಿ ಕುಟುಂಬವನ್ನು ದೆಹಲಿಗೆ ಸ್ಥಳಾಂತರ ಮಾಡಲಾಗಿದೆ ಎಂದು ಸಾಮಾಜಿಕ‌ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ.‌

ಈ ಕುರಿತು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೆದ್ ಅವರು ಪ್ರತಿಕ್ರಿಯಿಸಿ, ಈ ರೀತಿಯಲ್ಲಿ ಯಾವುದೇ ಘಟನೆ ನಡೆದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದ್ದು, ಸಾರ್ವಜನಿಕರು ಕಿವಿಗೊಡಬಾರದು ಎಂದು ಸ್ಪಷ್ಟಪಡಿಸಿದ್ದಾರೆ‌.

ಬೆಳಗಾವಿ ಸೊಸೆ ಸೋಫಿಯಾ ಖುರೇಷಿ

ಆಪರೇಷನ್ ಸಿಂದೂರ ಮಹತ್ವದ ದಾಳಿ ಕುರಿತು ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ್ದ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರ ಪತಿ ಕರ್ನಲ್ ತಾಜುದ್ದೀನ್ ಬಾಗೇವಾಡಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದವರು. ಇದೇ ವಿಚಾರವಾಗಿ ಮುಸ್ಲಿಂ ಯುವಕ, ಮಹಿಳಾ ಸೇನಾಧಿಕಾರಿ ಅವರ ಮನೆ ಮೇಲೆ ದಾಳಿಯಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸುವ ಕೆಲಸ ಮಾಡಿದ್ದಾನೆ.